AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಹಂಚಿಕೆ ಕಿತ್ತಾಟದಲ್ಲಿ ಬಿದ್ದೋಯ್ತು ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ: ಸಿದ್ದು ಸರ್ಕಾರದ ವರ್ಚಸ್ಸು ದಿಢೀರ್ ಕುಸಿತ

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆ ಕಿತ್ತಾಟದಿಂದ ಸಿದ್ದರಾಮಯ್ಯ ಸರ್ಕಾರದ ವರ್ಚಸ್ಸು ಕುಸಿದಿರುವುದು ಸಿ-ವೋಟರ್ ಸಮೀಕ್ಷೆಯಿಂದ ಬಹಿರಂಗವಾಗಿದೆ. 2024ರ ಜನವರಿಯಿಂದ 2025ರ ನವೆಂಬರ್‌ ಅವಧಿಯಲ್ಲಿ ಸರ್ಕಾರದ ಜನಪ್ರಿಯತೆ ಗಣನೀಯವಾಗಿ ಇಳಿದಿದೆ ಮತ್ತು ಅತೃಪ್ತಿ ಹೆಚ್ಚಾಗಿದೆ. ಮುಂದಿನ ಸಿಎಂ ಆಗಿ ಬಿಜೆಪಿ/ಎನ್‌ಡಿಎಗೆ ಹೆಚ್ಚಿನ ಒಲವು ವ್ಯಕ್ತವಾಗಿದೆ.

ಅಧಿಕಾರ ಹಂಚಿಕೆ ಕಿತ್ತಾಟದಲ್ಲಿ ಬಿದ್ದೋಯ್ತು ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ: ಸಿದ್ದು ಸರ್ಕಾರದ ವರ್ಚಸ್ಸು ದಿಢೀರ್ ಕುಸಿತ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Ganapathi Sharma
|

Updated on: Nov 28, 2025 | 10:08 AM

Share

ಬೆಂಗಳೂರು, ನವೆಂಬರ್ 28: ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ತೀವ್ರಗೊಂಡಿರುವ ಅಧಿಕಾರ ಹಂಚಿಕೆ ಕಿತ್ತಾಟ ಸರ್ಕಾರದ ವರ್ಚಸ್ಸನ್ನೇ ಕುಗ್ಗಿಸುವ ಮಟ್ಟಕ್ಕೆ ಹೋಗಿರುವುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. 2024ರ ಆರಂಭದಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರಕಾರ ಹೊಂದಿದ್ದ ಜನಪ್ರಿಯತೆ ಈಗ ಏಕಾಏಕಿ ಕುಸಿತ ಕಂಡಿದೆ. ಆಡಳಿತದ ಬಗ್ಗೆ ಸಮಾಧಾನ ವ್ಯಕ್ತಪಡಿಸುವವರ ಸಂಖ್ಯೆ ಧಿಡೀರ್ ಹೆಚ್ಚಳವಾಗಿರುವುದು ಸಿ ವೋಟರ್ (CVoter Survey) ನಡೆಸಿರುವ ಸಮೀಕ್ಷೆಯಿಂದ ಬಹಿರಂಗವಾಗಿದೆ.

2024ರ ಜನವರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ಆಡಳಿತ ‘ತೃಪ್ತಿಕರವಾಗಿದೆ’ ಎಂದವರ ಪ್ರಮಾಣ ಶೇಕಡ 30.3 ರಷ್ಟಿತ್ತು. ಅದು ಈಗ (2025ರ ನವಂಬರ್ ಕೊನೆಯ ವಾರ) ಶೇಕಡ 26.9 ಕ್ಕೆ ಇಳಿಕೆಯಾಗಿದೆ. ಮತ್ತೊಂದೆಡೆ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ‘ಖಂಡಿತವಾಗಿಯೂ ತೃಪ್ತಿಕರವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದವರ ಪ್ರಮಾಣ ಹೆಚ್ಚಾಗಿದೆ. ಇದು 2024ರ ಜನವರಿ ಮೊದಲ ವಾರದಲ್ಲಿ 39ರಷ್ಟಿದ್ದರೆ, 2025ರ ನವೆಂಬರ್ ಕೊನೆಯ ವಾರದಲ್ಲಿ ಶೇಕಡ 42ಕ್ಕೆ ಏರಿಕೆಯಾಗಿದೆ.

ಬಿಜೆಪಿ ಅಥವಾ ಎನ್‌ಡಿಎ ಮುಖ್ಯಮಂತ್ರಿ ಪರ ಜನರ ಒಲವು

ಪ್ರಸಕ್ತ ಸನ್ನಿವೇಶದಲ್ಲಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬ ಸಮೀಕ್ಷೆಗೆ ಹೆಚ್ಚಿನವರು ಬಿಜೆಪಿ ಅಥವಾ ಎನ್‌ಡಿಎ ಎಂದು ಉತ್ತರಿಸಿದ್ದಾರೆ. ಬಿಜೆಪಿ ಅಥವಾ ಎನ್‌ಡಿಎ ನಾಯಕರು ಮುಖ್ಯಮಂತ್ರಿ ಆಗಬೇಕೆಂದು ಶೇಕಡ 47.2 ರಷ್ಟು ಎಸ್ಸಿ ಸಮುದಾಯದವರು, ಶೇಕಡ 56.3 ರಷ್ಟು ಎಸ್‌ಟಿ ಸಮುದಾಯದವರು, ಶೇಕಡ 59.3 ಓಬಿಸಿ, ಶೇಕಡ 14.8ರಷ್ಟು ಮುಸ್ಲಿಮರು ಒಲವು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಫೇವರಿಟ್!

ಕಾಂಗ್ರೆಸ್ ಪಕ್ಷದ ವಿಚಾರಕ್ಕೆ ಬಂದರೆ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ 41.7 ರಷ್ಟು ಎಸ್ಸಿ ಸಮುದಾಯದವರು, ಶೇಕಡ 35.4 ರಷ್ಟು ಎಸ್‌ಟಿ ಸಮುದಾಯದವರು, ಶೇಕಡ 63.3 ಓಬಿಸಿ, ಶೇಕಡ 74.9ರಷ್ಟು ಮುಸ್ಲಿಮರು ಒಲವು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಇತರರಿಗೆ ಹೋಲಿಸಿದರೆ ಸಿದ್ದರಾಮಯ್ಯನವರೇ ಫೇವರಿಟ್ ಆಗಿದ್ದಾರೆ.

ಇದನ್ನೂ ಓದಿ: ಪಟ್ಟದ ಫೈಟ್​​ಗೆ ಹೊಸ ಟ್ವಿಸ್ಟ್​​: ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಅಹಿಂದ ನಾಯಕರು

ಮತ್ತೊಂದೆಡೆ, ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಬಯಸಿದವರ ಪ್ರಮಾಣ ತುಂಬಾ ಕಡಿಮೆ ಇದೆ. 7.4 ರಷ್ಟು ಎಸ್ಸಿ ಸಮುದಾಯದವರು, ಶೇಕಡ 5.9 ರಷ್ಟು ಎಸ್‌ಟಿ ಸಮುದಾಯದವರು, ಶೇಕಡ 6.0 ಓಬಿಸಿ, ಶೇಕಡ 9.1ರಷ್ಟು ಮುಸ್ಲಿಮರು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಬಯಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಕಾಂಗ್ರೆಸ್ ನಾಯಕರ ಬಗ್ಗೆಯೂ ಜನ ಒಲವು ವ್ಯಕ್ತಪಡಿಸಿಲ್ಲ ಎಂಬುದು ಸಿ ವೋಟರ್ ಸಮೀಕ್ಷಾ ವರದಿಯಿಂದ ತಿಳಿದುಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್