ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ; ಸೌದೆ ಒಲೆಯಲ್ಲಿ ಬಜ್ಜಿ ಕರಿದು ಆಕ್ರೋಶ

| Updated By: ganapathi bhat

Updated on: Sep 08, 2021 | 8:41 PM

Congress Protest: ಕಾಂಗ್ರೆಸ್ ನಾಯಕರ ನಿಯೋಗದಿಂದ ಮನವಿ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಈ ಬಗ್ಗೆ ಮಾಹಿತಿ ನೀಡಿದೆ.

ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ; ಸೌದೆ ಒಲೆಯಲ್ಲಿ ಬಜ್ಜಿ ಕರಿದು ಆಕ್ರೋಶ
ಕಾಂಗ್ರೆಸ್ ಪ್ರತಿಭಟನೆ
Follow us on

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಲಾಗುವುದು. ಕಾಂಗ್ರೆಸ್ ನಾಯಕರ ನಿಯೋಗದಿಂದ ಮನವಿ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ಈ ಬಗ್ಗೆ ಮಾಹಿತಿ ನೀಡಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಹಿತ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಹಾಗೂ ವಿವಿಧ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಬೆಲೆ ಏರಿಕೆ ವಿರುದ್ಧ ಆಕ್ರೋಶ ಹೊರಹಾಕಿದೆ. ಇಂದೂ ಕೂಡ (ಸಪ್ಟೆಂಬರ್ 8) ಕರ್ನಾಟಕದ ವಿವಿಧ ಕಡೆಗಳಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆದಿದೆ.

ಮೋದಿ ಬಹಳ ಶಕ್ತಿಶಾಲಿ ಪ್ರಧಾನಿ ಎಂಬ ಭ್ರಮೆ ಇತ್ತು. ಆದರೆ ಅವರು ಅಂಬಾನಿ, ಅದಾನಿಯ ಮ್ಯಾನೇಜರ್ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಹೇಳಿಕೆ ನೀಡಿದ್ದಾರೆ. ಮೋದಿ ಜನಪರ ಪ್ರಧಾನಿಯಲ್ಲ, ಅಂಬಾನಿ, ಅದಾನಿ ಪರ ಪ್ರಧಾನಿ ಆಗಿದ್ದಾರೆ. ಈ ಬಗ್ಗೆ ಬೇಕಿದ್ದರೆ ಚರ್ಚೆಗೆ ಬನ್ನಿ ಎಂದು ರಿಜ್ವಾನ್ ಆಹ್ವಾನ ನೀಡಿದ್ದಾರೆ. ಗಾಂಧಿ ಪ್ರತಿಮೆಯ ಎದುರು ಚರ್ಚೆ ಮಾಡೋಣ ಬನ್ನಿ ಎಂದು ಬಿಜೆಪಿ ನಾಯಕರಿಗೆ ರಿಜ್ವಾನ್ ಅರ್ಷದ್ ಓಪನ್ ಚಾಲೆಂಜ್ ಹಾಕಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೋಲಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟಿಸಲಾಗಿದೆ. ಸೌದೆ ಒಲೆಯಲ್ಲಿ ಬಜ್ಜಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಬಡವರ ಪಾಲಿಗೆ ಅಚ್ಛೇ ದಿನ್ ಎಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಯಾದಗಿರಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದಿಂದ ಧರಣಿ ನಡೆಸಲಾಗಿದೆ. ಯಾದಗಿರಿಯ ಸುಭಾಷ್ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಕಾಂಗ್ರೆಸ್​ನಲ್ಲಿ ಎರಡು ಬಣ, ಒಳಜಗಳದಿಂದ ಬಿಜೆಪಿ ಲಾಭ: ಸತೀಶ್ ಜಾರಕಿಹೊಳಿ ಒಪ್ಪಿಗೆ

ಇದನ್ನೂ ಓದಿ: ಶೂನ್ಯ ಬಡ್ಡಿ ದರದಲ್ಲಿ ಪೆಟ್ರೋಲ್‌ಗೆ ಲೋನ್ ಕೊಡುತ್ತೇವೆ ಬನ್ನಿ, ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ವಿನೂತನ ಧರಣಿ

Published On - 8:40 pm, Wed, 8 September 21