Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಟ್ವಿಟರ್​ನಲ್ಲಿ ಕಾಂಗ್ರೆಸ್ ಪ್ರಶ್ನೆ

ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರೂ ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆರೋಪಿಯ ಮೊಬೈಲ್​ನೂ ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ.

ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಟ್ವಿಟರ್​ನಲ್ಲಿ ಕಾಂಗ್ರೆಸ್ ಪ್ರಶ್ನೆ
ಸಾಂದರ್ಭಿಕ ಚಿತ್ರ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Apr 05, 2021 | 11:45 AM

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ ರಾಜ್ಯ ಸರ್ಕಾರದ ಕ್ರಮಕ್ಕೆ ಟ್ವಿಟರ್​ನಲ್ಲಿ ಕರ್ನಾಟಕ ಕಾಂಗ್ರೆಸ್ ವ್ಯಂಗ್ಯ ಮಾಡಿದೆ. ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧಿಕೃತ ಟ್ವಿಟರ್ ಪೇಜ್​ನಲ್ಲಿ ಬರೆದುಕೊಂಡಿದೆ.

ಈ ಪ್ರಕರಣದಿಂದ ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಪೊಲೀಸರೂ ಆರೋಪಿ ತಲೆಮರೆಸಿಕೊಳ್ಳುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆರೋಪಿಯ ಮೊಬೈಲ್​ನೂ ಹಲವು ದಿನಗಳವರೆಗೆ ಪೊಲೀಸರು ವಶಪಡಿಸಿಕೊಂಡಿಲ್ಲ. ಸಾಕ್ಷ್ಯ ನಾಶಕ್ಕೆ ಸಾಕಷ್ಟು ಸಮಯ ಬೇಕಿತ್ತೋ ಏನೋ? ಎಂದು ಟ್ವಿಟರ್​ನಲ್ಲಿ ಪ್ರಶ್ನೆಮಾಡಿದೆ.

ಆರೋಪಿ ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸುತ್ತಾರೆ. ಬಳಿಕ ಹಿಂಬಾಗಿಲ ಮೂಲಕ ಪೊಲೀಸರು ಕಳಿಸಿಕೊಡುತ್ತಾರೆ. ಸಂತ್ರಸ್ತೆಗೆ ವಿಶ್ರಾಂತಿ ನೀಡದಂತೆ ಸತತ ವಿಚಾರಣೆ ನಡೆಸುತ್ತಾರೆ. ಆರೋಪಿಯನ್ನು ಕರೆದುಕೊಂಡು ಹೋಗಿ ಮಹಜರು ಬದಲಿಗೆ ಸಂತ್ರಸ್ತೆಯನ್ನು ಕಾಡಿಸಿ ಮಹಜರು ನಡೆಸಲಾಗುತ್ತಿದೆ ಎಂದು ಎಸ್ಐಟಿ ನಡೆ ಬಗ್ಗೆ ಕಾಂಗ್ರೆಸ್ ಪಕ್ಷ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

(Karnataka Congress Tweets and taunts at CD Case accused Ramesh Jarkiholi)

ಇದನ್ನೂ ಓದಿ

ಯಾರು ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ, ಡಿಕೆಶಿ ನಡುವೆ ಫೈಟ್ ಶುರುವಾಗಿದೆ: ಸಚಿವ ಜಗದೀಶ್ ಶೆಟ್ಟರ್

ವಿಚಾರಣೆಗೆ 15 ದಿನ ಕ್ವಾರಂಟೈನ್?: ‘ರಮೇಶ್ ಜಾರಕಿಹೊಳಿಗೆ ಕೊರೊನಾ ಇದೆ’ ಎಂದ ಸಚಿವ ಭೈರತಿ ಬಸವರಾಜು