AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು

ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಯ ಕೂಗು ಕೇಳಿಬರುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಏಪ್ರಿಲ್ 12 ರ ಭಾನುವಾರ ದೆಹಲಿಗೆ ತೆರಳಲಿದ್ದಾರೆ. ಅಶೋಕ್ ಪಟ್ಟಣ್ ನೇತೃತ್ವದಲ್ಲಿ ಹೈಕಮಾಂಡ್ ಭೇಟಿ ಮಾಡಲಿರುವ ಶಾಸಕರು, ತಮಗೂ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರಲಿದ್ದಾರೆ.

ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)Image Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on:Apr 11, 2026 | 9:13 AM

Share

ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು ಬಾರಿ ಗೆದ್ದಿರುವ ಅನುಭವಿ ಶಾಸಕರು ಸೇರಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಮನವಿ ಸಲ್ಲಿಸುವುದು ಶಾಸಕರ ಈ ಯಾತ್ರೆಯ ಮುಖ್ಯ ಉದ್ದೇಶ ಎಂದು ಉನ್ನತ ಮೂಲಗಳು ತಿಳಿಸಿವೆ.

ಶಾಸಕರ ಬೇಡಿಕೆ ಏನು?

ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆಯುತ್ತಾ ಬಂದಿವೆ. ಆರಂಭದಲ್ಲಿ ಎರಡೂವರೆ ವರ್ಷದ ನಂತರ ಸಂಪುಟ ಪುನರ್‌ ರಚನೆ ಮಾಡಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಪಕ್ಷಕ್ಕಾಗಿ ನಾವು ನಿರಂತರವಾಗಿ ದುಡಿದಿದ್ದೇವೆ. ಉಳಿದಿರುವ ಎರಡು ವರ್ಷದ ಅವಧಿಗಾದರೂ ನಮಗೆ ಸಚಿವ ಸ್ಥಾನ ನೀಡಬೇಕು ಎಂಬುದು ಶಾಸಕರ ವಾದವಾಗಿದೆ. ಇದಕ್ಕಾಗಿ ಸಂಪುಟ ಪುನರ್‌ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಹೈಕಮಾಂಡ್‌ಗೆ ಅವರು ಒತ್ತಾಯಿಸಲಿದ್ದಾರೆ.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ

ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಶಾಸಕರು, ‘ನಾಯಕತ್ವದ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಅನುಭವಿ ಶಾಸಕರಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ. ಏಪ್ರಿಲ್ 17ರ ನಂತರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನವೇ ಈ ಶಾಸಕರ ತಂಡ ವರಿಷ್ಠರ ಮನವೊಲಿಸಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:12 am, Sat, 11 April 26

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ