ನಾವು ಅಯೋಧ್ಯೆ ರಾಮ ಮಂದಿರದ ಪರ: ಸಿಎಂ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ!

| Updated By: Ganapathi Sharma

Updated on: Jan 01, 2024 | 11:15 AM

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಕೇಂದ್ರದ ಬಿಜೆಪಿ ಸರ್ಕಾರ ರಾಮಮಂದಿರ ಉದ್ಘಾಟನೆಯನ್ನು ಬಳಸಿಕೊಂಡಿದೆ. ರಾಮ ಮಂದಿರ ಉದ್ಘಾಟನೆ ಒಂದು ಸ್ಟಂಟ್ ಅಷ್ಟೇ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ಆರೋಪಿಸಿದ ಬೆನ್ನಲ್ಲೇ ಅವರು ರಾಮ ಮಂದಿರದ ಪರ ಹೇಳಿಕೆ ನೀಡಿದ್ದಾರೆ.

ನಾವು ಅಯೋಧ್ಯೆ ರಾಮ ಮಂದಿರದ ಪರ: ಸಿಎಂ ಸಿದ್ದರಾಮಯ್ಯ ಹೀಗೆನ್ನಲು ಕಾರಣವಿದೆ!
ಸಿದ್ದರಾಮಯ್ಯ
Follow us on

ಬೆಂಗಳೂರು, ಜನವರಿ 1: ಅಯೋಧ್ಯೆ ರಾಮಮಂದಿರ (Ayodhya Ram Mandir) ಉದ್ಘಾಟನೆ ವಿಚಾರವನ್ನು ಬಿಜೆಪಿ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಹಲವು ವಿರೋಧ ಪಕ್ಷದ ನಾಯಕರು ಆರೋಪಿಸಿರುವ ಬೆನ್ನಲ್ಲೇ, ‘ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ’ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ. ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ನಮ್ಮ ವಿರೋಧವಿಲ್ಲ. ಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ನಾವು ರಾಮಮಂದಿರದ ಪರವಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಕೇಂದ್ರದ ಬಿಜೆಪಿ ಸರ್ಕಾರ ರಾಮಮಂದಿರ ಉದ್ಘಾಟನೆಯನ್ನು ಬಳಸಿಕೊಂಡಿದೆ. ರಾಮ ಮಂದಿರ ಉದ್ಘಾಟನೆ ಒಂದು ಸ್ಟಂಟ್ ಅಷ್ಟೇ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ಆರೋಪಿಸಿದ ಬೆನ್ನಲ್ಲೇ ಅವರು ರಾಮ ಮಂದಿರದ ಪರ ಹೇಳಿಕೆ ನೀಡಿದ್ದಾರೆ.

ಪುಲ್ವಾಮಾ ಭಯೋತ್ಪಾದಕ ದಾಳಿ ಸಂದರ್ಭವನ್ನು ನೆನಪಿಸಿಕೊಂಡಿದ್ದ ಕರ್ನಾಟಕ ಸಚಿವ ಸುಧಾಕರ್, ಕಳೆದ ಲೋಕಸಭೆ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ಭಯೋತ್ಪಾದನಾ ದಾಳಿಯನ್ನು ಬಳಸಿಕೊಂಡಿತ್ತು. ಇದೀಗ ಭಗವಾನ್ ರಾಮನ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದರು. ಮತ್ತೊಬ್ಬ ಸಚಿವ ಪ್ರಿಯಾಂಕ್ ಖರ್ಗೆ ಸಹ ರಾಮ ಮಂದಿರ ವಿಚಾರವಾಗಿ ಟೀಕೆ ಮಾಡಿದ್ದರು. ಈ ವಿಚಾರ ರಾಜಕೀಯವಾಗಿ ನಕಾರಾತ್ಮಕ ಪರಿಣಾಮ ಉಂಟು ಮಾಡುವ ಸಾಧ್ಯತೆ ಇದೆ ಎಂಬ ಸುಳಿಸುವ ಸಿಕ್ಕ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಡ್ಯಾಮೇಜ್ ಕಂಟ್ರೋಲ್​​ಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ ರೇಪ್​​ ಕೇಸ್​: ಬಂಧಿತ ಮುಫ್ತಿ ಗುಲಾಮ ಜಿಲಾನಿ ಅಜಹರಿ ಭಾರತದವನೇ ಅಲ್ಲ; ತನಿಖೆ ವೇಳೆ ಹಲವು ಅಂಶ ಬಯಲು

ಉದ್ಘಾಟನೆಗೆ ಆಹ್ವಾನ ಬಂದಿಲ್ಲ: ಸಿದ್ದರಾಮಯ್ಯ

ಈ ಮಧ್ಯೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿಲ್ಲ, ಆಹ್ವಾನ ಬಂದರೆ ಆಮೇಲೆ ನೋಡೋಣ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ