AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ರಚಿಸಿದ್ದ ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ಕಾಂಗ್ರೆಸ್ ಸರ್ಕಾರ ರಚನೆ ಮಾಡಿತ್ತು. ಇದೀಗ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವನ್ನು ಸರ್ಕಾರ ದಿಢೀರನೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ರಚಿಸಿದ್ದ ನಾಗಮೋಹನ್ ದಾಸ್ ಆಯೋಗ ದಿಢೀರ್ ರದ್ದು!
ನಾಗಮೋಹನ್ ದಾಸ್ ಆಯೋಗದ ಕಚೇರಿ
Anil Kalkere
| Updated By: Ganapathi Sharma|

Updated on: Sep 25, 2025 | 7:50 AM

Share

ಬೆಂಗಳೂರು, ಸೆಪ್ಟೆಂಬರ್ 25: ಕರ್ನಾಟಕದಲ್ಲಿ 2019 ರಿಂದ 2023ರವರೆಗೆ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗುವ ಹಗರಣಗಳ, ಅದರಲ್ಲೂ ಕೋವಿಡ್ ಸಾಂಕ್ರಾಮಿಕದ ವೇಳೆ ನಡೆದಿತ್ತು ಎನ್ನಲಾದ ಬಹುಕೋಟಿ ರೂಪಾಯಿ ಹಗರಣದ ತನಿಖೆಗೆಂದು ಕಾಂಗ್ರೆಸ್ (Congress) ಸರ್ಕಾರ ಆಯೋಗ ರಚನೆ ಮಾಡಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ (Nagamohan Das Commission) ರಚನೆಯಾಗಿತ್ತು. ಇದೀಗ ಆ ಆಯೋಗದ ಅವಧಿ ಮುಗಿಯುವುದಕ್ಕೂ ಮುನ್ನವೇ ವಿಸರ್ಜನೆ ಮಾಡಲಾಗಿದೆ. ಸೆಪ್ಟೆಂಬರ್ 30 ರವರೆಗೆ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯ 40% ಕಮಿಷನ್ ಆರೋಪ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ತನಿಖೆ‌ ಜವಾಬ್ದಾರಿಯನ್ನು ಈ ಆಯೋಗಕ್ಕೆ‌ ವಹಿಸಲಾಗಿತ್ತು. ಆಯೋಗಕ್ಕೆ‌ ನೀಡಲಾಗಿದ್ದ ವಾಹನ ಹಾಗೂ ಸಿಬ್ಬಂದಿಯನ್ನು ಸರ್ಕಾರ‌ ಮಂಗಳವಾರ ಸಂಜೆಯಿಂದಲೇ ವಾಪಸ್ ಪಡೆದಿದೆ. ಅಧ್ಯಕ್ಷರ ಸೂಚನೆ ಮೇರೆಗೆ ಆಯೋಗದ ಕಾರ್ಯಚಟುವಟಿಕೆ ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಕಾಮಗಾರಿಗಳಲ್ಲಿ ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಆಯೋಗ, ಆಗಸ್ಟ್ 30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನು ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು. ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತುಗಳನ್ನು ಏಕಾಏಕಿ ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.

ಸರ್ಕಾರದ ಖಜಾನೆ ಖಾಲಿಯಾಗಿದೆ: ಆರ್ ಅಶೋಕ್

ಸರ್ಕಾರದ ಈ ನಡೆಗೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ‌ ಆರ್.ಅಶೋಕ್, ಇದು ಹತ್ತಿದ ಏಣಿ ಒದ್ದಂತೆ. ಕೆಲಸ ಆದ ಮೇಲೆ ಬೆಲೆ ಇಲ್ಲ ಎನ್ನುವ ಧೋರಣೆ ಎಂದು ಕಿಡಿ ಕಾರಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲ, ಪಾಪರ್ ಆಗಿದೆ. ಸರ್ಕಾರಕ್ಕೆ ನಾಗಮೋಹನದಾಸ್ ಆಯೋಗಕ್ಕೆ ಕನಿಷ್ಠ ಸವಲತ್ತು ಕೊಡುವ ಯೋಗ್ಯತೆಯೂ ಇಲ್ಲ. ಆಯೋಗಕ್ಕೆ ತಿಂಗಳಿಗೆ ಕನಿಷ್ಠ 10 ಲಕ್ಷ ರೂ. ಕೊಡುವ ಯೋಗ್ಯತೆಯೂ ಇಲ್ಲದಂತೆ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ: ಜೈಲಿನಲ್ಲಿರುವ ಶಾಸಕನ ಪತ್ನಿಗೂ ಜಾಕ್‌ಪಾಟ್

ಒಟ್ಟಾರೆ, ಬಿಜೆಪಿ ಅವಧಿಯಲ್ಲಿ ಹಗರಣ ಹಾಗೂ ಒಳ ಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿತ್ತು. ಆದರೀಗ ಯಾವುದೇ ಪೂರ್ವ ಸೂಚನೆ ಇಲ್ಲದೇ ಸರ್ಕಾರ ವಾಹನಗಳನ್ನ ವಾಪಾಸ್ ಪಡೆದ ವಿಚಾರ ಸಾಕಷ್ಟು ಚರ್ಚೆಯನ್ನ ಹುಟ್ಟುಹಾಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್