AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನಲ್ಲಿ ಮತ್ತೆ ಭುಗಿಲೆದ್ದ ಅನುದಾನ ವಾರ್: ‘ಕೈ’ ಶಾಸಕನ ವಿರುದ್ಧ ಪಕ್ಷದ ಮುಖಂಡರಿಂದಲೇ ವಾಗ್ದಾಳಿ

ಕಾಂಗ್ರೆಸ್​ನಲ್ಲಿ ಮತ್ತೆ ಅನುದಾನ ಸಂಬಂಧಿತ ವಾಕ್ಸಮರ​ ಶುರುವಾಗಿದೆ. ‘ಕೈ’ ಶಾಸಕನ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಹೊಸಪೇಟೆಯಲ್ಲಿ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಮತ್ತು ಶಾಸಕ ಗವಿಯಪ್ಪ ಮಧ್ಯೆ ವಾಕ್ಸಮರ ಜೋರಾಗಿದೆ. ಜೊತೆಗೆ ಬಿಜೆಪಿ ಶಾಸಕರು ಕೂಡ ಸರ್ಕಾರ ತಾರತಮ್ಯ ಮಾಡ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್​​ನಲ್ಲಿ ಮತ್ತೆ ಭುಗಿಲೆದ್ದ ಅನುದಾನ ವಾರ್: ‘ಕೈ’ ಶಾಸಕನ ವಿರುದ್ಧ ಪಕ್ಷದ ಮುಖಂಡರಿಂದಲೇ ವಾಗ್ದಾಳಿ
ಕಾಂಗ್ರೆಸ್​​ನಲ್ಲಿ ಮತ್ತೆ ಭುಗಿಲೆದ್ದ ಅನುದಾನ ವಾರ್
TV9 Web
| Updated By: Ganapathi Sharma|

Updated on: Nov 25, 2024 | 10:00 AM

Share

ಬೆಂಗಳೂರು, ನವೆಂಬರ್ 25: ಚುನಾವಣೆಗೂ ಮುನ್ನ ಕೆಲವು ದಿನಗಳ ಹಿಂದೆ ಕಾಂಗ್ರೆಸ್​ನಲ್ಲಿ ಸ್ಫೋಟಗೊಂಡಿದ್ದ ಅನುದಾನ ಅಸಮಾಧಾನದ ಬಾಂಬ್, ಇದೀಗ ಮತ್ತೆ ಸದ್ದು ಮಾಡುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ಅನುದಾನದ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಾಸಕ ಹೆಚ್​ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದಾರೆ.

ವಿಜಯನಗರ ಕ್ಷೇತ್ರಕ್ಕೆ ಅಂದಾಜು 150 ಕೋಟಿ ರೂಪಾಯಿ ಅನುದಾನ ಬಂದರೂ ಶಾಸಕ ಗವಿಯಪ್ಪ ಸುಳ್ಳು ಹೇಳುತ್ತಾರೆ ಎಂದು ಇಮಾಮ್ ನಿಯಾಜಿ ಅಸಮಾಧಾನ ಹೊರಹಾಕಿದ್ದಾರೆ. ಎರಡು ದಿನಗಳ ಹಿಂದಷ್ಟೇ, ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ ಎಂದು ಶಾಸಕ ಗವಿಯಪ್ಪ ಹೇಳಿದ್ದರು. ಇದಕ್ಕೆ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ದಾಖಲೆ ಸಮೇತ ತಿರುಗೇಟು ಕೊಟ್ಟಿದ್ದಾರೆ.

ಮತ್ತೊಂದೆಡೆ, ಕೊಪ್ಪಳ ಜಿಲ್ಲೆಯ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದಾರೆ. ಕೊಪ್ಪಳ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 140 ಕೋಟಿ ರೂಪಾಯಿ ಅನುದಾನ ಬಂದಿದೆ. ಆದರೆ, ಗಂಗಾವತಿ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನಾರ್ದನ ರೆಡ್ಡಿ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಸಚಿವ ಶಿವರಾಜ ತಂಗಡಗಿ, ಈ ಹಿಂದೆ ಯಾವ ರೀತಿ ಹಂಚಿಕೆ ಮಾಡಿದ್ದಾರೋ ಅದೇ ರೀತಿ ಹಂಚಿಕೆ ಮಾಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಕೋಮುಗಲಭೆ ಪ್ರಕರಣ: ಡಿಸಿ ವರದಿ ಪರಿಗಣಿಸದೆ ಕಾಟಾಚಾರಕ್ಕೆ ಪರಿಹಾರ, ಸಂತ್ರಸ್ತರ ಆಕ್ರೋಶ

ಇನ್ನು ಅನುದಾನ ವಿಚಾರವಾಗಿ ಮಾತನಾಡಿದ ಕಲ್ಯಾಣ ಕರ್ನಾಟಕ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್, ಕಲ್ಯಾಣ ಕರ್ನಾಟಕ ಮಂಡಳಿಯಲ್ಲಿ 5 ಸಾವಿರ ಕೋಟಿ ರೂ. ಅನುದಾನವಿದೆ. ಸುಮಾರು 4 ಸಾವಿರ ಕೊಟಿ ರೂ. ಈಗಾಗಲೇ ಹಂಚಲಾಗಿದೆ. ರೆಡ್ಡಿಯವರು ಚುನಾವಣೆ ಸೋಲಿನ ಹತಾಶೆಯಿಂದ ಮಾತನಾಡಿದ್ದಾರೆ ಎಂದಿದ್ದಾರೆ.

ಒಟ್ಟಿನಲ್ಲಿ ಅನುದಾನ ಹಂಚಿಕೆ ತಾರತಮ್ಯ ಆರೋಪ ಮತ್ತೆ ಸದ್ದು ಮಾಡುತ್ತಿದೆ. ಸ್ವತಃ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಬಿಜೆಪಿ ಶಾಸಕರೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ