AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಚುನಾವಣೆ, ಬರ ನಿರ್ವಹಣೆ ಸೇರಿ ಏನೇನು ಚರ್ಚೆಯಾಯ್ತು? ಇಲ್ಲಿದೆ ಪೂರ್ಣ ವಿವರ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಹಿರಿಯೂರು ಉಪಚುನಾವಣೆ, ಬರ ನಿರ್ವಹಣೆ ಹಾಗೂ ಆರ್ಥಿಕ ಇಲಾಖೆ ಟಿಪ್ಪಣಿ ಸೋರಿಕೆ ಕುರಿತು ಚರ್ಚೆ ನಡೆದಿದೆ. ಗ್ರಾಮ ಪಂಚಾಯಿತಿ ಮಟ್ಟದ ಗ್ಯಾರಂಟಿ ಸಮಿತಿಗಳಿಗೆ ಹೆಸರು ಶಿಫಾರಸು ಮಾಡುವಂತೆ ಶಾಸಕರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.

ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಚುನಾವಣೆ, ಬರ ನಿರ್ವಹಣೆ ಸೇರಿ ಏನೇನು ಚರ್ಚೆಯಾಯ್ತು? ಇಲ್ಲಿದೆ ಪೂರ್ಣ ವಿವರ
ಕಾಂಗ್ರೆಸ್ ಶಾಸಕಾಂಗ ಸಭೆImage Credit source: @DKShivakumar
ಪ್ರಸನ್ನ ಗಾಂವ್ಕರ್​
| Edited By: |

Updated on: Sep 23, 2026 | 8:30 AM

Share

ಮುಖ್ಯಾಂಶಗಳು

  • ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರಿಗೆ ಡಿಕೆಶಿ ಸೂಚನೆ
  • ತಾ.ಪಂ, ಜಿ.ಪಂ ಚುನಾವಣೆ ಸಿದ್ಧತೆಗೆ ಮುಖ್ಯಮಂತ್ರಿ ಕರೆ
  • ಆರ್ಥಿಕ ಟಿಪ್ಪಣಿ ಸೋರಿಕೆಗೆ ಸಿಎಂ ಅಸಮಾಧಾನ

ಬೆಂಗಳೂರು, ಸೆಪ್ಟೆಂಬರ್ 23: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ಕಾರದ ಯೋಜನೆಗಳ ಅನುಷ್ಠಾನ, ಗ್ಯಾರಂಟಿ ಯೋಜನೆಗಳು, ಬರ ನಿರ್ವಹಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಸಭೆಯಲ್ಲಿ ಎರಡು ಪ್ರಮುಖ ವಿಚಾರಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತು ನೀಡಿದ್ದಾರೆ. ಭಾರತ್ ಜೋಡೋ ಯುವಕ ಸಂಘದ ಅನುಷ್ಠಾನ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿ ಗ್ಯಾರಂಟಿ ಸಮಿತಿಗೆ ಆರು ಮಂದಿಯ ಹೆಸರನ್ನು ಶಾಸಕರು ಶಿಫಾರಸು ಮಾಡಬೇಕು. ಆದರೆ, ಇದುವರೆಗೆ ಹಲವು ಶಾಸಕರು ಹೆಸರು ಶಿಫಾರಸು ಮಾಡಿಲ್ಲ. ಈ ವಿಚಾರವನ್ನು ಹೈಕಮಾಂಡ್ ಕೂಡ ಗಂಭೀರವಾಗಿ ಪರಿಗಣಿಸಿದೆ ಎಂದು ಶಾಸಕರಿಗೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಸಿದ್ಧತೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಉಪಚುನಾವಣೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ. ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು. ಹೀಗಾಗಿ ಜಿಲ್ಲಾಮಟ್ಟದಲ್ಲಿ ಚುನಾವಣಾ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ಮತ್ತಷ್ಟು ಬಲಪಡಿಸುವಂತೆಯೂ ಶಾಸಕರಿಗೆ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಹಿರಿಯೂರು ಉಪಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.

ಆರ್ಥಿಕ ಇಲಾಖೆ ಟಿಪ್ಪಣಿ ಸೋರಿಕೆ ಬಗ್ಗೆ ಅಸಮಾಧಾನ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್ಥಿಕ ಇಲಾಖೆ ಟಿಪ್ಪಣಿ ಸೋರಿಕೆ ವಿಚಾರವೂ ಪ್ರಮುಖ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಆರ್ಥಿಕ ಇಲಾಖೆ ಟಿಪ್ಪಣಿ ಮಾಧ್ಯಮಗಳ ಕೈ ಸೇರಿರುವುದಕ್ಕೆ ಡಿಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಮೇಲೂ ಮುಖ್ಯಮಂತ್ರಿ ಗರಂ ಆಗಿದ್ದಾರೆ ಎನ್ನಲಾಗಿದೆ. ‘ನಮ್ಮವರೇ ಬೇಕಂತಲೇ ಪತ್ರ ಲೀಕ್ ಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಅಸಮಾಧಾನ ಹೊರಹಾಕಿದ್ದಾರೆ ಎಂಬುದು ತಿಳಿದುಬಂದಿದೆ.

ಸರ್ಕಾರದ ಗೌಪ್ಯ ಟಿಪ್ಪಣಿ ಮಾಧ್ಯಮಗಳು ಮತ್ತು ವಿಪಕ್ಷಗಳ ಕೈ ಸೇರಿದೆ ಎಂದರೆ ಅಧಿಕಾರಿಗಳು ಗೌಪ್ಯತೆ ಕಾಪಾಡುತ್ತಿಲ್ಲ ಎಂಬ ಅರ್ಥ. ಮಾಹಿತಿ ಸೋರಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಶಾಸಕಾಂಗ ಪಕ್ಷ ಸಭೆ ಕುರಿತು ಡಿಕೆಶಿ ಎಕ್ಸ್ ಸಂದೇಶ

ಒಟ್ಟಿನಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡುವುದು, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆ, ಬರ ನಿರ್ವಹಣೆಗೆ 4,500 ಕೋಟಿ ರೂಪಾಯಿ ಬೇಡಿಕೆ ಹಾಗೂ ಹಿರಿಯೂರು ಉಪಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುವ ಕುರಿತು ಚರ್ಚೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು