AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Police Transfer: ಒಂದೇ ದಿನ 211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ, ಬೆಳಗಾಗುವಷ್ಟರಲ್ಲೇ ಕೆಲವರ ಟ್ರಾನ್ಸ್​ಫರ್​ಗೆ ತಡೆ ನೀಡಿದ ಸರ್ಕಾರ

ನಿನ್ನೆ (ಆಗಸ್ಟ್ 01) ಒಂದೇ ದಿನ ಬರೋಬ್ಬರಿ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಇಂದು ಬೆಳಗ್ಗೆ ಕೆಲವರ ವರ್ಗಾವಣೆಯನ್ನು ತಡೆ ಹಿಡಿದಿದೆ.

Police Transfer: ಒಂದೇ ದಿನ 211 ಪೊಲೀಸ್​ ಇನ್ಸ್​ಪೆಕ್ಟರ್ ವರ್ಗಾವಣೆ, ಬೆಳಗಾಗುವಷ್ಟರಲ್ಲೇ ಕೆಲವರ ಟ್ರಾನ್ಸ್​ಫರ್​ಗೆ ತಡೆ ನೀಡಿದ ಸರ್ಕಾರ
ವಿಧಾನಸೌಧ
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on:Aug 02, 2023 | 11:50 AM

ಬೆಂಗಳೂರು, (ಆಗಸ್ಟ್ 02): ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್​  ಸರ್ಕಾರದಲ್ಲಿ(Congress Government)  ಸರ್ಕಾರಿ ಅಧಿಕಾರಿಗಳ ವರ್ಗಾವಣೆ (Officers Transfer) ಜೋರಾಗಿದೆ. ನಿನ್ನೆ (ಆಗಸ್ಟ್ 01) ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್​ ಇನ್ಸ್​ಪೆಕ್ಟರ್​ಗಳ (Police Inspector) ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ​ ನಿನ್ನೆ ಬರೋಬ್ಬರಿ 211 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಈ ಪೈಕಿ 11 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆಯನ್ನು ಸರ್ಕಾರ ಏಕಾಏಕಿ ಇಂದು (ಆಗಸ್ಟ್ 02) ಬೆಳಗ್ಗೆ ಏಕಾಏಕಿ ತಡೆ ಹಿಡಿದಿದ್ದು, ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ; ಪರದಾಡುತ್ತಿರುವ ರೋಗಿಗಳು

ಯಾವ-ಯಾವ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ?

  • ರವಿ ಗೌಡ ಬಿ- ಯಶವಂತಪುರ ಟ್ರಾಫಿಕ್ ಸಂಚಾರ
  • ಯಶತಪುರ ಲಾ ಅಂಡ್ ಆರ್ಡರ್ – ಧನಂಜಯ್
  • ಲಕ್ಷ್ಮಣ್ ಜೆ – ನಂದಿನಿ ಲೇಔಟ್ ಪೊಲೀಸ್
  • ಅಶತ್ಥಗೌಡ- ಜಾನ್ಞಭಾರತಿ ಪೊಲೀಸ್ ಠಾಣೆ
  • ಗೋವಿಂದರಾಜು – ಪಿಣ್ಯ ಪೊಲೀಸ್ ಠಾಣೆ.
  • ಕೃಷ್ಣಕುಮಾರ್- ಬೇಗೂರು ಪೊಲೀಸ್ ಠಾಣೆ
  • ಜಗದೀಶ್ – ಕೆ ಎಸ್ ಲೇಔಟ್ ಠಾಣೆ
  • ವಜ್ರಮುನಿ – ಕೆ ಆರ್ ಮಾರ್ಕೆಟ್
  • ರವಿಕುಮಾರ್ – ಪುಟ್ಟೇನಹಳ್ಳಿ
  • ಅನಿಲ್‌ಕುಮಾರ್ – ಮಲ್ಲೇಶ್ವರಂ
  • ಜಿಗಣಿ – ಎಡ್ವಿನ್ ಪ್ರದೀಪ್

ಹೀಗೆ ಮೇಲ್ಕಾಣಿಸಿದ ಒಟ್ಟ 11 ಪೊಲೀಸ್​ ಇನ್ಸ್​ಪೆಕ್ಟರ್​ಗಳ ವರ್ಗಾವಣೆಗೆ ತಡೆ ನೀಡಿ DGIGP ಕಚೇರಿಯಿಂದ ಆದೇಶ ಹೊರಬಿದ್ದಿದೆ.

ಅಧಿಕಾರಿಗಳ ವರ್ಗಾವಣೆಯ ದಂಧೆ ನಡೆದಿದೆ ಎಂದು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಗಂಭೀರ ಮಾಡಿವೆ. ಇದರ ಮಧ್ಯೆ ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಹಸೀಲ್ದಾರ್‌, ಬಳಿಕ ಡಿವೈಎಸ್‌ಪಿಗಳ ವರ್ಗಾವಣೆ ಮಾಡಿತ್ತು. ಇದಾದ ಬಳಿಕ ನಿನ್ನೆ ಅಷ್ಟೇ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಲಾಗಿತ್ತು. ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ “ಕಾಸಿಗಾಗಿ ಪೋಸ್ಟಿಂಗ್” ಎಂಬ ಹೊಸ ವ್ಯವಸ್ಥೆಯನ್ನು ಜಾರಿಗೆ ತಂದ ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರ ವರ್ಗಾವಣೆಯನ್ನು ದಂಧೆಯನ್ನಾಗಿ ಬಳಸಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರು ಗೌಪ್ಯ ಸಭೆ ನಡೆಸಿದ ಮರು ದಿನವೇ ಡಿವೈಎಸ್ಪಿ/ಎಸಿಪಿಗಳ ವರ್ಗಾವಣೆಯಾಗಿದೆ.. ಭ್ರಷ್ಟರು, ಕಳ್ಳರು, ಸುಲಿಗೆಕೋರರನ್ನು ಸದೆಬಡಿಯಬೇಕಾದ ಪೊಲೀಸರಿಂದಲೇ ಲಂಚ ಪಡೆಯುತ್ತಿದೆ ಈ ಭಂಡ ಸರ್ಕಾರ ಎಂದು ಬಿಜೆಪಿ ಟ್ವೀಟ್​ ಮೂಲಕ ಸಿದ್ದರಾಮಯ್ಯ ಸರ್ಕಾರಕ್ಕೆ ತಿವಿದಿದೆ.

ನಿನ್ನೆ ಒಂದೇ ದಿನ 211 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಬಹುತೇಕ ಜಿಲ್ಲೆ, ಸಿಸಿಬಿ , ಗುಪ್ತ ವಾರ್ತೆಯ ಪೊಲೀಸ್ ಇನ್ ಸ್ಪೆಕ್ಟರ್‌ಗಳ ವರ್ಗಾವಣೆ ಆಗಿತ್ತು. ಇದರಲ್ಲಿ ಇದೀಗ ಕೆಲವರ ವರ್ಗಾವಣೆಯನ್ನು ದಿಢೀರ್ ತಡೆಹಿಡಿದಿರುವುದು ಚರ್ಚೆ ಹುಟ್ಟುಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:40 am, Wed, 2 August 23

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ