ಮುಂದಿನ ಮುಖ್ಯಮಂತ್ರಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದವರಿಗೆ ನೊಟೀಸ್: ಕೋಳಿವಾಡ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕರೂ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ಕೊಡುವ ಅಧಿಕಾರ ಶಾಸಕರಿಗೆ ಇಲ್ಲ ಎಂದು ಕೋಳಿವಾಡ ಹೇಳಿದರು.

ಮುಂದಿನ ಮುಖ್ಯಮಂತ್ರಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದವರಿಗೆ ನೊಟೀಸ್: ಕೋಳಿವಾಡ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 27, 2021 | 4:35 PM

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಬಹಿರಂಗ ಹೇಳಿಕೆ ನೀಡಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ನಗರದಲ್ಲಿ ಕಾಂಗ್ರೆಸ್ ಶಿಸ್ತು ಸಮಿತಿ ಸದಸ್ಯ ಕೆ.ಬಿ.ಕೋಳಿವಾಡ ಹೇಳಿದರು. ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಹೇಳಿಕೆ ನೀಡಿರುವ ಶಾಸಕರಿಗೆ ನೊಟೀಸ್ ಜಾರಿ ಮಾಡಲಾಗುವುದು. ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕು, ಶಿಸ್ತು ಸಮಿತಿ ಬಗ್ಗೆ ಯಾರೂ ಲಘುವಾಗಿ ಪರಿಗಣಿಸಬೇಡಿ ಎಂದು ಸಲಹೆ ಮಾಡಿದರು.

ಸಿಎಂ ಅಭ್ಯರ್ಥಿ ಬಗ್ಗೆ ಹೇಳಿದವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಕೆಪಿಸಿಸಿ ಶಿಸ್ತು ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಇನ್ನೊಂದು ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸಲು ಸಮಿತಿ ನಿರ್ಧರಿಸಿದೆ. ಶಾಸಕರಿಗೆ ನೋಟಿಸ್ ನೀಡಿ ಸಭೆಗೆ ಕರೆಸಬೇಕು. ಈಗ ಕ್ರಮಕೈಗೊಳ್ಳದಿದ್ದರೆ ಸಮಿತಿ ಬಗ್ಗೆ ಉಳಿದ ಶಾಸಕರೂ ಲಘುವಾಗಿ ಪರಿಗಣಿಸುವ ಅಪಾಯವಿದೆ ಎಂದು ಅವರು ತಿಳಿಸಿದರು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್, ಕೆಲವು ಶಾಸಕರು ನೀಡಿರುವ ಹೇಳಿಕೆಗಳ ಬಗ್ಗೆ ಚರ್ಚಿಸಿದ್ದೇವೆ. ಶಾಸಕರು ಏನು ಹೇಳಿದ್ದಾರೆಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಹೀಗಾಗಿ ಮುಂದಿನ ವಾರಕ್ಕೆ ಸಭೆಯನ್ನು ಮುಂದೂಡಿದ್ದೇವೆ. ಮುಂದಿನ ಮುಖ್ಯಮಂತ್ರಿ ಕುರಿತು ಹೀಗೆ ಬಹಿರಂಗ ಹೇಳಿಕೆಗಳನ್ನು ನೀಡುವುದು ಕಾಂಗ್ರೆಸ್ ಪಕ್ಷಕ್ಕೆ ಮಾರಕ ಎಂದು ನುಡಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕರೂ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ಕೊಡುವ ಅಧಿಕಾರ ಶಾಸಕರಿಗೆ ಇಲ್ಲ. ಪಕ್ಷಕ್ಕೆ ಬಹುಮತ ಸಿಕ್ಕ ಮೇಲೆ ಪಕ್ಷದ ಸಂಪ್ರದಾಯ ಅನುಸರಿಸಿ, ಯಾರು ಮುಖ್ಯಮಂತ್ರಿ ಎಂಬ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು.

ಮುನಿಯಪ್ಪ ಮನೆಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಕರ್ನಾಟಕದಲ್ಲಿ ಈಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ ಕೆಲ ಬೆಳವಣಿಗೆಗಳ ಕುರಿತು ಚರ್ಚಿಸಲು ಕಾಂಗ್ರೆಸ್ ನಾಯಕರು ಶನಿವಾರ ರಾತ್ರಿ ಹಿರಿಯ ಮುಖಂಡ ಮುನಿಯಪ್ಪ ನಿವಾಸದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ನಾಯಕರಾದ ಡಾ.ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್, ಮುನಿಯಪ್ಪ ಭಾಗಿಯಾಗಿದ್ದರು.

ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಿತು. ಪಕ್ಷದ ಈಚಿನ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಯಿತು. ಗೊಂದಲಕಾರಿ ಹೇಳಿಕೆಗಳನ್ನು ನೀಡಿರುವವರನ್ನು ಪ್ರಶ್ನಿಸಲು ಹಿರಿಯ ನಾಯಕರು ನಿರ್ಧರಿಸಿದರು. ಏನೇ ಆಗಲಿ ಒಮ್ಮೆ ಗಟ್ಟಿಯಾಗಿ ಮಾತಾಡಿಬಿಡೋಣ. ಇರುವ ಸಿಟ್ಟೆಲ್ಲ ಇಲ್ಲಿಯೇ ಮುಗಿದುಬಿಡಲಿ. ಹಗಲಿರುಳು ಕಚ್ಚಾಡುವ ಬದಲು ಒಮ್ಮೆಗೆ ಎಲ್ಲವನ್ನೂ ಗಟ್ಟಿಯಾಗಿ ಹೇಳಿ ಬಿಡೋಣ. ಮುಂದಾದರೂ ಪಕ್ಷ ಸರಿಹೋಗಬಹುದು ಎಂದು ಕೆಲವರು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಎಂದರೆ ಕೇವಲ ಇಬ್ಬರು ವ್ಯಕ್ತಿಗಳಲ್ಲ. ಕಾಂಗ್ರೆಸ್ ಕಟ್ಟಲು ನಾವೂ ಶ್ರಮ ಹಾಕಿದ್ದೇವೆ. ಇದೇ ರೀತಿ ಬಿಟ್ಟರೆ ಪಕ್ಷ ಹಾಳಾಗಲಿದೆ. ರಾಜ್ಯದಲ್ಲಿ ಪಕ್ಷ ಗಟ್ಟಿಯಾದರೆ ದೇಶದಲ್ಲಿ ಖಂಡಿತ ಗಟ್ಟಿಯಾಗುತ್ತದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿ.

ಮುಖ್ಯಮಂತ್ರಿ ಹುದ್ದೆಗೆ ರೇಸ್​: ಸುಧಾಕರ್ ವ್ಯಂಗ್ಯ ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಮುಖ್ಯಮಂತ್ರಿ ಹುದ್ದೆಗೆ ರೇಸ್ ಇದೆ. ಕಾಂಗ್ರೆಸ್ ದಲಿತ ಪರ, ಅಲ್ಪಸಂಖ್ಯಾತರ ಪರ ಅಂತಾರೆ. ಆದ್ರೆ ಅದೆಲ್ಲ ಬರೀ ವೋಟ್‌ಬ್ಯಾಂಕ್ ರಾಜಕಾರಣ ಅಷ್ಟೇ. ಕಾಂಗ್ರೆಸ್‌ನವರು ಯಾವ ದಲಿತರನ್ನು ಸಿಎಂ ಮಾಡಿದ್ದಾರೆ? ಇಲ್ಲಿಯವರೆಗೆ ಯಾರನ್ನ ಉದ್ಧಾರ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

(Karnataka Congress Politics Notice to Those Who give Statements about Future Chief Minister)

Published On - 3:57 pm, Sun, 27 June 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ