ಮೇಕೆದಾಟು ಯೋಜನೆಗೆ ಅಡ್ಡಿ ಬೇಡ; ತಮಿಳುನಾಡು ಸಿಎಂ ಸ್ಟಾಲಿನ್​ಗೆ ಪತ್ರ ಬರೆದ ಮುಖ್ಯಮಂತ್ರಿ ಯಡಿಯೂರಪ್ಪ

Mekedatu project: ಎರಡೂ ರಾಜ್ಯದ ನಡುವೆ ಸಾಮರಸ್ಯ ಮುಂದುವರಿಯಲಿ. ಮೇಕೆದಾಟು ಯೋಜನೆಗೆ ತಮಿಳುನಾಡಿನಿಂದ ಅಡ್ಡಿ ಬೇಡ ಎಂದು ಸಿಎಂ ಯಡಿಯೂರಪ್ಪ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೇಕೆದಾಟು ಯೋಜನೆಗೆ ಅಡ್ಡಿ ಬೇಡ; ತಮಿಳುನಾಡು ಸಿಎಂ ಸ್ಟಾಲಿನ್​ಗೆ ಪತ್ರ ಬರೆದ ಮುಖ್ಯಮಂತ್ರಿ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ ಮತ್ತು ಎಂ ಕೆ ಸ್ಟಾಲಿನ್
Follow us
TV9 Web
| Updated By: guruganesh bhat

Updated on:Jul 03, 2021 | 4:56 PM

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಉತ್ಪಾದನೆಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದ್ದ ಕಾರಣ ‘ಸುಪ್ರೀಂ’ ಆದೇಶದನ್ವಯ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ. ಯೋಜನೆಯಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಅವಕಾಶವಿದೆ. 4.75 ಟಿಎಂಸಿ ಕುಡಿಯುವ ನೀರಿಗೆ ಅವಕಾಶ ನೀಡಲಾಗಿತ್ತು. ಈ ಯೋಜನೆ ಎರಡೂ ರಾಜ್ಯಕ್ಕೆ ಉಪಯುಕ್ತವಾಗಲಿದೆ. ಜತೆಗೆ ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರದಲ್ಲಿ ಬರೆದಿದ್ದಾರೆ.

ಈಗಾಗಲೇ ತಮಿಳುನಾಡು ಸರ್ಕಾರದಿಂದ ‘ಸುಪ್ರೀಂ’ಗೆ ಅರ್ಜಿ ಸಲ್ಲಿಸಿರುವುದನ್ನು ಉಲ್ಲೇಖಿಸಿರುವ ಸಿಎಂ ಯಡಿಯೂರಪ್ಪ, ನಾವೂ ಯೋಜನೆಗೆ ಅನುಮತಿ ಕೋರಿ ಕೇಂದ್ರ ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದೇವೆ. ತಮಿಳುನಾಡು ಸರ್ಕಾರ ಕಾವೇರಿ ನೀರು ಬಳಸಿ ಪವರ್ ಪ್ರಾಜೆಕ್ಟ್ ಆರಂಭಿಸಲು ನಿರ್ಧರಿಸಿದೆ. ಎರಡೂ ರಾಜ್ಯದ ನಡುವೆ ಸಾಮರಸ್ಯ ಮುಂದುವರಿಯಲಿ. ಮೇಕೆದಾಟು ಯೋಜನೆಗೆ ತಮಿಳುನಾಡಿನಿಂದ ಅಡ್ಡಿ ಬೇಡ ಎಂದು ಸಿಎಂ ಯಡಿಯೂರಪ್ಪ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೇಕೆದಾಟು ಯೋಜನೆ; ರಾಷ್ಟ್ರೀಯ ಹಸಿರು ಪೀಠದಿಂದ ರಾಜ್ಯದ ಪರ ಆದೇಶ ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿ ಈ ಮುನ್ನ ಮಾಧ್ಯಮಗಳ ವರದಿ ಆಧರಿಸಿ ಕರ್ನಾಟಕ ವಿರುದ್ಧ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ರಾಷ್ಟ್ರೀಯ ಹಸಿರು ಪೀಠ (ಎನ್​ಜಿಟಿ) ಕೈಬಿಟ್ಟಿತ್ತು. ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿ ಪರಿಸರ ಅನುಮತಿ ಇಲ್ಲದೇ ಕಾಮಗಾರಿಗೆ ಸಿದ್ಧತೆ ನಡೆಸಿದ ಆರೋಪದಲ್ಲಿ ಸ್ಥಳ ಪರಿಶೀಲನೆಗೆ ಜಂಟಿ ಸಮಿತಿ ರಚಿಸಲಾಗಿತ್ತು. ರಾಷ್ಟ್ರೀಯ ಹಸಿರು ಪೀಠದ ಆದೇಶದ ಮರುಪರಿಶೀಲನೆ ಕೋರಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಮೇಕೆದಾಟು ಯೋಜನೆಗೆ ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿತ್ತು. ಮೇಕೆದಾಟು ಯೋಜನೆ ಪ್ರಶ್ನಿಸಿ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮಧ್ಯೆ ಚೆನ್ನೈ ರಾಷ್ಟ್ರೀಯ ಹಸಿರು ಪೀಠದಿಂದ ಸಮಿತಿ ರಚನೆ ಸರಿಯಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದಿಸಿದ್ದರು. ಈ ವಾದ ರಾಷ್ಟ್ರೀಯ ಹಸಿರು ಪೀಠ ಪ್ರಕರಣ ಮುಕ್ತಾಯಗೊಳಿಸಿತ್ತು.

ಇದನ್ನೂ ಓದಿ:

 Explained: ಕೊವಿಡ್ ಆ್ಯಂಟಿಬಾಡಿ ಟೆಸ್ಟ್ ಎಂದರೇನು? ಆ್ಯಂಟಿಬಾಡಿ ಫಲಿತಾಂಶ ಪಾಸಿಟಿವ್, ನೆಗೆಟಿವ್ ಎಂದರೇನು? ಇಲ್ಲಿದೆ ವಿವರ

ಮನೆ ಬಾಗಿಲಲ್ಲಿ ಪಡಿತರ, ಎಲ್ಲಾ ಆರ್​ಟಿಒ ಸೇವೆ ಕಾಗದ ರಹಿತ..ರಾಜ್ಯದಲ್ಲಿ ಆಡಳಿತ ಸುಧಾರಣೆಗೆ ಸಲ್ಲಿಸಿದ ಶಿಫಾರಸುಗಳು ಇಲ್ಲಿವೆ

(Karnataka CM Yediyurappa wrote a letter to Tamil Nadu CM Stalin about Mekedatu project)

Published On - 4:55 pm, Sat, 3 July 21

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ