ಕಾಲೇಜು ಶಿಕ್ಷಣ ಇಲಾಖೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಪ್ರಕಟ

| Updated By: ಸುಷ್ಮಾ ಚಕ್ರೆ

Updated on: Apr 05, 2022 | 3:34 PM

ವರ್ಗಾವಣೆ ನಿಯಮಗಳಂತೆ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಆನ್‌ಲೈನ್ ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸಬೇಕು.

ಕಾಲೇಜು ಶಿಕ್ಷಣ ಇಲಾಖೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗಾವಣೆ ಕೌನ್ಸೆಲಿಂಗ್ ಆದೇಶ ಪ್ರಕಟ
ಸಚಿವ ಡಾ ಅಶ್ವಥ್​ ನಾರಾಯಣ
Follow us on

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ಕಾಲೇಜು ಶಿಕ್ಷಣ (Karnataka College Education) ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್‌ ಆದೇಶವನ್ನು ಹೊರಡಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ (Minister Ashwath Narayan) ವರ್ಗಾವಣೆ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗಾವಣೆಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ಕೌನ್ಸೆಲಿಂಗ್‌ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ. ಮಂಜೂರಾದ ಬೋಧಕರ ಹುದ್ದೆಗಳ ಶೇ. 9ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇ. 6ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶವಿದೆ.

ವರ್ಗಾವಣೆ ನಿಯಮಗಳಂತೆ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಆನ್‌ಲೈನ್ ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸಬೇಕು.

ಕೊನೆಯ ದಿನಾಂಕದ ನಂತರ ಸಲ್ಲಿಸುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅಗತ್ಯ ದಾಖಲಾತಿಗಳಿಲ್ಲದ ಮನವಿಗಳನ್ನು ತಿರಸ್ಕರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದರ ಜೊತೆಗೆ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌಖಿಕವಾಗಿ ಘೋಷಣೆ ಮಾಡಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವುದು ಬಾಕಿ ಇದೆ. ಇದಕ್ಕಾಗಿ ರಾಜ್ಯ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚವನ್ನು ಭರಿಸಲಿದೆ.

ಇದನ್ನೂ ಓದಿ: ತಹಶೀಲ್ದಾರ್ ವರ್ಗಾವಣೆ ವಿಚಾರ; ಆರ್ ಅಶೋಕ್ ಮತ್ತು ಅಶ್ವತ್ಥ್ ನಾರಾಯಣ ಮಧ್ಯೆ ಶೀತಲಸಮರ

ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರ

Published On - 3:32 pm, Tue, 5 April 22