‘ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ’ ತೇಜಸ್ವಿ ಹೇಳಿಕೆಗೆ ತೀವ್ರ ಆಕ್ರೋಶ
ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಯ ಪ್ರವಾಹಕ್ಕೆ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಅಪಾರ ಪ್ರಮಾಣದ ಸಾವು, ನೋವುಗಳಾಗಿವೆ. ರೈತರ ಮನೆ, ಜಮೀನು ಎಲ್ಲಾ ಪ್ರವಾಹದಲ್ಲೇ ಕೊಚ್ಚಿ ಹೋಗಿವೆ. ಆದ್ರೆ ಇದುವರೆಗೂ ಕೇಂದ್ರ ಸರ್ಕಾರ ಮಾತ್ರ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಇನ್ನು ಈ ಸಂಬಂಧ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ. ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ತೇಜಸ್ವಿ ಹೇಳಿಕೆಗೆ ಬಿಜೆಪಿಯಲ್ಲೇ ಅಸಮಾಧಾನ: […]
ಇತ್ತೀಚೆಗಷ್ಟೇ ಸುರಿದ ಭಾರೀ ಮಳೆಯ ಪ್ರವಾಹಕ್ಕೆ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿವೆ. ಅಪಾರ ಪ್ರಮಾಣದ ಸಾವು, ನೋವುಗಳಾಗಿವೆ. ರೈತರ ಮನೆ, ಜಮೀನು ಎಲ್ಲಾ ಪ್ರವಾಹದಲ್ಲೇ ಕೊಚ್ಚಿ ಹೋಗಿವೆ. ಆದ್ರೆ ಇದುವರೆಗೂ ಕೇಂದ್ರ ಸರ್ಕಾರ ಮಾತ್ರ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಇನ್ನು ಈ ಸಂಬಂಧ ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ, ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ. ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ
ತೇಜಸ್ವಿ ಹೇಳಿಕೆಗೆ ಬಿಜೆಪಿಯಲ್ಲೇ ಅಸಮಾಧಾನ: ನೆರೆ ಪರಿಹಾರ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಹಾಗು ಸಚಿವರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರ ಏನೂ ಮಾಡುತ್ತಿಲ್ಲ, ಇನ್ನು ಸಂಸದರೂ ಯಾವುದೇ ಪ್ರಯತ್ನ ಮಾಡ್ತಿಲ್ಲವೆಂಬ ಭಾವನೆ ಮೂಡುತ್ತೆ. ರಾಜ್ಯದಲ್ಲಿ ಇಂತಹ ಭಾವನೆ ಇರುವಾಗ ಸಂಸದರಾದವರು ಇಂಥ ಹೇಳಿಕೆ ಕೊಡುವುದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ, ಯಾಕೆ ಇಂತಹ ಹೇಳಿಕೆಗಳನ್ನು ಕೊಡುತ್ತಾರೆಂದು ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿಯಲ್ಲೇ ತೀವ್ರ ಅಸಮಾಧಾನವಾಗಿದೆ.
ನೆರೆ ಪರಿಹಾರಕ್ಕೆ ಸ್ಪಂದಿಸದ ಇವರು ಉತ್ತರಕುಮಾರರು: ನೆರೆ ಪರಿಹಾರ ವಿಷಯದಲ್ಲಿ ಇಂತಹ ಯೋಗ್ಯತೆ, ಸಮರ್ಥತೆ, ಸಂವೇದನೆ ತೋರಿರುವ ಇವ್ರು ರಾಜ್ಯದ ಉತ್ತರಕುಮಾರರೇ ಸರಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಅಲ್ಲದೆ, ನೋಟ್ ಪ್ರಿಂಟ್ ಮಾಡುವ ಮಷಿನ್ ಇಲ್ಲ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದರು. ಸಂತ್ರಸ್ತರಿಗೆ 10,000 ರೂ. ಕೊಟ್ಟಿದ್ದೇ ಹೆಚ್ಚಾಯ್ತು ಅಂತ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ರು. ಇನ್ನು ಡಿಸಿಎಂ ಸಿಎನ್ ಅಶ್ವತ್ಥ್ ನಾರಾಯಣ, ಶಾಲಾ ಮಕ್ಕಳು ದೇಣಿಗೆ ಸಂಗ್ರಹಿಸಬೇಕು ಅಂತ ಹೇಳಿದ್ದಾರೆ. ಇದೀಗ ಸಂಸದ ತೇಜಸ್ವಿ ಸೂರ್ಯ, ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ಎಂದಿದ್ದಾರೆ ಎಂದು ಬಿಜೆಪಿ ನಾಯಕರ ಹೇಳಿಕೆ ಉಲ್ಲೇಖಿಸಿ ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.
Published On - 11:31 am, Sat, 21 September 19