AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿಪಡಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ

ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಲೆ ಕುಸಿತದಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು, ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿಪಡಿಸುವಂತೆ ಮನವಿ ಮಾಡಿದ್ದಾರೆ. ಇದರಿಂದ ರೈತರಿಗೆ ಆರ್ಥಿಕ ನೆರವು ದೊರೆಯಲಿದೆ.

ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿಪಡಿಸಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಮನವಿ
ಸಿಎಂ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on:Mar 11, 2025 | 1:57 PM

Share

ಬೆಂಗಳೂರು, ಮಾರ್ಚ್​ 11: ಕೆಂಪು ಮೆಣಸಿನಕಾಯಿಗೆ (Red chili pepper) ತುರ್ತಾಗಿ ಬೆಲೆ ಕೊರತೆ ಪಾವತಿ ಯೋಜನೆ (PDP) ದರ ನಿಗದಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್​ ಅವರಿಗೆ ಪತ್ರ ಬರೆದಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಾಗಿ ಕೆಂಪು ಮೆಣಸಿನಕಾಯಿ ಬೆಳೆಗಾರರಿದ್ದಾರೆ. ಕೆಂಪು ಮೆಣಸಿನಕಾಯಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕೂಡಲೇ ಕೆಂಪು ಮೆಣಸಿನಕಾಯಿಗೆ ಪಿಡಿಪಿ ದರ ನಿಗದಿ ಮಾಡಿ. ಇದರಿಂದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಏನಿದೆ?

ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಲಕ್ಷಾಂತರ ಕೆಂಪು ಮೆಣಸಿನಕಾಯಿ ರೈತರ ಪರಿಸ್ಥಿತಿ ಕಂಡು ತೀವ್ರ ಕಳವಳದಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಮಾರುಕಟ್ಟೆಯಲ್ಲಿ ಕೆಂಪು ಮೆಣಸಿನಕಾಯಿ ಬೆಲೆ ತೀವ್ರ ಕುಸಿತ ಕಂಡಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಆಂಧ್ರಪ್ರದೇಶದಲ್ಲಿ ಕೆಂಪು ಮೆಣಸಿನಕಾಯಿಗಳಿಗೆ (ಗುಂಟೂರು ಮೆಣಸಿನಕಾಯಿ) ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಭಾರತ ಸರ್ಕಾರ ನಿಗದಿಪಡಿಸಿದೆ. ಉತ್ಪಾದನೆಯ ಶೇ 25 ರಷ್ಟು ವರೆಗೆ ವ್ಯಾಪ್ತಿಯೊಂದಿಗೆ ಕ್ವಿಂಟಲ್‌ಗೆ 11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ (ಎಂಐಪಿ) ನಿಗದಿಪಡಿಸಿದೆ. ಇದು ಸ್ವಾಗತಾರ್ಹ ಹೆಜ್ಜೆಯಾಗಿದ್ದರೂ, ಕರ್ನಾಟಕದ ಕೆಂಪು ಮೆಣಸಿನಕಾಯಿ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಇನ್ನೂ ಪರಿಹರವಾಗಿಲ್ಲ.

ಕರ್ನಾಟಕದಲ್ಲಿ, ಗುಂಟೂರು ವಿಧದ ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ) ಬೆಳೆ ಬೆಳೆಯಲು ಕರ್ನಾಟಕ ಕೃಷಿ ದರ ಆಯೋಗದ ಕ್ವಿಂಟಲ್‌ಗೆ 12,675 ರೂ. ತಗಲುತ್ತೆ ಎಂದು ಅಂದಾಜಿಸಿದೆ. ಆದಾಗ್ಯೂ, ಸಿಂಧನೂರಿನಂತಹ ಪ್ರಮುಖ ಮಾರುಕಟ್ಟೆಗಳಲ್ಲಿ ರೈತರು ಕೆಂಪು ಮೆಣಸಿನಕಾಯಿಯನ್ನು ಕ್ವಿಂಟಲ್‌ಗೆ 28,300 ರೂ. ಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದು ಭಾರಿ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ.

ಇದನ್ನೂ ಓದಿ
Image
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದು 19ನೇ ಬಜೆಟ್ ಮಂಡಿಸಲಿದ್ದಾರೆ: ಯತೀಂದ್ರ
Image
ಕೃಷಿಕ, ಮಹಿಳೆ, ಯುವಕರನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ: ವಿಜಯೇಂದ್ರ
Image
ದೇವೇಗೌಡರಿಗೆ ಸಿದ್ದರಾಮಯ್ಯ ಒಮ್ಮೆಯಾದರೂ ಕೃತಜ್ಞತೆ ಸಲ್ಲಿಸಿದರೆ? ವಿಶ್ವನಾಥ
Image
ಹಲಾಲ್, ಮುಸ್ಲಿಂ ಬಜೆಟ್ ಎಂದು ಟೀಕಿಸಿದವರಿಗೆ ಖಡಕ್ ತಿರುಗೇಟು ಕೊಟ್ಟ ಸಿಎಂ

ಇದನ್ನೂ ಓದಿ: ದಾಖಲೆಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳೋದನ್ನೊಮ್ಮೆ ಕೇಳಬೇಕು!

ದೇಶದ ಅತ್ಯಂತ ಹಿಂದುಳಿದ ಮತ್ತು ಬರ ಪೀಡಿತ ಪ್ರದೇಶಗಳಲ್ಲಿ ಒಂದಾದ ಕಲ್ಯಾಣ ಕರ್ನಾಟಕ ಪ್ರದೇಶವು ಕೆಂಪು ಮೆಣಸಿನಕಾಯಿ ಕೃಷಿಯನ್ನು ಅವಲಂಬಿಸಿರುವ ಸಾವಿರಾರು ಸಣ್ಣ ಮತ್ತು ಅತಿಸಣ್ಣ ರೈತರ ನೆಲೆಯಾಗಿದೆ. ಅವರ ಸ್ಥಿತಿಯನ್ನು ನಿರಂತರವಾಗಿ ನಿರ್ಲಕ್ಷಿಸುವುದರಿಂದ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತದೆ ಮತ್ತು ಅನೇಕ ರೈತರನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದಂತಾಗುತ್ತದೆ. ಆದ್ದರಿಂದ, ಕೇಂದ್ರ ಸರ್ಕಾರವು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿಯಲ್ಲಿ ಪಿಡಿಪಿಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Tue, 11 March 25