AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್​ನಲ್ಲಿ ಡಿನ್ನರ್ ಮತ್ತು ಡಿಶುಂ ಡಿಶುಂ ಪಾಲಿಟಿಕ್ಸ್; ಹತಾಶೆಗೊಂಡ ಹಿರಿಯರು; ಕಿವಿ ಹಿಂಡುತ್ತಾರಾ ಸುರ್ಜೆವಾಲ

Karnataka Congress Rift: ಕರ್ನಾಟಕ ಕಾಂಗ್ರೆಸ್​ನೊಳಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣಗಳ ನಡುವೆ ಬಹಿರಂಗ ಕಚ್ಚಾಟ ಅತಿರೇಕಕ್ಕೆ ಹೋಗುತ್ತಿದೆ. ಇದು ಹಿರಿಯ ನಾಯಕರನ್ನು ಆತಂಕಗೊಳಿಸಿದೆ. ಪಕ್ಷ ಉಳಿಸಲು ವಿವಿಧ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್​ನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಭಾನುವಾರ ಸಂಜೆ ಶಾಸಕಾಂಗ ಸಭೆ ನಡೆಸುತ್ತಿದ್ದು ಅಲ್ಲಿ ಈ ವಿಚಾರಗಳ ಪ್ರಸ್ತಾಪವಾಗಬಹುದು.

ಕರ್ನಾಟಕ ಕಾಂಗ್ರೆಸ್​ನಲ್ಲಿ ಡಿನ್ನರ್ ಮತ್ತು ಡಿಶುಂ ಡಿಶುಂ ಪಾಲಿಟಿಕ್ಸ್; ಹತಾಶೆಗೊಂಡ ಹಿರಿಯರು; ಕಿವಿ ಹಿಂಡುತ್ತಾರಾ ಸುರ್ಜೆವಾಲ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jan 12, 2025 | 9:22 AM

Share

ಬೆಂಗಳೂರು, ಜನವರಿ 12: ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಷ್ಟೇ ಒಗ್ಗಟ್ಟಿನ ಬಲ ಪ್ರದರ್ಶನ ತೋರಿದರೂ ಅದರ ಒಳಬೇಗುದಿ ಮತ್ತು ಆಂತರಿಕ ಕಚ್ಚಾಟ ಆಗಾಗ್ಗೆ ಬಹಿರಂಗಗೊಳ್ಳುತ್ತಲೇ ಇರುತ್ತದೆ. ಕೆಲ ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ಕೆಲ ನಾಯಕರು ಸಿಎಂ ಜೊತೆ ಡಿನ್ನರ್​ನಲ್ಲಿ ಪಾಲ್ಗೊಂಡಿದ್ದು ಸಾಕಷ್ಟು ಹುಬ್ಬೇರಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣಗಳ ನಡುವಿನ ಕಚ್ಚಾಟವು ಜಾತಿ ಸ್ವರೂಪದಂತಹ ಅತಿರೇಕಕ್ಕೆ ಹೋಗಿದೆ. ಇದು ಈಗ ರಾಜ್ಯ ಕಾಂಗ್ರೆಸ್​ನ ಹಿರಿಯ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವುದರಿಂದ ಪ್ರತಿಪಕ್ಷಗಳಿಗೆ ತಾವೇ ಅಸ್ತ್ರ ಕಟ್ಟಂಗೆ ಆಗುತ್ತದೆ. ಹಿರಿಯ ನಾಯಕರೇ ಈ ರೀತಿ ಬಹಿರಂಗವಾಗಿ ಟೀಕೆಗಳನ್ನು ಮಾಡಿದರೆ ಪಕ್ಷಕ್ಕೆ ಹಾನಿಯಾಗುವುದು ನಿಶ್ಚಿತ. ಇದಕ್ಕೆ ಕಡಿವಾಣ ಹಾಕದಿದ್ದರೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗಲಿದೆ ಎಂದು ಕೆಲ ಹಿರಿಯ ನಾಯಕರು ಬೇಸರ ಹೊರಹಾಕಿರುವುದು ತಿಳಿದುಬಂದಿದೆ.

ಮೊನ್ನೆ ಡಿಸಿಎಂ ಜೊತೆ ನಡೆದ ಸಭೆಯಲ್ಲಿ ಹಿರಿಯ ನಾಯಕರು ಈ ಆತಂಕ ತೋಡಿಕೊಂಡಿದ್ದರು. ಜನವರಿ 16, ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ನಾಯಕರು ಇದೇ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಸೆಹ್ರಾವತ್ ವಿರುದ್ಧ ಉಡುಪಿಯಲ್ಲಿ ಕೇಸ್ ದಾಖಲು

ಕಿವಿಹಿಂಡುತ್ತಾರಾ ಸುರ್ಜೆವಾಲ?

ಕರ್ನಾಟಕ ಕಾಂಗ್ರೆಸ್​ನ ಉಸ್ತುವಾರಿಯಾಗಿರುವ ರಣದೀಪ್ ಸಿಂಗ್ ಸುರ್ಜೆವಾಲ ಅವರು ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಗೆ ಗಾಂಧಿ ಭೇಟಿಯ ಶತಮಾನೋತ್ಸವ ಹಿನ್ನೆಲೆಯಲ್ಲಿ ಜನವರಿ 21ರಂದು ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ನಡೆಯಲಿದ್ದು, ಅದರ ಸಿದ್ಧತೆ ವಿಚಾರವಾಗಿ ಸುರ್ಜೆವಾಲ ಚರ್ಚಿಸಲಿದ್ದಾರೆ. ಇಂದು ಭಾನುವಾರ ಸಂಜೆ 6ಕ್ಕೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು ಸರ್ಜೆವಾಲ ಕೂಡ ಇರಲಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್​ನೊಳಗಿನ ಭಿನ್ನಮತದ ವಿಚಾರ ಚರ್ಚೆಗೆ ಬರಬಹುದು. ಡಿಸಿಎಂ ಅನುಪಸ್ಥಿತಿಯಲ್ಲಿ ಕೆಲ ಶಾಸಕರು ಔತಣಕೂಟದಲ್ಲಿ ಪಾಲ್ಗೊಂಡ ವಿಚಾರವೂ ಪ್ರಸ್ತಾಪವಾಗಬಹುದು. ಈ ಭಿನ್ನಮತ ಶಮನ ಮಾಡುವ ಗುರುತರ ಹೊಣೆ ಸುರ್ಜೆವಾಲಗೆ ಇದೆ.

ಸತೀಶ್ ಜಾರಿಕಿಹೊಳಿ ಮನೆಯಲ್ಲಿ ನಡೆದಿದ್ದ ಡಿನ್ನರ್ ಸಭೆ…

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿ ಇದ್ದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಈ ಔತಣಕೂಟದಲ್ಲಿದ್ದರು. ಸಿದ್ದರಾಮಯ್ಯ ಅವರ ಟೀಮ್​ನವರು ಎನ್ನಲಾದ ಹಲವು ಶಾಸಕರು ಮತ್ತು ನಾಯಕರು ಈ ಡಿನ್ನರ್​ನಲ್ಲಿ ಪಾಲ್ಗೊಂಡಿದ್ದರು. ಡಿಕೆ ಶಿವಕುಮಾರ್ ಅವರ ವರ್ತನೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ಈ ಸಭೆಯಲ್ಲಿ ಅಸಮಾಧಾನ ಹೊರಬಂದಿತು ಎನ್ನಲಾಗಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣ: 50ಕ್ಕೂ ಹೆಚ್ಚು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಹೆಸರು, ಅನ್ನದಾತರ ಅರೆಬೆತ್ತಲೆ ಧರಣಿ

ಕಾಂಗ್ರೆಸ್‌ನ ಭವಿಷ್ಯ ಮತ್ತು ಪಕ್ಷದ ಒಗ್ಗಟ್ಟು

ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರಕರಣದ ನಿರ್ವಹಣೆ, ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಧ್ಯಪ್ರವೇಶ ಇವು ಪ್ರಮುಖವಾಗಿ ಈ ಸಭೆಯಲ್ಲಿ ಸದ್ದು ಮಾಡಿವೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಸಿಎಂ ಕುರ್ಚಿ ಬಿಟ್ಟುಕೊಡಬಾರದು. ಒಂದು ವೇಳೆ ಒಪ್ಪಂದದ ಹೆಸರಿನಲ್ಲಿ ಸಿಎಂ ಸ್ಥಾನ ತ್ಯಜಿಸಿದರೆ, ಶಾಸಕಾಂಗ ಸಭೆಯಲ್ಲೇ ನೂತನ ಸಿಎಂ ಆಯ್ಕೆ ಆಗುವಂತಾಗಲಿ ಎಂದು ಈ ಸಿಎಂ ಆಪ್ತರು ಈ ಸಭೆಯಲ್ಲಿ ಸಿದ್ದರಾಮಯ್ಯರನ್ನು ಒತ್ತಾಯಿಸಿದರು ಎನ್ನುವ ಮಾಹಿತಿ ಮಧ್ಯಮಗಳಿಗೆ ಸಿಕ್ಕಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Sun, 12 January 25

ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ