KN Rajanna Resigns: ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ
ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್ನ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ಈ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ಹೇಳಿಕೆಯೊಂದು ನೀಡಿ ತಮ್ಮದೇ ಪಕ್ಷದ ನಾಯಕರು ಮುಜುಗುರಕ್ಕೀಡಾಗುವಂತೆ ಮಾಡಿದ್ದರು. ಕೆಎನ್ ರಾಜಣ್ಣ ಹೇಳಿಕೆಯಿಂದ ಹೈಕಮಾಂಡ್ ತೀವ್ರ ಅಸಮಾಧಾನಗೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು, ಆಗಸ್ಟ್ 11: ಸಹಕಾರ ಸಚಿವ ಕೆ ಎನ್ ರಾಜಣ್ಣ (KN Rajanna) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಕೆ.ಎನ್. ರಾಜಣ್ಣ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.
ರಾಜೀನಾಮೆ ಬಗ್ಗೆ ಸಚಿವ ಕೆಎನ್ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.
ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲೇ ಭೇಟಿಯಾಗುವೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮಾತನಾಡುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನು ಅಲ್ಲ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.
ಕೆಎನ್ ರಾಜಣ್ಣ ಫಸ್ಟ್ ರಿಯಾಕ್ಷನ್
ಇದನ್ನೂ ಓದಿ: ಪಕ್ಷವನ್ನ ಮುಜುಗರಕ್ಕೀಡು ಮಾಡಿದ ಸಚಿವ ರಾಜಣ್ಣ, ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ
ತಂದೆಯ ರಾಜಿನಾಮೆ ವಿಚಾರ ತಳ್ಳಿಹಾಕಿದ: MLC ರಾಜೇಂದ್ರ
ತಂದೆ, ಸಚಿವ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ ನೀಡುತ್ತಾರೆ ಎಂಬುವುದು ಸುಳ್ಳು. ನಾನು ಈಗಷ್ಟೇ ನಮ್ಮ ತಂದೆಯ ಜೊತೆ ಮಾತನಾಡಿದ್ದೇನೆ. ಆ ರೀತಿ ಏನೂ ಇಲ್ಲ ಅಂತ ನಮ್ಮ ತಂದೆ ಹೇಳಿದ್ದಾರೆ ಎಂದು ಕೆ.ಎನ್.ರಾಜಣ್ಣ ಪುತ್ರ ಎಂಎಲ್ಸಿ ರಾಜೇಂದ್ರ ಹೇಳಿದ್ದಾರೆ.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:49 pm, Mon, 11 August 25



