AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಹಂಚಿಕೆ: ಡಿಕೆ ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿಕೆಶಿ ಜತೆಗೆ ಏನೇನು ಮಾತುಕತೆ ನಡೆಯಿತು ಎಂಬ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ವಿವರಗಳು ಇಲ್ಲಿವೆ.

ಅಧಿಕಾರ ಹಂಚಿಕೆ: ಡಿಕೆ ಶಿವಕುಮಾರ್ ಜತೆಗಿನ ಮಾತುಕತೆ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Sunil MH
| Edited By: |

Updated on: Nov 26, 2025 | 2:11 PM

Share

ಬೆಂಗಳೂರು, ನವೆಂಬರ್ 26: ಕರ್ನಾಟಕ ಕಾಂಗ್ರೆಸ್​​ನಲ್ಲಿ (Congress) ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಆಪ್ತ ಬಳಗದ ನಾಯಕ, ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಂಗಳವಾರ ರಾತ್ರಿ ನಡೆದ ಭೇಟಿ ಹಾಗೂ ಮಾತುಕತೆ ಬಗ್ಗೆ ಸತೀಶ್ ಜಾರಕಿಹೊಳಿ ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಆಗಿದೆ. ಪಕ್ಷ ಸಂಘಟನೆ, ಮುಂದಿನ ಚುನಾವಣೆ ಬಗ್ಗೆ ಚರ್ಚೆ ಆಗಿದೆ. ಹೈಕಮಾಂಡ್ ಅಳೆದು ತೂಗಿ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿ: ಸತೀಶ್ ಜಾರಕಿಹೊಳಿ

ಡಿಕೆ ಶಿವಕುಮಾರ್​ ಅವರಿಗೂ ಸಿಎಂ ಆಗುವ ಆಸೆ ಇರುತ್ತದೆ. ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ತೀರ್ಮಾನಿಸಿದೆ. ಈಗಲೂ, ಗೊಂದಲದ ಸಮಯದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿ ಸಮಯ ಕೇಳುತ್ತೇನೆ. ಸಮಯ ಸಿಕ್ಕರೆ ನನ್ನ ಅಭಿಪ್ರಾಯ ಹೇಳುತ್ತೇನೆ. ಬದಲಾವಣೆ ಪರ್ವ ಏನಿಲ್ಲ. ಸಹಜವಾಗಿ ಡಿಕೆಶಿ ನನ್ನ ಭೇಟಿ ಮಾಡಿದ್ದಾರೆ. ಕೆಲವರನ್ನು ಮನೆಗೆ ಕರೆಸಿ ಭೇಟಿ ಆಗಿದ್ದಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಎಲ್ಲಾ ಸಚಿವರು, ಶಾಸಕರನ್ನು ಭೇಟಿಯಾಗಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಬಹುಶಃ ಕೊನೆಯವನು ನಾನೇ ಇರಬೇಕು. ಸಾಕಷ್ಟು ಬಾರಿ ಡಿಕೆಶಿವಕುಮಾರ್​ ಅವರು ನನ್ನನ್ನು ಭೇಟಿಯಾಗಿದ್ದಾರೆ. ಈ ಹಿಂದೆ ಮಾಜಿ ಸಂಸದ ಡಿ.ಕೆ.ಸುರೇಶ್ ಸಹ ಭೇಟಿಯಾಗಿದ್ದರು. ನಾವು ಕೂಡ ಡಿಕೆ ನಿವಾಸಕ್ಕೆ ಹೋಗಿ ಬಂದಿದ್ದೇವೆ ಎಂದರು.

ಅಧಿಕಾರ ಹಂಚಿಕೆ: ಎಲ್ಲ ನಾಯಕರ ಬಳಿ ಡಿಕೆ ಶಿವಕುಮಾರ್ ಮಾತುಕತೆ

ಅಧಿಕಾರ ಹಸ್ತಾಂತರ ವಿಚಾರವಾಗಿ ಎಲ್ಲ ನಾಯಕರ ಬಳಿಯೂ ಡಿಕೆ ಶಿವಕುಮಾರ್ ಪ್ರಸ್ತಾಪ ಮಾಡುತ್ತಿದ್ದಾರೆ. ತಮ್ಮನ್ನು ಭೇಟಿಯಾದ ಎಲ್ಲ ನಾಯಕರ ಬಳಿ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಧಿಕಾರ ಹಂಚಿಕೆ ಬಗ್ಗೆ ಮಾತುಕತೆ ನಡೆದಿತ್ತು. ಆ ಮಾತುಕತೆ ನಡೆದಾಗ ದೆಹಲಿಯಲ್ಲಿ 6 ಮಂದಿ ನಾಯಕರು ಉಪಸ್ಥಿತರಿದ್ದರು. ಹೀಗಾಗಿ ಅದನ್ನೇ ನಂಬಿ ಇಷ್ಟುದಿನ ಸುಮ್ಮನಿದ್ದೆ ಎಂದು ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪಟ್ಟಕ್ಕೆ ಫೈಟ್​ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್​​ಗೆ ಬಂತು ಹೈಕಮಾಂಡ್​​​ ಸಂದೇಶ

ಅಂದು ಮಾತುಕತೆಯಾಗಿದ್ದರೂ ಈವರೆಗೆ ಅಧಿಕಾರ ಹಂಚಿಕೆ ವಿಚಾರ ಮುನ್ನೆಲೆಗೆ ಬಾರದ ಹಿನ್ನೆಲೆ ಆ ಬಗ್ಗೆ ಚರ್ಚಿಸುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಜತೆ ಸಿಎಂ ಹಾಗೂ ಡಿಸಿಎಂ ಮಾತುಕತೆ ಸಂದರ್ಭದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾಗಿತ್ತು. ಆ ಸಂದರ್ಭದಲ್ಲಿ ಡಿಕೆ ಸುರೇಶ್ ಕೂಡ ಹಾಜರಿದ್ದರು ಎಂದು ತಮ್ಮನ್ನು ಭೇಟಿಯಾದ ಎಲ್ಲ ನಾಯಕರ ಡಿಕೆ ಶಿವಕುಮಾರ್ ಹೇಳುತ್ತಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್