Good News: ರಾಜ್ಯದ 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಯಡಿಯೂರಪ್ಪ ಚಾಲನೆ

ಈ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಇಲಾಖೆಯ ʼವಿಜಯೀಭವʼ, ಜ್ಞಾನನಿಧಿ ಯುಟ್ಯೂಬ್‌ ಚಾನೆಲ್‌ಗಳಲ್ಲಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ ಖಾತೆಗಳಲ್ಲಿ ನೇರ ಪ್ರಸಾರ ಆಗಲಿದೆ.

Good News: ರಾಜ್ಯದ 1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಗೆ ನಾಳೆ ಸಿಎಂ ಯಡಿಯೂರಪ್ಪ ಚಾಲನೆ
ಡಾ.ಅಶ್ವತ್ಥ ನಾರಾಯಣ ಮತ್ತು ಬಿ.ಎಸ್.ಯಡಿಯೂರಪ್ಪ
Follow us
TV9 Web
| Updated By: guruganesh bhat

Updated on:Jun 22, 2021 | 9:08 PM

ಬೆಂಗಳೂರು: ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಹಾಗೂ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ನಾಳೆ ಸಿಎಂ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ರಾಜ್ಯದ ಬರೋಬ್ಬರಿ 1.55 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. 

ಈ ಯೋಜನೆಯ ಬಗ್ಗೆ ವಿವರಿಸಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎ.ನ್.‌ಅಶ್ವತ್ಥ ನಾರಾಯಣ, ಕೊವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್‌ ಅಂತರವೂ ಅಳಿಸಿಹಾಕುವ ಧ್ಯೇಯದೊಂದಿಗೆ ಸರಕಾರ ಇಷ್ಟು ಬೃಹತ್‌ ಪ್ರಮಾಣದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸುತ್ತಿದೆ ಎಂದು ತಿಳಿಸಿದರು. ಈ ಯೋಜನೆಗಾಗಿ 163 ಕೋಟಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ. ಇದರ ಜತೆಯಲ್ಲೇ ಸರಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್‌ ಕ್ಲಾಸ್‌ ರೂಂಗಳಿಗೆ ಚಾಲನೆ ನೀಡಲಾಗುತ್ತಿದೆ.

ಟ್ಯಾಬ್​ನ ವಿಶೇಷತೆಯೇನು? ಈಗಾಗಲೇ ಕಲಿಕಾ ನಿರ್ವಹಣಾ ವ್ಯವಸ್ಥೆ ಅನುಷ್ಠಾನಕ್ಕೆ ಬಂದಿದೆ. ಅದರಂತೆ ವಿದ್ಯಾರ್ಥಿಗಳು ಸುಲಭ ವ್ಯಾಸಂಗಕ್ಕೆ ಈ ಟ್ಯಾಬ್ಲೆಟ್‌ಗಳು ಸಹಾಯಕ. ವಿದ್ಯಾರ್ಥಿಗಳ ಜ್ಞಾನಾರ್ಜನೆ ಮಟ್ಟವನ್ನೂ ಹೆಚ್ಚಿಸಲು ಇವು ಪೂರಕ. ಇಂದಿನ ಜಾಗತಿಕ ಮಟ್ಟದ ಆಧುನಿಕ ಕಲಿಕಾ ಮಟ್ಟಕ್ಕೆ ತಕ್ಕಂತೆ ಕಲಿಕೆಯನ್ನು ನಿರಂತರವಾಗಿ ಮುಂದುವರಿಸುವುದು ಹಾಗೂ ಆನ್‌ಲೈನ್‌ ಮೂಲಕವೇ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳು ನೆರವಾಗುತ್ತವೆ.

ಈ ಟ್ಯಾಬ್ಲೆಟ್‌ಗಳು ಉತ್ತಮವಾಗಿವೆ ಹಾಗೂ ಕಲಿಕೆಗೆ ಬೇಕಾದ ಎಲ್ಲ ಫೀಚರುಗಳನ್ನು ಒಳಗೊಂಡಿವೆ. ವೈಫೈ, ಸಿಮ್‌ ಬಳಕೆಯಿಂದ ಇವುಗಳಿಗೆ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್‌ ಬಳಕೆಯ ಮೂಲಕವೇ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಬಹುದು.

ಸರಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದು ಅವರ ಕಲಿಕೆಗೆ ಹೆಗಲು ಕೊಡಬೇಕಾದ ಹೊಣೆಗಾರಿಕೆ ಸರಕಾರದ್ದು. ಇಂಥ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರಕಾರಿ-ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್‌ ತಾರತಮ್ಯವನ್ನು ಸಂಪೂರ್ಣವಾಗಿ ಅಳಿಸಿ ಹಾಕಲು ನೆರವಾಗುತ್ತದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

ವಿವಿಧ ಇಲಾಖೆಗಳ ಸಹಭಾಗಿತ್ವ ಈ ಕಾರ್ಯಕ್ರಮಕ್ಕಾಗಿ ಉನ್ನತ ಶಿಕ್ಷಣ ಇಲಾಖೆಯ ಜತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ ಎಂದು ಅವರು ಹೇಳಿದರು.ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡುವರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಶಾಸಕರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡುವರು. ವರ್ಚುಯಲ್‌ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಎಲ್ಲ ಸಚಿವರು ಜಿಲ್ಲೆಗಳಿಂದ ಭಾಗಿಯಾಗುವರು ಹಾಗೂ ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳುವರು ಎಂದು ಡಿಸಿಎಂ ಮಾಹಿತಿ ನೀಡಿದರು.

ಈ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಇಲಾಖೆಯ ʼವಿಜಯೀಭವʼ, ಜ್ಞಾನನಿಧಿ ಯುಟ್ಯೂಬ್‌ ಚಾನೆಲ್‌ಗಳಲ್ಲಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ ಖಾತೆಗಳಲ್ಲಿ ನೇರ ಪ್ರಸಾರ ಆಗಲಿದೆ. ವೀಕ್ಷಣೆಗೆ ಈ ಲಿಂಕ್‌ ಬಳಸಬಹುದಾಗಿದೆ.

https://youtube.com/c/VijayiBhava https://youtube.com/c/JnanaNidhiDCE https://www.facebook.com/Department-of-Collegiate-Education-100568944804207/ https://twitter.com/collegiate_of?s=09

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರ ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ ಮಂಡಳಿ

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪರೀಕ್ಷೆಗಳನ್ನು ರದ್ದುಪಡಿಸಲು ಉನ್ನತ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳಿಂದ ಒತ್ತಡ

(Karnataka CM Yediyurappa will launch tab PC distribution to 1.55 lakh higher education students tomorrow)

Published On - 8:27 pm, Tue, 22 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್