AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸಭೆ ಸಹಿಸಲ್ಲವೆಂದು ಯಾರೂ ಹೇಳಿಲ್ಲ, ಹಾಗೆಂದರೆ ತಕ್ಕ ಉತ್ತರ ಕೊಡುತ್ತೇವೆ: ಪರಮೇಶ್ವರ್ ಖಡಕ್ ಮಾತು

ಕರ್ನಾಟಕದಲ್ಲಿ ಡಿನ್ನರ್ ಮೀಟಿಂಗ್ ರಾಜಕೀಯ ಜೋರಾಗಿದೆ. ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರು, ಸಚಿವರ ಸಭೆ ನಡೆಸಲು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮುಂದಾಗಿದ್ದು, ಅದಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಈ ಬಗ್ಗೆ ಪರಮೇಶ್ವರ್ ಕೊಟ್ಟ ಪ್ರತಿಕ್ರಿಯೆ ಇಲ್ಲಿದೆ.

ನಮ್ಮ ಸಭೆ ಸಹಿಸಲ್ಲವೆಂದು ಯಾರೂ ಹೇಳಿಲ್ಲ, ಹಾಗೆಂದರೆ ತಕ್ಕ ಉತ್ತರ ಕೊಡುತ್ತೇವೆ: ಪರಮೇಶ್ವರ್ ಖಡಕ್ ಮಾತು
ಡಾ. ಜಿ ಪರಮೇಶ್ವರ್
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Jan 08, 2025 | 11:10 AM

Share

ಬೆಂಗಳೂರು, ಜನವರಿ 8: ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್​ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ. ಸಭೆ ನಡೆಸುತ್ತೇವೆ ಎಂದಿದ್ದಾರೆ.

ಪರಮೇಶ್ವರ್ ಅವರು ಎಸ್​ಸಿ, ಎಸ್​ಟಿ ಶಾಸಕರು, ಸಚಿವರ ಡಿನ್ನರ್ ಮೀಟಿಂಗ್ ಆಯೋಜನೆ ಮಾಡಲು ಮುಂದಾಗಿದ್ದರು. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರು ಸಭೆ ಸೇರಿದ ವಿಚಾರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪರಮೇಶ್ವರ್ ಸಹ ಡಿನ್ನರ್ ಮೀಟಿಂಗ್​ ನಡೆಸಲು ಮುಂದಾಗಿದ್ದರು. ಅತ್ತ ವಿದೇಶ ಪ್ರವಾಸದಿಂದ ದೆಹಲಿಗೆ ಆಗಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್​​ಗೆ ಮಾಹಿತಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟ್​ಗೆ ಹೈಕಮಾಂಡ್ ಬ್ರೇಕ್ ಹಾಕಿತ್ತು.

ಪರಮೇಶ್ವರ್ ಹೇಳಿದ್ದೇನು?

ಹೈಕಮಾಂಡ್​ಗೆ ಡಿಸಿಎಂ ಡಿಕೆ ಶಿವಕುಮಾರ್ ದೂರು ನೀಡಿದ್ದಾರೆಯೇ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಆ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್​​ರನ್ನೂ ಕರೆಯಬೇಕು ಎಂದು ಚರ್ಚೆ ಆಗಿತ್ತು. ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ. ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದರು.

ತಕ್ಕ ಉತ್ತರ ಕೊಡುವ ಶಕ್ತಿ ಇದೆ: ಪರಮೇಶ್ವರ್

ದಲಿತ ಸಮುದಾಯದ ಮೇಲಿನ ದೌರ್ಜನ್ಯ ಬಗ್ಗೆ ಚರ್ಚೆ ಆಗಬೇಕಿದೆ. ಯಾರೂ ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ನಮ್ಮ ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ ಇದೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದರು.

ಸದ್ಯದ ಮಟ್ಟಿಗೆ ಸಭೆ ಮುಂದಕ್ಕೆ ಹಾಕಿದ್ದೇವೆ. ಮತ್ತೆ ದಿನಾಂಕ ನಿಗದಿ ಆದಾಗ ತಿಳಿಸುತ್ತೇವೆ. ಏನಾಗಿದೆ ಎಂದು ಎಲ್ಲವನ್ನೂ ಹೇಳಲು ಆಗುವುದಿಲ್ಲವಲ್ಲ ಎಂದು ಪರಮೇಶ್ವರ್ ಹೇಳಿದರು.

ಔತಣಕೂಟ ರದ್ದು ಮಾಡಿಲ್ಲ, ಮುಂದೂಡಿಕೆಯಷ್ಟೇ: ಪರಮೇಶ್ವರ್

ಔತಣಕೂಟವನ್ನು ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ನಮ್ಮ ಔತಣಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ. ಚಿತ್ರದುರ್ಗ ಸಮಾವೇಶ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದೆವು. ಔತಣಕೂಟ ಬಗ್ಗೆ ನಾವು ದೆಹಲಿಗೆ ಏನೂ ಹೇಳಿರಲಿಲ್ಲ. ಶಾಸಕರ ಮೀಟಿಂಗ್ ಅಂದಾಗ ಅವರ ಗಮನಕ್ಕೆ ಹೋಗುತ್ತದೆ. ಹೀಗಾಗಿ ರಣದೀಪ್ ಸುರ್ಜೇವಾಲ ಕರೆ ಮಾಡಿ ಅವರೂ ಸಹ ಭಾಗವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು. ಹಾಗಾಗಿ ಅವರಿಗೂ ಆಹ್ವಾನ ಕೊಟ್ಟಿದ್ದೇವೆ. ಮುಂದೆ ಸಮಯ ಕೋಡುತ್ತೇನೆ ಎಂದು ನಮಗೆ ಹೇಳಿದ್ದಾರೆ. ಹಾಗಾಗಿ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಊಟಕ್ಕೂ ಮೊದಲು ಚರ್ಚೆ ಮಾಡುತ್ತೇವೆ. ಡಿನ್ನರ್ ಅಂದ್ರೆ ಏನೇನೋ ವ್ಯಾಖ್ಯಾನ ಮಾಡುತ್ತೀರಿ. ಸಭೆ ಇದ್ದಾಗ ಊಟ ಮಾಡುವುದು ಸಹಜ. ಸ್ವಲ್ಪ ದಿನ ಕಾಯೋಣ, ಸಭೆ ಅವರಿಗೆ ಇಷ್ಟ ಇತ್ತೋ ಅಥವಾ ಇಲ್ಲವೋ ಎಂಬುದು ಎಲ್ಲವೂ ಗೊತ್ತಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜೋರಾದ ಡಿನ್ನರ್ ಪೊಲಿಟಿಕ್ಸ್: ನಾಳಿನ ಪರಮೇಶ್ವರ್ ಡಿನ್ನರ್ ಸಭೆಗೆ ಹೈಕಮಾಂಡ್ ಬ್ರೇಕ್

ಇತ್ತೀಚೆಗಷ್ಟೇ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ಮೀಟಿಂಗ್​ನಲ್ಲಿ, ಮುಂದೆಯೂ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯಬೇಕೆಂಬ ಅಭಿಪ್ರಾಯ ವ್ಯಕ್ತವಾಗಿತ್ತು ಎಂದು ಕಾಂಗ್ರೆಸ್​ನ ಕೆಲವು ಮೂಲಗಳು ಹೇಳಿವೆ. ಆದರೆ, ಪಕ್ಷದ ನಾಯಕರು ಇಂಥ ಊಹೆಗಳನ್ನು ಅಲ್ಲಗಳೆದಿದ್ದಾರೆ. ಹೊಸ ವರ್ಷದ ಸಂದರ್ಭ ಎಲ್ಲರೂ ಜತೆಯಾಗಿದ್ದೆವು ಅಷ್ಟೇ ಎಂದು ಹೇಳಿದ್ದರು. ಆದರೆ, ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆಸಿದ್ದು, ಅವರ ಅಸಮಾಧಾನಕ್ಕೂ ಕಾರಣವಾಗಿದೆ ಎನ್ನಲಾಗಿದೆ. ಏತನ್ಮಧ್ಯೆ ಪರಮೇಶ್ವರ್ ಜನವರಿ 8ರಂದು ಡಿನ್ನರ್ ಮೀಟಿಂಗ್ ಕರೆದಿದ್ದರು. ಇದಕ್ಕೆ ಹೈಕಮಾಂಡ್​ ತಾತ್ಕಾಲಿಕ ಬ್ರೇಕ್ ಹಾಕಿದೆ. ಡಿಕೆ ಶಿವಕುಮಾರ್ ದೆಹಲಿಯಲ್ಲಿರುವಾಗಲೇ ಈ ಬೆಳವಣಿಗೆ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?