ಅತ್ತ ಆಪರೇಷನ್ ಸಿಂಧೂರ್, ಇತ್ತ ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್​ಗೆ ಜನ ತರಾಟೆ

ಭಾರತೀಯ ಸೇನೆ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದೆ. ಆ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಲಾಗಿದೆ. ಈ ದಾಳಿ ಸಂದರ್ಭದಲ್ಲೇ ಕಾಂಗ್ರೆಸ್‌ ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಇದಕ್ಕೆ ಜನರಿಂದ ತೀವ್ರ ವಿರೋಧ ಬೆನ್ನಲ್ಲೇ ಇದೀಗ ಟ್ವೀಟ್ ಡಿಲೀಟ್ ಮಾಡಿದೆ.

ಅತ್ತ ಆಪರೇಷನ್ ಸಿಂಧೂರ್, ಇತ್ತ ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್​ಗೆ ಜನ ತರಾಟೆ
ಡಿಲೀಟ್​ ಆದ ಕಾಂಗ್ರೆಸ್​​ ಟ್ವೀಟ್​

Updated on: May 07, 2025 | 9:32 AM

ಬೆಂಗಳೂರು, ಮೇ 07: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್​ (operation sindoor) ಹೆಸರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಪಾಕ್​ನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮಾಡಿದೆ. ಭಯೋತ್ಪಾದಕರ 9 ನೆಲೆಗಳನ್ನು ಧ್ವಂಸಗೊಳಿಸುವ ಮೂಲಕ ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್​​ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿದ್ದ ಕರ್ನಾಟಕ ಕಾಂಗ್ರೆಸ್​ (Karnataka congress)  ಅನ್ನು ಜನರು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಆಕ್ರೋಶ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ತನ್ನ ಟ್ವೀಟ್​​ನ್ನು ಡಿಲೀಟ್ ಮಾಡಿದೆ.

ಆಕ್ರೋಶ ಬೆನ್ನಲ್ಲೇ ಟ್ವೀಟ್​ ಡಿಲೀಟ್

ಉಗ್ರರ ವಿರುದ್ಧ ಆಪರೇಷನ್​ ಸಿಂಧೂರ್ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್​ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್​ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಆದರೆ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ಸಿಗರು ಸೇರಿದಂತೆ ಜನರು ತೀವ್ರ ಕಿಡಿಕಾರಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್​ ಆ ಟ್ವೀಟ್​​ನ್ನು ಡಿಲೀಟ್​ ಮಾಡಿದೆ. ಬಳಿಕ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.

ಇದನ್ನೂ ಓದಿ
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
ಭಾರತೀಯ ಸೇನೆ ಕ್ಷಿಪಣಿ ದಾಳಿ, ಎದೆ ಝಲ್​ ಎನ್ನುವ ದೃಶ್ಯ ಇಲ್ಲಿದೆ
ಆಪರೇಷನ್ ಸಿಂಧೂರ್ ಪರಿಣಾಮ, ಭಾರತದ ವಿವಿಧೆಡೆ ವಿಮಾನ ಸಂಚಾರ ವ್ಯತ್ಯಯ
ಆಪರೇಷನ್ ಸಿಂಧೂರ್, ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಕಾಂಗ್ರೆಸ್​ ಟ್ವೀಟ್​

ವಿಶ್ವದ ಬಲಿಷ್ಠ ವಾಯುಪಡೆಗಳಲ್ಲಿ ಒಂದು ಎಂದು ಗುರುತಿಸಿಕೊಂಡಿರುವ ಭಾರತೀಯ ವಾಯುಪಡೆ ಪಾಕ್​ ಮೇಲೆ ದಾಳಿ ಮಾಡುವ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸೂಕ್ತ ಉತ್ತರ ನೀಡಿದೆ. ನಾವು ಸರ್ಕಾರದೊಂದಿಗೆ ಮತ್ತು ಭದ್ರತಾ ಪಡೆಗಯೊಂದಿಗೆ ನಿಲ್ಲುತ್ತೇವೆ ಎಂದು ರಾಜ್ಯ ಕಾಂಗ್ರೆಸ್​ ಟ್ವೀಟ್ ಮಾಡಿದೆ.

ಡಿಲೀಟ್ ಆದ ಕಾಂಗ್ರೆಸ್​ ಟ್ವೀಟ್​

Congress Tweet

ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಿದ ಡಿಕೆ ಶಿವಕುಮಾರ್​

ಇನ್ನು ಪಾಕ್​ನ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಕೂಡ ಟ್ವೀಟ್ ಮಾಡಿದ್ದು, ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಡಿಕೆ ಶಿವಕುಮಾರ್​ ಟ್ವೀಟ್​

ಪಹಲ್ಗಾಮ್​ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ದಾಳಿ ಮಾಡಲಾಗಿದೆ. ನಾವು ಭಾರತ ಸರ್ಕಾರದ ಪರ ಇದ್ದೇವೆ, ಸೇನೆಗೆ ನಮ್ಮ ಬೆಂಬಲ ಇದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:20 am, Wed, 7 May 25

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us