Karnataka Rain: ಮಳೆಯಿಂದ ಆಗುವ ಅನಾಹುತ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಯಡಿಯೂರಪ್ಪ ಸೂಚನೆ

ಪ್ರವಾಹದ ಹಿನ್ನೆಲೆಯಲ್ಲಿ ಸ್ಥಳಾಂತರಿಸಿದ ಕೆಲವು ಗ್ರಾಮಗಳಿಗೆ ಗ್ರಾಮಸ್ಥರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಈ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ, ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಜಿಲ್ಲಾಡಳಿತಗಳ ಜತೆಗಿನ ಸಭೆಯಲ್ಲಿ ಸೂಚನೆ ನೀಡಿದರು.

Karnataka Rain: ಮಳೆಯಿಂದ ಆಗುವ ಅನಾಹುತ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಸಿಎಂ ಯಡಿಯೂರಪ್ಪ ಸೂಚನೆ
ಬಿ ಎಸ್ ಯಡಿಯೂರಪ್ಪ
Follow us
TV9 Web
| Updated By: Digi Tech Desk

Updated on:Nov 23, 2022 | 11:50 AM

ಬೆಂಗಳೂರು: ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಮಳೆಯಿಂದ ಆಗುವ ಅನಾಹುತ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಮುಳುಗಡೆಯಾಗುವ ಸ್ಥಳಗಳನ್ನು ಈಗಾಗಲೇ ಗುರುತಿಸಿಸಲಾಗಿದ್ದು, ನದಿ ಪಾತ್ರದ ಜನತೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುವುದು. 20 ಜಿಲ್ಲೆಗಳ ಡಿಸಿ, ಜಿಲ್ಲಾ‌ ಉಸ್ತುವಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್​ ನಡೆಸಿ ಮಾಹಿತಿ ಪಡೆಯಲಾಗಿದೆ. ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡುವುದಾಗಿ ಘೋಷಿಸಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಈ ವರ್ಷ ಮುಂಗಾರು ಬೇಗ ಆರಂಭ ಆಗಿದೆ. ಕೆರೆ ಕಟ್ಟೆಗಳು ತುಂಬುವ ಹಂತದಲ್ಲಿವೆ. ಬಿತ್ತನೆ ಕಾರ್ಯ ಆಗುತ್ತಿದೆ. ಮುಂದಾಗುವ ಅನಾಹುತಗಳ ತಪ್ಪಿಸುವಂತೆ ಎಚ್ಚರಿಕೆ ನೀಡಿದ್ದೇವೆ. ಮುಳುಗಡೆ ಪ್ರದೇಶದಲ್ಲಿರುವವರನ್ನು ಸ್ಥಳಾಂತರ ಮಾಡೋಕೆ ಸೂಚಿಸಿದ್ದೇನೆ. ಎನ್‌ಡಿಆರ್‌ಎಫ್, ಹೆಲಿಕಾಪ್ಟರ್ ವ್ಯವಸ್ಥೆಯನ್ನು ಮಾಡಿ ಕೊಟ್ಟಿರುವ ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಜಿಲ್ಲೆ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಸಹಾಯವಾಣಿ ಸ್ಥಾಪನೆ, ದೂರವಾಣಿ ಮತ್ತಿತರ ಸಂಪರ್ಕ ಸಾಧನಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಬೇಕು. ತುರ್ತು ನಿರ್ವಹಣೆಗೆ ಬೇಕಾದ ಸಾಮಗ್ರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಖರೀದಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಮೂಲಸೌಕರ್ಯಗಳುಳ್ಳ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರವಾಹ ನಿರ್ವಹಣೆಗಾಗಿ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ ಹಾಗೂ ಸ್ಥಳೀಯ ಸಂಘಸಂಸ್ಥೆಗಳು, ಸ್ವಯಂ ಸೇವಕರ ಸಹಕಾರವನ್ನು ಪಡೆದುಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಹದ ಪರಿಣಾಮ ಅತ್ಯಂತ ಕಡಿಮೆಯಾಗುವಂತೆ ಕಾರ್ಯ ನಿರ್ವಹಿಸಬೇಕು

ಪ್ರವಾಹದ ಹಿನ್ನೆಲೆಯಲ್ಲಿ ಸ್ಥಳಾಂತರಿಸಿದ ಕೆಲವು ಗ್ರಾಮಗಳಿಗೆ ಗ್ರಾಮಸ್ಥರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಈ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಿ, ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಜಿಲ್ಲಾಡಳಿತಗಳ ಜತೆಗಿನ ಸಭೆಯಲ್ಲಿ ಸೂಚನೆ ನೀಡಿದರು.

ಎರಡನೇ ಹಂತದ ಅನ್ ಲಾಕ್ ವಿಚಾರವಾಗಿ ಇಂದಿನ ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು. ಯಾವುದಕ್ಕೆಲ್ಲಾ ವಿನಾಯಿತಿ ಕೊಡಬೇಕು ಎಂದು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಪ್ರವಾಹ ಪರಿಸ್ಥಿತಿ ಎದುರಿಸಲು ಸೂಚನೆ ಮಂಡ್ಯ ಹೊರತುಪಡಿಸಿದರೆ ಎಲ್ಲ ಕಡೆ ಉತ್ತಮ ಮಳೆಯಾಗಿದೆ. 2-3 ತಿಂಗಳಲ್ಲಿ ಜಲಾಶಯಗಳು ತುಂಬವಂತೆ ಮಳೆ ಆಗುತ್ತಿದೆ. ಪ್ರವಾಹ ಎದುರಾಗುವ ಪ್ರದೇಶಗಳಿಂದ ಜನರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಲಾಗಿದ್ದು, ಇದಕ್ಕಾಗಿ ಕಲ್ಯಾಣ ಮಂಟಪಗಳನ್ನು ಕೂಡ ಬುಕ್ ಮಾಡಿದ್ದೇವೆ. ನಿರಾಶ್ರಿತರಿಗಾಗಿ ಎಲ್ಲ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಗಂಜಿ ಕೇಂದ್ರಗಳಲ್ಲಿ ಉತ್ತಮ ತಿಂಡಿ, ಊಟ, ರಾತ್ರಿ ಊಟ ಕೊಡ್ಬೇಕು ಎಂದು ಆದೇಶ ಮಾಡಿದ್ದೇವೆ. ಮನೆ ಕಳೆದುಕೊಂಡವರಿಗೆ ಪರಿಹಾರವನ್ನು ನೀಡಲಾಗುವುದು. 996 ಕೋಟಿ ಹಣ ಡಿಸಿಗಳ ಖಾತೆಗೆ ಜಮೆಯಾಗಿದೆ. ಈಗಾಗಲೇ ಕೇಂದ್ರದ ತಂಡ ಬಂದಿದ್ದು ಉಡುಪಿ, ಕಾರವಾರದಲ್ಲಿ ಪರಿಶೀಲನೆ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

Published On - 3:16 pm, Sat, 19 June 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ