ಹಣಕಾಸಿನ ಇತಿಮಿತಿ ನೋಡಿಕೊಂಡು ಕೊವಿಡ್​ಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರದ ಕುರಿತು ನಿರ್ಧರಿಸುವೆ: ಸಿಎಂ ಯಡಿಯೂರಪ್ಪ

compensation for Covid victims family: ಹಾಸನದ ಶಾಸಕರುಗಳು ರಾಷ್ಟ್ರೀಯ ವಿಪತ್ತು ನಿಧಿಯಿಂದ ಕೊವಿಡ್​ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು. ಆಗ ಮಾತನಾಡಿದ ನೀಡಿದ ಸಿಎಂ ಯಡಿಯೂರಪ್ಪ, ಪರಿಹಾರ ನೀಡುವ ಕುರಿತು ಪೂರಕವಾಗಿಯೇ ಪ್ರತಿಕ್ರಿಯೆ ನೀಡಿದರು

Follow us
TV9 Web
| Updated By: guruganesh bhat

Updated on: Jun 11, 2021 | 3:01 PM

ಹಾಸನ: ರಾಜ್ಯದ ಹಣಕಾಸು ಇತಿಮಿತಿ ನೋಡಿಕೊಂಡು ಕೊವಿಡ್​ಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹಾಸನದ ಶಾಸಕರುಗಳು ರಾಷ್ಟ್ರೀಯ ವಿಪತ್ತು ನಿಧಿಯಿಂದ ಕೊವಿಡ್​ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು. ಆಗ ಮಾತನಾಡಿದ ನೀಡಿದ ಸಿಎಂ ಯಡಿಯೂರಪ್ಪ, ಪರಿಹಾರ ನೀಡುವ ಕುರಿತು ಪೂರಕವಾಗಿಯೇ ಪ್ರತಿಕ್ರಿಯೆ ನೀಡಿದರು.

ಇದೇ ವೇಳೆ ಖಾಸಗಿ ಶಾಲೆ ಆರಂಭಕ್ಕೂ ಮೊದಲೇ ಶುಲ್ಕ ಸಂಗ್ರಹ ವಿಚಾರವಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಂಗಳೂರು ಸೇರಿ ಎಲ್ಲಾ ಕಡೆ ಇಂತಹ ದೂರುಗಳು ಬರ್ತಿವೆ. ಶಾಲೆ ಆರಂಭವಾಗದೆ ಮಕ್ಕಳಿಗೆ ತೊಂದರೆ ಕೊಡಬಾರದು. ಹಾಗೆ ಮಾಡಿದವರಿಗೆ ಈಗಾಗಲೇ ನೋಟಿಸ್ ಕೊಟ್ಟಿದ್ದೇವೆ. ಇನ್ನೂ ಬಲವಂತ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

ಎರಡು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಕರ್ನಾಟಕ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದಿನ ಎರಡು ವರ್ಷ ಕಾಲ ಮುಂದುವರಿಯಲಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅವರು ನಿನ್ನೆಯಷ್ಟೇ ದೆಹಲಿಯಲ್ಲಿ ಸ್ಪಷ್ಟಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎರಡು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೆದಿದ್ದ ಚರ್ಚೆಗಳ ವಿಚಾರದ ಬಗ್ಗೆ ಗಮನ ಸೆಳೆದಾಗ ಈ ಬಗ್ಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ಅವಧಿ ಪೂರ್ಣ BSY ಅವರೇ ಇರ್ತಾರೆಂದು ಹೇಳಿದ್ದಾರೆ. ಅವರೇ ಹೀಗೆ ಹೇಳಿದ ಮೇಲೆ ಈ ಪ್ರಶ್ನೆಯೇ ಉದ್ಭವ ಆಗಲ್ಲ. ನಾನು ಭರವಸೆ ಕೊಡ್ತೇನೆ ಇನ್ನೂ 2 ವರ್ಷ ನಾನೇ ಸಿಎಂ ಎಂದು ಹಾಸನದಲ್ಲಿ ಸಭೆಯ ಬಳಿಕ ಸಿಎಂ ಬಿ.ಎಸ್​. ಯಡಿಯೂರಪ್ಪ ಪ್ರಕಟಿಸಿದರು.

ಮೋದಿ, ಅಮಿತ್ ಶಾ ನನ್ನ ಮೇಲೆ ಪ್ರೀತಿ ವಿಶ್ವಾಸವಿಟ್ಟಿದ್ದಾರೆ ಉಸ್ತುವಾರಿಯೇ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಅವರ ನೇತೃತ್ವದಲ್ಲಿ ಒಳ್ಳೆ ಕೆಲಸ ಆಗ್ತಿದೆ, ಆಗಬೇಕೆಂದಿದ್ದಾರೆ. ಹೀಗೆಂದು ಹೇಳಿದ ಮೇಲೆ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ಮೋದಿ, ಅಮಿತ್ ಶಾ ನನ್ನ ಮೇಲೆ ಪ್ರೀತಿ ವಿಶ್ವಾಸವಿಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದೂ ಬಿ.ಎಸ್​. ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರು ನಮ್ಮ‌ ಪಕ್ಷದ ಉಸ್ತುವಾರಿ ಇದಾರೆ. ಹಾಗಾಗಿ ಬರ್ತಾರೆ, ಚರ್ಚೆ ಮಾಡ್ತಾರೆ, ಸಲಹೆ ಕೊಡ್ತಾರೆ ಎಂದು ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ: Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್

Explainer: ದೇಶದಲ್ಲಿ ಕೊವಿಡ್ ಸಾವಿನ ಸಂಖ್ಯೆ ಏಕಾಏಕಿ ಏರಲು ಕಾರಣವೇನು?

(Karnataka CM Yediyurappa says will give compensation for Covid victims family on the basis of financial situation of the state)