ನೂತನ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭ

ನೂತನ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ನೂತನ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Jun 05, 2023 | 2:30 PM

ದಾವಣಗೆರೆ: ನೂತನ ಕಾಂಗ್ರೆಸ್ (Congress) ಸರ್ಕಾರದ ಮೊದಲ ರಾಜ್ಯ ಬಜೆಟ್ (Budget) ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನ ಆರಂಭದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಭಾಷಣ ಮಾಡಲಿದ್ದಾರೆ. ಜುಲೈ ಮೊದಲ ವಾರ ಬಜೆಟ್ ಅಧಿವೇಶನ ಕೈಗೊಳ್ಳಲು ನಿರ್ಧರಿಸಲಾಗಿದ್ದು ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ದಾವಣಗೆರೆಯ ಎಂಬಿಎ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಕೈಗೊಂಡು ಬಜೆಟ್ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತದೆ. ಬಜೆಟ್ ಅಧಿವೇಶನವು ಜುಲೈ 3 ರಿಂದ ಆರಂಭವಾಗಲಿದ್ದು ಬಜೆಟ್ ಮಂಡನೆಯನ್ನು ಜುಲೈ 7 ಶುಕ್ರವಾರ ಮಂಡಿಸಲು ವಿವಿಧ ಹಂತದ ಸಭೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಸೆಂಟ್ರಲ್ ಕಾಲೇಜಿನಲ್ಲಿ ಪರಿಸರ ದಿನ ಆಚರಿಸಿದ ಸಿಎಂ, ಡಿಸಿಎಂ

ರೈತರಿಗೆ ಬಿತ್ತನೆ ಬೀಜ, ಕೀಟನಾಶಕಗಳ ಪೂರೈಕೆಯಲ್ಲಿ ಲೋಪವಾಗದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿದರು. ಈ ವೇಳೆ  ಕೃಷಿ ಚಟುವಟಿಕೆ ಆರಂಭವಾಗುತ್ತಿದ್ದು, ಇದಕ್ಕೆ ಪೂರಕವಾದ ಸಿದ್ಧತೆ ಕೈಗೊಳ್ಳಿ. ರೈತರಿಗೆ ಕೃಷಿಗೆ ಪೂರಕವಾದ ಬಿತ್ತನೆ ಬೀಜ ಹಾಗೂ ಕೀಟನಾಶಕಗಳ ವಿತರಣೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಿ ಮತ್ತು ಆಕಸ್ಮಿಕ ಅತೀವೃಷ್ಟಿ ತಡೆಗೂ ಸಿದ್ದತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Mon, 5 June 23

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ