AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಪುತ್ರ ಯತೀಂದ್ರ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ತಿರುಗೇಟು ನೀಡಲು ಶುರು ಮಾಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಹ ಮಾರ್ಮಿಕವಾಗಿ ಮಾತನಾಡಿದ್ದಾರೆ.

2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯImage Credit source: tv9
ಪ್ರಸನ್ನ ಗಾಂವ್ಕರ್​
| Edited By: |

Updated on: Feb 07, 2026 | 7:49 AM

Share

ಬೆಂಗಳೂರು, ಫೆಬ್ರವರಿ 7: ಕಾಂಗ್ರೆಸ್​ನಲ್ಲಿ (Congress) ಅಧಿಕಾರದ ಪಗಟೆಯಾಟ ನಿಂತಿಲ್ಲ. ಗದ್ದುಗೆ ಏರಲು ಒಂದು ಬಣ ರಣತಂತ್ರ ಹೆಣೆಯುತ್ತಿದ್ದರೆ, ಪಟ್ಟ ಬಿಟ್ಟುಕೊಡದಿರಲು ಮತ್ತೊಂದು ಬಣ ಪಟ್ಟು ಹಿಡಿದು ಕುಳಿತಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಆಡಿದ ಮಾತು ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಕಿಚ್ಚು ಹೊತ್ತಿಸಿದೆ. ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದಿದ್ದಾರೆ. ಯತೀಂದ್ರ ಮತ್ತೆ ಈ ಮಾತು ಹೇಳುವುದಕ್ಕೂ ಕಾರಣವಿದೆ. ದಾವಣಗೆರೆಯಲ್ಲಿ ಮಾತನಾಡಿದ್ದ ಶಾಸಕ ಬಸವರಾಜ್ ಶಿವಗಂಗಾ, ಅಧಿಕಾರ ಹಂಚಿಕೆ ಇದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಿಬಿಡಿ ಎಂದಿದ್ದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಪ್ತ ಈ ಮಾತು ಹೇಳುತ್ತಿದ್ದಂತೆಯೇ ಯತೀಂದ್ರ ನೇರವಾಗಿಯೇ ಕಣಕ್ಕಿಳಿದಿದ್ದಾರೆ. ಕೆಲವರು ಬದಲಾವಣೆಗೆ ಪ್ರಯತ್ನ ಪಟ್ಟರು. ಆದರೆ ಅದು ಸಕ್ಸಸ್ ಆಗಲಿಲ್ಲ. ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ಯಾವಾಗ ಯತೀಂದ್ರ ಈ ಮಾತುಗಳನ್ನಾಡಿದರೋ ಡಿಸಿಎಂ ಬಣದ ಶಾಸಕರು ಕೂಡ ಹೇಳಿಕೆಗಳನ್ನು ನೀಡಲು ಆರಂಭಿಸಿದರು. ಹಿಂದೆ ಇಟ್ಟಿದ್ದ ಎರಡು ಮುಹೂರ್ತ ಮಿಸ್ ಆಗಿದೆ. ಈ ಬಾರಿ ತಪ್ಪೋ ಮಾತೇ ಇಲ್ಲ ಎಂದು ಡಿಕೆ ಶಿವಕುಮಾರ್ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಅತ್ತ ಸಿಎಂ ಪುತ್ರನಿಗೆ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ನೇರವಾಗಿಯೇ ಟಾಂಗ್ ಕೊಟ್ಟಿದ್ದಾರೆ. ಯತೀಂದ್ರನೇ ನಮ್ಮ ಹೈಕಮಾಂಡ್. ಅವರು ಹೇಗೇ ಹೇಳ್ತಾರೋ ಹಾಗೇ ಕೇಳೋಣ ಎಂದು ವ್ಯಂಗ್ಯವಾಡಿದ್ದಾರೆ.

ಡಿಕೆ ಸಿಎಂ ಆಗಲು ಇನ್ನೊಂದು ಸ್ಟೆಪ್ ಬಾಕಿ ಎಂದ ಆಪ್ತರು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲೂ ಡಿಸಿಎಂ ಡಿಕೆಯದ್ದೇ ಜಪ ನಡೆದಿದೆ. ಡಿಕೆ ಶಿವಕುಮಾರ್ ಸಿಎಂ ಆಗಿ ಬಂದು ಕಾಂಗ್ರೆಸ್ ಭವನ ಉದ್ಘಾಟಿಸಲಿ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಇನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕೂಡ, ಡಿಕೆಶಿ ಸಿಎಂ ಆಗಲು ಇನ್ನೊಂದು ಸ್ಟೆಪ್ ಮಾತ್ರ ಬಾಕಿ ಎನ್ನುವ ಮೂಲಕ ಮತ್ತೊಂದು ಟ್ವಿಸ್ಟ್ ಕೊಟ್ಟಿದ್ದಾರೆ.

ಪ್ರಯತ್ನ ವಿಫಲ ಆಗಬಹುದು, ಪ್ರಾರ್ಥನೆ ವಿಫಲ ಆಗಲ್ಲ: ಡಿಕೆ ಶಿವಕುಮಾರ್

ಅತ್ತ ಆಪ್ತರೆಲ್ಲರೂ ಮಾತನಾಡಿದ ಬಳಿಕ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬೆಂಬಲಿಗರ ‘ಪ್ರಾರ್ಥನೆ’ ವಿಫಲ ಆಗಲ್ಲ. ಪ್ರಯತ್ನ ವಿಫಲ ಆಗಬಹುದು, ಪ್ರಾರ್ಥನೆ ವಿಫಲ ಆಗಲ್ಲ ಎಂದಿದ್ದಾರೆ. ಹೊರಗೆ ಇಷ್ಟೆಲ್ಲಾ ಆಗುತ್ತಿದ್ದರೂ ಪುತ್ರನ ಮಾತಿಗೆ ಸಿಎಂ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಹಿರಿಯ ಸಚಿವರು ಸಿಎಂ-ಡಿಸಿಎಂ ಬಣದ ವಾಕ್ಸಮರಕ್ಕೆ ಬ್ರೇಕ್ ಹಾಕಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ, ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ

ಒಟ್ಟಿನಲ್ಲಿ, ಕಾಂಗ್ರೆಸ್ ಬಣಗಳಲ್ಲಿ ಕುರ್ಚಿ ಕದನದ ಚರ್ಚೆ ನಡೆಯುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಶುಕ್ರವಾರವೂ ಬಜೆಟ್ ಸಿದ್ಧತೆಯ ಸಭೆಗಳನ್ನು ನಡೆಸಿದ್ದಾರೆ. ಆ ಮೂಲಕ ಯಾರಿಗೆ, ಎಲ್ಲಿ ಸಂದೇಶ ಮುಟ್ಟಿಸಬೇಕೋ ಅದನ್ನು ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?