Nandini milk Price: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ, ಮಹತ್ವದ ನಿರ್ಧಾರ ಸಾಧ್ಯತೆ

|

Updated on: Mar 24, 2025 | 10:43 AM

CM Siddaramaiah Meeting with KMF: ಮೆಟ್ರೋ, ಬಸ್, ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಮತ್ತೊಂದು ಆಘಾತ ನೀಡಲು ಕರ್ನಾಟಕ ಸರ್ಕಾರ ಸಿದ್ಧವಾಗಿದೆ. ನಂದಿನಿ ಹಾಲಿನ ಬೆಲೆ 5 ರೂ. ಹೆಚ್ಚಳ ಮಾಡುವ ಪ್ರಸ್ತಾವ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರ ಜತೆ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಪ್ರಕಟವಾಗುವ ಸಾಧ್ಯತೆ ಇದೆ.

Nandini milk Price: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ, ಮಹತ್ವದ ನಿರ್ಧಾರ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಮಾರ್ಚ್ 24: ನಂದಿನಿ ಹಾಲಿನ ದರ (Nandini milk Prce) ಏರಿಕೆ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಫ್​​ (KMF) ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರ ಜತೆ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ವಿಚಾರವಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯೂ ಇದೆ.

ಪಶು ಆಹಾರ, ಮೇವು, ಕೂಲಿ ಹಾಗೂ ಇತರ ಖರ್ಚು ವಚ್ಚಗಳು ಹೆಚ್ಚಾಗಿದೆ. ಹೀಗಾಗಿ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿಯಂತೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕದ ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರು ಪಶುಸಂಗೋಪನೆ ಸಚಿವ ವೆಂಕಟೇಶ್‌ಗೆ ಮನವಿ ಮಾಡಿದ್ದರು. ಹೀಗಾಗಿ ಹಾಲಿನ ದರ ಹೆಚ್ಚಳ ಪ್ರಸ್ತಾವ ಸಿದ್ಧಪಡಿಸಲಾಗಿತ್ತು. ಆದರೆ, ಈ ಪ್ರಸ್ತಾವನೆಗೆ ಸರ್ಕಾರದಿಂದ ಅನುಮತಿ ದೊರೆಯಬೇಕಿದೆ ಎನ್ನಲಾಗಿದೆ.

ಹಾಲಿನ ದರ ಹೆಚ್ಚಳ ಕುರಿತ ಸಭೆಯಲ್ಲಿ ಯಾರೆಲ್ಲ ಭಾಗಿ?

ಹಾಲಿನ ದರ ಹೆಚ್ಚಳ ಸಂಬಂಧ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಶು ಸಂಗೋಪನೆ ಸಚಿವ ವೆಂಕಟೇಶ್, ಸಹಕಾರ ಸಚಿವ ಕೆಎನ್ ರಾಜಣ್ಣ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ವೇಳೆ ಹಾಲಿನ ದರ ಹೆಚ್ಚಳ ಸೇರಿ ಹೈನುಗಾರರಿಗೆ ಸಂಬಂಧಿಸಿದ ಇತರ ವಿಷಯಗಳೂ ಚರ್ಚೆಯಾಗಲಿವೆ. ಹಾಲಿನ ದರ ಏರಿಕೆ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯೂ ಇದೆ.

ಇದನ್ನೂ ಓದಿ
ಆಯಸ್ಸು ಮುಗಿದರೂ ಬದಲಾಗದ ತುಂಗಭದ್ರಾ ಡ್ಯಾಂ ಕ್ರೆಸ್ಟ್​ಗೇಟ್​ಗಳು!
ಕೋಳಿ, ಸಿಗರೇಟು, ಹೆಂಡ ನೈವೇದ್ಯ! ಕಾರವಾರದ ಖಾಪ್ರಿ ದೈವದ ಹಿನ್ನೆಲೆಯೇ ರೋಚಕ
ಬಾಗಲಕೋಟೆ: ಕುಸಿದ ಬಿಳಿಜೋಳದ ಬೆಲೆ, ರೈತರು ಕಂಗಾಲು
ಜಿಮ್ಸ್​ನಲ್ಲಿ ಆಕ್ಸಿಜನ್​ಗಾಗಿ ರೋಗಿಗಳ ನರಳಾಟ, ವಿಡಿಯೋ ವೈರಲ್

ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬಂಧಿಸಿದ ನಿಗಮಗಳ ಸಭೆ ಕರೆದು ಚರ್ಚೆ ಮಾಡಲಾಗಿದೆ. 5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಸರ್ಕಾರ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿ ಎಂದು ಕೆಲವು ದಿನಗಳ ಹಿಂದೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದರು.

ಇದನ್ನೂ ಓದಿ: ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ

ಹಾಲು ಉತ್ಪಾದಕರಿಗೆ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವ ಬಗ್ಗೆ ಸಚಿವ ಕೆ ವೆಂಕಟೇಶ್ ಕೆಲವು ದಿನಗಳ ಹಿಂದಷ್ಟೇ ಪರಿಷತ್ ಕಲಾಪದಲ್ಲಿ ಮಾಹಿತಿ ನೀಡಿದ್ದರು. ಆರ್ಥಿಕ ಇಲಾಖೆ ಹಣ ಬಿಡುಗಡೆ ಮಾಡಬೇಕಿದೆ. ಹಾಲು ಉತ್ಪಾದನೆ ಜಾಸ್ತಿ ಆಗುತ್ತಿದೆ, ಉತ್ಪಾದನೆಗೆ ತಕ್ಕಂತೆ ಅನುದಾನ ಹಂಚಿಕೆ ಇಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರ ನೆರವಿಗೆ ಧಾವಿಸಲಿದೆಯಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 am, Mon, 24 March 25