ರಾಜ್ಯ ಕಾಂಗ್ರೆಸ್​ನಲ್ಲಿ ವಿರೋಧ ಪಕ್ಷದ ಸ್ಥಾನಕ್ಕೆ ಲಾಬಿ ಶುರು

ರಾಜ್ಯದಲ್ಲಿ ದೋಸ್ತಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಹೆಚ್ಚು ಕಡಿಮೆ ಒಂದೂವರೆ ತಿಂಗಳಾಗ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಆದ್ರೆ ಇದಕ್ಕೂ ಮುಂಚೆಯೇ ಕಾಂಗ್ರೆಸ್​ ಪಾಳಯದಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷದ ಸ್ಥಾನ ಉಳಿಸಿಕೊಳ್ಳಲು ಈಗಾಗಲೇ ಪ್ಲಾನ್ ಮಾಡಿದ್ದಾರೆ. ಮೊನ್ನೆ ವಿಧಾನಸಭೆಯಲ್ಲೂ ವಿರೋಧ ಪಕ್ಷದ ನಾಯಕ ಅಂತ ಪರೋಕ್ಷವಾಗಿಯೇ ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ಕೈ ಪಾಳಯದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಮೂಲ ಕಾಂಗ್ರೆಸ್ಸಿಗರ […]

ರಾಜ್ಯ ಕಾಂಗ್ರೆಸ್​ನಲ್ಲಿ ವಿರೋಧ ಪಕ್ಷದ ಸ್ಥಾನಕ್ಕೆ ಲಾಬಿ ಶುರು
ಸಾಧು ಶ್ರೀನಾಥ್​

Updated on: Sep 10, 2019 | 2:39 PM

ರಾಜ್ಯದಲ್ಲಿ ದೋಸ್ತಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರಕ್ಕೆ ಬಂದು ಹೆಚ್ಚು ಕಡಿಮೆ ಒಂದೂವರೆ ತಿಂಗಳಾಗ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಆದ್ರೆ ಇದಕ್ಕೂ ಮುಂಚೆಯೇ ಕಾಂಗ್ರೆಸ್​ ಪಾಳಯದಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷದ ಸ್ಥಾನ ಉಳಿಸಿಕೊಳ್ಳಲು ಈಗಾಗಲೇ ಪ್ಲಾನ್ ಮಾಡಿದ್ದಾರೆ. ಮೊನ್ನೆ ವಿಧಾನಸಭೆಯಲ್ಲೂ ವಿರೋಧ ಪಕ್ಷದ ನಾಯಕ ಅಂತ ಪರೋಕ್ಷವಾಗಿಯೇ ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ಕೈ ಪಾಳಯದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಮೂಲ ಕಾಂಗ್ರೆಸ್ಸಿಗರ ವಿರೋಧವಿದೆ.

ಇದೇ ಬೆಳವಣಿಗೆಯಲ್ಲಿ ಸೆ.4ರಂದು ಕಾಂಗ್ರೆಸ್​ನ ಹಿರಿಯ ನಾಯಕ ಹೆಚ್​.ಕೆ. ಪಾಟೀಲ್ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ಮಾಜಿ ಸಚಿವ ಹೆಚ್​ಕೆ ಪಾಟೀಲ್​ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಸೇರಿದಂತೆ ಮೂಲ ಕಾಂಗ್ರೆಸ್​ನ 20ಕ್ಕೂ ಹೆಚ್ಚು ಶಾಸಕರು ಪತ್ರದ ಮೂಲಕ ಬೆಂಬಲಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us