ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಅನುಮತಿ: ಕಾಂಗ್ರೆಸ್ ಸರ್ಕಾರದಿಂದ ಮಹತ್ವದ ನಿರ್ಧಾರ

ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಹಗರಣ ಸಂಬಂಧ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಅನುಮತಿ ನೀಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸರ್ಕಾರ ಇದೀಗ ಯೂಟರ್ನ್ ಹೊಡೆದಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದೇನೆಂದು ತಿಳಿಯಲು ಮುಂದೆ ಓದಿ.

ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಅನುಮತಿ: ಕಾಂಗ್ರೆಸ್ ಸರ್ಕಾರದಿಂದ ಮಹತ್ವದ ನಿರ್ಧಾರ
ಗೃಹ ಸಚಿವ ಪರಮೇಶ್ವರ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on:Aug 02, 2024 | 11:45 AM

ಬೆಂಗಳೂರು, ಆಗಸ್ಟ್ 2: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.

ಕೆಲವೇ ದಿನ ಹಿಂದಷ್ಟೇ ಮಾತನಾಡಿದ್ದ ಪರಮೇಶ್ವರ್, ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದಿದ್ದರು. ಇದೀಗ ಯೂಟರ್ನ್ ಹೊಡೆದಿದ್ದಾರೆ.

ಇಂದು ಬೆಳಗ್ಗೆ (ಶುಕ್ರವಾರ) ಮಾತನಾಡಿದ್ದ ಬೆಂಗಳೂರು ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಕೂಡ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದೇ ಹೇಳಿದ್ದರು.

ಆತುರದಲ್ಲಿ ರಾಜ್ಯಪಾಲರಿಂದ ನೋಟಿಸ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆತುರಾತುರವಾಗಿ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ ಎಂದು ಡಾ. ಜಿ ಪರಮೇಶ್ವರ್​ ಹೇಳಿದರು. ಗುರುವಾರ ರಾತ್ರಿಯೇ ಸಂಪುಟದ ನಿರ್ಣಯ ಕಳಿಸಲು ತೀರ್ಮಾನಿಸಿದ್ದೆವು. ರಾಜ್ಯದಲ್ಲಿ ರಾಜ್ಯಪಾಲರಿಲ್ಲ, ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಒತ್ತಡಗಳು ಬಂದಿವೆ ಅನ್ನುವ ಅನುಮಾನ ಇದೆ. ದೂರು ಪಡೆದ ದಿನವೇ ರಾಜ್ಯಪಾಲರು ನೋಟಿಸ್​ ಕೊಟ್ಟಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಪಾದಯಾತ್ರೆ: ಜೆಡಿಎಸ್​​ ನಾಯಕರಿಗೊಂದು ವಿಶೇಷ ಮನವಿ ಮಾಡಿದ ಅಶೋಕ್

ಜುಲೈ 26ರಂದೇ ರಾಜ್ಯಪಾಲರಿಗೆ ಅಬ್ರಹಾಂ ಮನವಿ ಕೊಟ್ಟಿದ್ದು. ರಾಜ್ಯಪಾಲರ ಪ್ರಶ್ನೆಗಳಿಗೆ ಲಿಖಿತ ರೂಪದಲ್ಲಿ ಸಿಎಸ್ಉತ್ತರ ನೀಡಿದ್ದಾರೆ. ಇದಾದ ನಂತರ ರಾಜ್ಯಪಾಲರಿಂದ ಶೋಕಾಸ್ ನೋಟಿಸ್ ಬಂದಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡಲ್ಲವೆಂಬ ವಿಶ್ವಾಸವಿದೆ. ಒಂದು ವೇಳೆ ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸುತ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡ್ರೂ ನಾವು ಎದುರಿಸುತ್ತೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:39 am, Fri, 2 August 24