Bangalore Covid-19 Case Updates: ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ತಜ್ಞರು

|

Updated on: Mar 24, 2021 | 1:14 PM

ಜಿಲ್ಲೆಗಳಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದು ಎಂದು ತಜ್ಞರು ಎಚ್ಚರಿಸಿದ್ದಾರೆ.

Bangalore Covid-19 Case Updates: ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ ತಜ್ಞರು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ನಗರದಲ್ಲಿ ದಿನೇ ದಿನೇ ಕೊವಿಡ್ ಪ್ರಕರಣ ಹೆಚ್ಚಳವಾಗುತ್ತಲೇ ಇದೆ. ಜುಲೈವರೆಗೂ ಕೊರೊನಾ ಸೋಂಕು ಕಾಡುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿಯಿಂದ ಎಚ್ಚರಿಕೆಯ ಕೂಗು ಕೇಳಿ ಬಂದಿದೆ. ಈ ಕುರಿತಂತೆ ಡಾ.ಸಿ.ಎನ್. ಮಂಜುನಾಥ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಮೊದಲನೆ ಅಲೆಯಲ್ಲೂ ಕೊರೊನಾ ತೀವ್ರತೆ ಹೆಚ್ಚಾಗಿತ್ತು. ಮಾರ್ಚ್‌ನಿಂದ ಅಗಸ್ಟ್​ವರೆಗೂ ಕೊರೊನಾ ತೀವ್ರವಾಗಿತ್ತು. ಈಗ ಕೊರೊನಾ 2ನೇ ಅಲೆ ವೈರಸ್ ಜುಲೈವರೆಗೂ ​ ಜನರಿಗೆ ಕಾಡುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಏಕಾಏಕಿ ಕೊರೊನಾ ಸೋಂಕು ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ದಿನದಲ್ಲಿ ಕೊರೊನಾ ಆತಂಕ ಮತ್ತಷ್ಟು ಹೆಚ್ಚಲಿದೆ. ಈ‌ ಹಿನ್ನೆಲೆಯಲ್ಲಿ ಜನರು ಹೆಚ್ಚು ಜಾಗರೂಕರಾಗಿ ಇರಬೇಕು. ಹೊರಗಡೆ ಸುತ್ತಾಟ ಕಡಿಮೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಕೊರೊನಾ ಎರಡನೇ ಅಲೆ ಎಲ್ಲೆಡೆ ಹರಡುತ್ತಿದ್ದು, ಕೊರೊನಾ ಮಹಾಮಾರಿಯಿಂದ ಜನರು ಬೇಸತ್ತಿದ್ದಾರೆ.

ಇನ್ನು, ಮೈಸೂರಿನಲ್ಲಿ ಮತ್ತೆ ಕೊರೊನಾ ಸ್ಪೋಟ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ 100 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಟಿ.ನರಸೀಪುರ ತಾಲ್ಲೂಕಿನ ಶಾಲೆ 19 ಮಕ್ಕಳಿಗೆ ಕೊರೊನಾ ಪಾಸಿಟಿವ್ ವರದಿಯಾಗಿವೆ. ವಿದ್ಯಾರ್ಥಿಗಳಿಗೆ ಹೋಂ ಐಸೋಲೇಷನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಶಿಕ್ಷಕರು ಸೇರಿ 1,500 ಜನರ ಕೊರೊನಾ ಪರೀಕ್ಷೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಹೊರತುಪಡಿಸಿ ತಾಲ್ಲೂಕಿನ 30 ಮಂದಿಗೆ ಪಾಸಿಟಿವ್ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಯುವಕರಲ್ಲಿ ಹೆಚ್ಚು ಕೊರೊನಾ ದೃಢ
ಕೊರೊನಾ 2 ನೇ ಅಲೆಗೆ ಯುವಕ-ಯುವತಿಯರೇ ಹೆಚ್ಚು ಗುರಿಯಾಗುತ್ತಿದ್ದು, ಕಳೆದ 15 ದಿನಗಳಲ್ಲಿ 70 ಜನ ಯುವಕ ಹಾಗೂ ಯುವತಿಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 15 ದಿನಗಳಲ್ಲಿ 138 ಜನರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ವರದಿ ಪಾಸಿಟಿವ್​ ಬಂದಿರುವವರಲ್ಲಿ 138 ಜನರಲ್ಲಿ 70 ಜನ ಯುವಕರು, 11 ಮಕ್ಕಳು ಹಾಗೂ 57 ವೃದ್ಧರಾಗಿದ್ದಾರೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಮಾಹಿತಿ ನೀಡಿದ್ದಾರೆ.

ಮಂಡ್ಯ ಶೆಟ್ಟಹಳ್ಳಿ ಗ್ರಾಮದಲ್ಲಿ 12 ಜನರಿಗೆ ಕೊರೊನಾ ಪಾಸಿಟಿವ್
ಶ್ರೀರಂಗಪಟ್ಟಣ ತಾಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಕೊರೊನಾ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಒಂದೇ ದಿನ 12 ಸೋಂಕಿತರು ಗ್ರಾಮದಲ್ಲಿ ಪತ್ತೆಯಾಗಿದ್ದಾರೆ. ಗ್ರಾಮಕ್ಕೆ ತಹಶೀಲ್ದಾರ್ ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಹಬ್ಬಕ್ಕೆ ನಿರ್ಬಂಧ ಹೇರಲಾಗಿದ್ದು, ನೆಂಟರಿಷ್ಟರನ್ನು ಕರೆಯದಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಹೆಚ್ಚಿನ ಸೋಂಕಿತರ ಪತ್ತೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಬಾಗಲಕೋಟೆಯ ಉದ್ಯಮಿ ಮನೆಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ದೃಢ
ಪ್ರತಿಷ್ಠಿತ ಉದ್ಯಮಿ ಸಿಮೆಂಟ್ ಪ್ಯಾಕ್ಟರಿ ಬಡಾವಣೆಯಲ್ಲಿನ ಮನೆಯ ನಾಲ್ವರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ನಿನ್ನೆ ಮಾರ್ಚ್​(23) ಇದೇ ಕುಟುಂಬದ ಐವರಿಗೆ ಸೊಂಕು ಕಾಣಿಸಿಕೊಂಡಿತ್ತು. ಇಂದು ಪುನಃ ನಾಲ್ಕು ಜನರಿಗೆ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಡಿ.ಹೆಚ್​. ಒ ಅನಂತ ದೇಸಾಯಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೊರೊನಾ ಪ್ರಕರಣ; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ಸೋಂಕಿನ ವಿರುದ್ಧ ಗೆದ್ದು ಬಂದ ಬೆಂಗಳೂರು ಮಹಿಳೆಗೆ ಮತ್ತೊಮ್ಮೆ ಕೊರೊನಾ ಪಾಸಿಟಿವ್​

Published On - 1:11 pm, Wed, 24 March 21