ಬಾಕಿ ಬಿಲ್ ಪಾವತಿಗೆ ಕಾಂಗ್ರೆಸ್ ಸರ್ಕಾರಕ್ಕೆ ಜುಲೈ 15ರ ಗಡುವು ನೀಡಿದ ಗುತ್ತಿಗೆದಾರರ ಸಂಘ; ತಪ್ಪಿದರೆ ಪ್ರತಿಭಟನೆಯ ಎಚ್ಚರಿಕೆ

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಈ ವೇಳೆ, ಬಿಲ್‌ಗಳನ್ನು ಮಂಜೂರು ಮಾಡುವುದಾಗಿ ಭರವಸೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಬಾಕಿ ಬಿಲ್ ಪಾವತಿಗೆ ಕಾಂಗ್ರೆಸ್ ಸರ್ಕಾರಕ್ಕೆ ಜುಲೈ 15ರ ಗಡುವು ನೀಡಿದ ಗುತ್ತಿಗೆದಾರರ ಸಂಘ; ತಪ್ಪಿದರೆ ಪ್ರತಿಭಟನೆಯ ಎಚ್ಚರಿಕೆ
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ
Follow us
|

Updated on: Jul 05, 2023 | 4:39 PM

ಬೆಂಗಳೂರು: ಬಾಕಿ ಇರುವ ಬಿಲ್‌ಗಳನ್ನು ಜುಲೈ 15ರೊಳಗೆ ಪಾವತಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು (Karnataka State Contractors’ Association) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದಿನ ಬಿಜೆಪಿ ಸರಕಾರ ಆರಂಭಿಸಿದ್ದ ಕಾಮಗಾರಿಗಳನ್ನು ಸ್ಥಗಿತಗೊಳಿಸಲು ಆದೇಶಿಸಿದ್ದು, ಬಿಲ್​​ಗಳ ಮಂಜೂರಾತಿ ನಿಲ್ಲಿಸುವಂತೆ ಆದೇಶ ಹೊರಡಿಸಿತ್ತು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ. ಈ ವೇಳೆ, ಬಿಲ್‌ಗಳನ್ನು ಮಂಜೂರು ಮಾಡುವುದಾಗಿ ಭರವಸೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಜೂನ್ 26ರಂದು ಆದೇಶ ಹೊರಡಿಸಿದ್ದರೂ ಇನ್ನೂ ಬಿಲ್‌ಗಳು ಮಂಜೂರಾಗಿಲ್ಲ ಎಂದು ಸಿಎಂಗೆ ಸಂಘದ ಪತ್ರದಲ್ಲಿ ತಿಳಿಸಲಾಗಿದೆ.

ಆದೇಶವಿದ್ದರೂ ಅಧಿಕಾರಿಗಳು ಸರ್ಕಾರದಿಂದ ಯಾವುದೇ ಸುತ್ತೋಲೆ ಬಂದಿಲ್ಲ ಎಂದು ಹೇಳಿ ಬಿಲ್‌ಗಳನ್ನು ತೆರವುಗೊಳಿಸಲು ನಿರಾಕರಿಸುತ್ತಿದ್ದಾರೆ ಎಂದು ಸಂಘವು ಆರೋಪಿಸಿದೆ.

ಇದೀಗ ಗುತ್ತಿಗೆದಾರರು ಮುಖ್ಯಮಂತ್ರಿಗೆ ಪತ್ರ ಬರೆದು, ಹಲವು ಗುತ್ತಿಗೆದಾರರು ಆರ್ಥಿಕ ಸಂಕಷ್ಟದಲ್ಲಿದ್ದು ಬಿಲ್‌ಗಳನ್ನು ಮಂಜೂರು ಮಾಡಲು ಹೊಸದಾಗಿ ಆದೇಶ ಹೊರಡಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​​ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಕಾಲೆಳೆದ ಮಾಜಿ ಸಚಿವ ಆರ್​​ ಅಶೋಕ್​​

ಜುಲೈ 15 ರೊಳಗೆ ಬಿಲ್‌ಗಳನ್ನು ಮಂಜೂರು ಮಾಡದಿದ್ದರೆ ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸುವುದಾಗಿ ಸಂಘವು ಬೆದರಿಕೆ ಹಾಕಿದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸಂಘ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪಗಳು ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ಕಾಂಗ್ರೆಸ್​​ಗೆ ರಾಜಕೀಯವಾಗಿ ಹೋರಾಟಕ್ಕೆ ಹೊಸ ಅಸ್ತ್ರ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ