Covid-19 Karnataka Update: ಕರ್ನಾಟಕದಲ್ಲಿ ಇಂದು ಒಂದೇ ದಿನ 49,058 ಜನರಲ್ಲಿ ಕೊರೊನಾ ಸೋಂಕು, 328 ಜನರು ನಿಧನ

Bengaluru Covid Update: ಬೆಂಗಳೂರಲ್ಲಿ ಇಂದು ಪತ್ತೆಯಾದ ಸೋಂಕಿತರನ್ನೂ ಸೇರಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,87,086ಕ್ಕೇರಿಕೆಯಾಗಿದೆ. ಈ ಪೈಕಿ 5,47,208 ಜನರು ಈಗಾಗಲೇ ಗುಣಮುಖರಾಗಿದ್ದಾರೆ.

Covid-19 Karnataka Update: ಕರ್ನಾಟಕದಲ್ಲಿ ಇಂದು ಒಂದೇ ದಿನ 49,058 ಜನರಲ್ಲಿ ಕೊರೊನಾ ಸೋಂಕು, 328 ಜನರು ನಿಧನ
ಕೊವಿಡ್ 19 ರೋಗಿಯ ಅಂತ್ಯ ಸಂಸ್ಕಾರದ ಹೊತ್ತಲ್ಲಿ ಪ್ರಾರ್ಥಿಸುತ್ತಿರುವ ಕುಟುಂಬ
Follow us
guruganesh bhat
|

Updated on:May 06, 2021 | 8:26 PM

ಬೆಂಗಳೂರು: ಕರ್ನಾಟಕದಲ್ಲಿ ಇಂದು ಒಂದೇ ದಿನ 49,058 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 328 ಜನರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 17,90,104ಕ್ಕೇರಿಕೆಯಾಗಿದೆ. ರಾಜಧಾನಿ ಬೆಂಗಳೂರು ನಗರವೊಂದರಲ್ಲೇ ಒಟ್ಟು 23,706 ಜನರಲ್ಲಿ ಇಂದು ಸೋಂಕು ಕಾಣಿಸಿಕೊಂಡಿದ್ದು 139 ಜನರ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿತರ ಪೈಕಿ 12,55,797 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮೃತಪಟ್ಟವರನ್ನೂ ಸೇರಿಸಿ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 17,212 ಜನರ ಸಾವನ್ನಪ್ಪಿದ್ದು, 5,17,075 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಇಂದು ಪತ್ತೆಯಾದ ಸೋಂಕಿತರನ್ನೂ ಸೇರಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,87,086ಕ್ಕೇರಿಕೆಯಾಗಿದೆ. ಈ ಪೈಕಿ 5,47,208 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 7,145 ಜನರ ಸಾವನ್ನಪ್ಪಿದ್ದು, 3,32,732 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಸೋಂಕಿತರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 23706, ಮೈಸೂರು 2531 ಸೋಂಕಿತರು, ತುಮಕೂರು 2418, ಕಲಬುರಗಿ 1652, ಉಡುಪಿ 1526, ಹಾಸನ 1403, ಮಂಡ್ಯ 1301, ದಕ್ಷಿಣ ಕನ್ನಡ 1191, ಬೆಂಗಳೂರು ಗ್ರಾಮಾಂತರ 963, ಬಳ್ಳಾರಿ 922, ಬೆಳಗಾವಿ 843, ಧಾರವಾಡ 824, ರಾಯಚೂರು 819, ಕೋಲಾರ 756, ಉತ್ತರ ಕನ್ನಡ 734, ಯಾದಗಿರಿ 721, ಚಾಮರಾಜನಗರ 707, ಕೊಡಗು 697, ದಾವಣಗೆರೆ 672, ಬಾಗಲಕೋಟೆ 655 , ಶಿವಮೊಗ್ಗ 635, ವಿಜಯಪುರ 662, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 452, ರಾಮನಗರ 413, ಕೊಪ್ಪಳ 357, ಬೀದರ್ 336, ಹಾವೇರಿ 236, ಗದಗ 191, ಚಿತ್ರದುರ್ಗ ಜಿಲ್ಲೆಯಲ್ಲಿ 126 ಸೋಂಕಿತರು ಪತ್ತೆಯಾಗಿದ್ದಾರೆ  ಎಂದು ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಮೃತಪಟ್ಟವರ ವಿವರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 328 ಜನರ ಸಾವನ್ನಪ್ಪಿದ್ದು, ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 139 ಜನರ ಬಲಿಯಾಗಿದ್ದಾರೆ.  ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 26 ಜನರು, ಮೈಸೂರು 18,  ಶಿವಮೊಗ್ಗದಲ್ಲಿ 16, ಕಲಬುರಗಿ, ತುಮಕೂರು 14, ಕೊಡಗು 12, ಹಾಸನ ಮತ್ತು ರಾಮನಗರ 9, ಬೆಂಗಳೂರು ಗ್ರಾಮಾಂತರ 7, ಬಾಗಲಕೋಟೆ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲಗಳಲ್ಲಿ 7, ವಿಜಯಪುರ 6, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐವರು, ಬೀದರ್ ಜಿಲ್ಲೆಯಲ್ಲಿ 4, ಚಿಕ್ಕಬಳ್ಳಾಪುರ, ದಾವಣಗೆರೆ, ಹಾವೇರಿ, ರಾಯಚೂರು ಜಿಲ್ಲೆಯಲ್ಲಿ ತಲಾ ಮೂವರು, ಗದಗ, ಮಂಡ್ಯ, ಯಾದಗಿರಿ ಜಿಲ್ಲೆಯಲ್ಲಿ ತಲಾ ಇಬ್ಬರು, ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೊನಾನಿಂದ ಒಬ್ಬರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 17,212 ಜನರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಕೊರೊನಾ ಟೆಸ್ಟ್ ರಿಪೋರ್ಟ್ ಬರುವ ಮುನ್ನವೇ ಸೋಂಕಿನ ಲಕ್ಷಣವಿದ್ದರೆ ಔಷಧಿಗಳ ಚೀಟಿ ನೀಡಲು ಆರೋಗ್ಯ ಇಲಾಖೆ ಸೂಚನೆ

(Karnataka Corona Update 49058 new covid 19 cases and 328 death today in Karnataka)

Published On - 7:59 pm, Thu, 6 May 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು