ಕಾವೇರಿ ನದಿ ನೀರು ವಿವಾದ: ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

| Updated By: ರಮೇಶ್ ಬಿ. ಜವಳಗೇರಾ

Updated on: Sep 20, 2023 | 7:34 AM

ಕಾವೇರಿ ನದಿ ನೀರಿ ವಿಚಾರಕ್ಕೆ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ತಮಿಳುನಾಡಿಗೆ ಕೌಂಟರ್ ಕೊಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿಯೇ ಸಿಎಂ ಸಿದ್ದರಾಮಯ್ಯ ಇಂದು (ಸೆಪ್ಟೆಂಬರ್ 20) ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ತಮಿಳುನಾಡಿಗೆ ಹೇಗೆ ಕೌಂಟರ್ ಕೊಡಬೇಕು ಎನ್ನುವುರ ಬಗ್ಗೆ ರಾಜ್ಯದ ಕೇಂದ್ರ ಸಚಿವರು ಹಾಗೂ ಸಂಸದರ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

ಕಾವೇರಿ ನದಿ ನೀರು ವಿವಾದ: ದೆಹಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ಸಿದ್ದರಾಮಯ್ಯ-ಡಿಕೆ ಶಿವಕುಮಾರ್
Follow us on

ನವದೆಹಲಿ/ಬೆಂಗಳೂರು, (ಸೆಪ್ಟೆಂಬರ್ 20): ಕರ್ನಾಟಕದಲ್ಲಿ(Karnataka) ಒಂದೆಡೆ ಬರ ಹಾಗೂ ಮತ್ತೊಂದೆಡೆ ಜೀವನದಿಗಳಲ್ಲಿ ನೀರಿಗೆ ಅಭಾವ ಎದುರಾಗಿದೆ. ಈ ನಡುವೆ ತಮಿಳುನಾಡಿಗೆ ಕಾವೇರಿ ನೀರನ್ನು(Cauvery Water Dispute) ಹರಿಸಲೇಬೇಕಾದ ಅನಿವಾರ್ಯತೆ ತಲೆದೋರಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಸೋಮವಾರ ಆದೇಶಿಸಿದೆ. ಇದರಿಂದಾಗಿ 15 ದಿನಗಳ ಕಾಲ ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರನ್ನು ಕರ್ನಾಟಕವು ತಮಿಳುನಾಡಿಗೆ ಹರಿಸಲೇಬೇಕಾಗಿದೆ. ಈಗಾಗಲೇ ನೀರಿನ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಸೆಪ್ಟೆಂಬರ್ 20) ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕದ ಎಲ್ಲಾ ಸಂಸದರು ಮತ್ತು ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್​ನಲ್ಲಿ ಸಭೆ ನಡೆಯಲಿದ್ದು, ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಮತ್ತು ಕೇಂದ್ರದ ಅನುಮತಿಗಾಗಿ ಕಾಯುತ್ತಿರುವ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಅಲ್ಲದೇ ರಾಜ್ಯದ ಕೇಂದ್ರ ಸಚಿವರು ಮತ್ತು ಎಲ್ಲಾ ಸಂಸದರೊಂದಿಗೆ ಉಪಾಹಾರ ಸಭೆ ನಡೆಸಲಿದ್ದಾರೆ. ಇದೆೇ ಸಂದರ್ಭದಲ್ಲಿ ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಗೆ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರನ್ನು ಒತ್ತಾಯಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Dam Water Level: ಸೆ.20ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಉನ್ನತ ಮೂಲಗಳ ಪ್ರಕಾರ ಕಾವೇರಿ ವಿಚಾರ ಕುರಿತು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಮುನ್ನ ಕಾನೂನು ತಜ್ಞರ ಜೊತೆ ದೆಹಲಿಯಲ್ಲಿಂದು ಇಂದು ಸಿಎಂ, ಡಿಸಿಎಂ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಸಭೆ ಬಳಿಕ ಕೇಂದ್ರ ಸಚಿವರನ್ನು ರಾಜ್ಯದ ನಿಯೋಗ ಭೇಟಿಯಾಗಲಿದ್ದು, ಈಗಾಗಲೇ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ. ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು, ನಿನ್ನೆ ಡಿಕೆ ಶಿವಕುಮಾರ್​ ಹಾಗೂ ಟಿಬಿ ಜಯಚಂದ್ರ ಸೇರಿಕೊಂಡು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:10 am, Wed, 20 September 23