Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,639 ಜನರಿಗೆ ಕೊರೊನಾ ದೃಢ; 36 ಮಂದಿ ಸಾವು

ಬೆಂಗಳೂರಲ್ಲಿ ಇಂದು ಒಂದೇ ದಿನ 419 ಜನರಿಗೆ ಕೊವಿಡ್-19 ಸೋಂಕು ದೃಢವಾಗಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,23,226 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,97,916 ಜನರು ಗುಣಮುಖರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,639 ಜನರಿಗೆ ಕೊರೊನಾ ದೃಢ; 36 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9kannada Web Team

| Edited By: ganapathi bhat

Jul 21, 2021 | 7:42 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 21) ಹೊಸದಾಗಿ 1,639 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,88,341ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,26,411 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 36 ಜನರ ಸಾವು ಸಂಭವಿಸಿದೆ. ಅದರಂತೆ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,262 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 25,645 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 419 ಜನರಿಗೆ ಕೊವಿಡ್-19 ಸೋಂಕು ದೃಢವಾಗಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,23,226 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,97,916 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರು ಮೃತಪಟ್ಟಿದ್ದಾರೆ. ಅದರಂತೆ ನಗರದಲ್ಲಿ ಈವರೆಗೆ 15,814 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 9,495 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 3, ಬಳ್ಳಾರಿ 14, ಬೆಳಗಾವಿ 61, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 419, ಚಾಮರಾಜನಗರ 22, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 92, ಚಿತ್ರದುರ್ಗ 29, ದಕ್ಷಿಣ ಕನ್ನಡ 190, ದಾವಣಗೆರೆ 13, ಧಾರವಾಡ 19, ಗದಗ 1, ಹಾಸನ 141, ಹಾವೇರಿ 2, ಕಲಬುರಗಿ 2, ಕೊಡಗು 63, ಕೋಲಾರ 35, ಕೊಪ್ಪಳ 5,ಮಂಡ್ಯ 60, ಮೈಸೂರು 160, ರಾಯಚೂರು 1, ರಾಮನಗರ 5, ಶಿವಮೊಗ್ಗ 37, ತುಮಕೂರು 63, ಉಡುಪಿ 104, ಉತ್ತರ ಕನ್ನಡ 48, ವಿಜಯಪುರ 10 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 7, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6, ಹಾಸನ, ಕೋಲಾರ ಜಿಲ್ಲೆಯಲ್ಲಿಂದು ತಲಾ 3, ಚಾಮರಾಜನಗರ, ಧಾರವಾಡ, ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 2, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,262 ಜನ ಸಾವನ್ನಪ್ಪಿದ್ದಾರೆ.

ಜುಲೈ 27ರಂದು ಸಂಭಾವ್ಯ ಕೊವಿಡ್ 3ನೇ ಅಲೆ‌ ಕುರಿತು ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ. ತಜ್ಞರ ಸಮಿತಿ ಜೊತೆ ಸಿಎಂ ಯಡಿಯೂರಪ್ಪ ಸಭೆ ನಿಗದಿಯಾಗಿದೆ.

ಇದನ್ನೂ ಓದಿ: ಕೋಲಾರ: ಕುಕ್ಕುಟೋದ್ಯಮಕ್ಕೆ ಕೊರೊನಾ ಮೂರನೇ ಅಲೆಯ ಭೀತಿ; ಕೋಳಿ ಫಾರಂ ಮಾಲೀಕರಲ್ಲಿ ಹೆಚ್ಚಿದ ಆತಂಕ

Tokyo Olympics: ಒಲಂಪಿಕ್ಸ್​ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ; ಜೆಕ್ ಗಣರಾಜ್ಯದ ಒಲಿಂಪಿಕ್ ತಂಡದ ಇಬ್ಬರಿಗೆ ಸೋಂಕು

(Karnataka Corona Covid19 New Cases Active Cases Death Toll Total Corona Virus details here)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada