ಬೆಂಗಳೂರು: ಕರ್ನಾಟಕದಲ್ಲಿ ಇಂದು ಒಂದೇ ದಿನ 49,058 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 328 ಜನರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 17,90,104ಕ್ಕೇರಿಕೆಯಾಗಿದೆ. ರಾಜಧಾನಿ ಬೆಂಗಳೂರು ನಗರವೊಂದರಲ್ಲೇ ಒಟ್ಟು 23,706 ಜನರಲ್ಲಿ ಇಂದು ಸೋಂಕು ಕಾಣಿಸಿಕೊಂಡಿದ್ದು 139 ಜನರ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿತರ ಪೈಕಿ 12,55,797 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮೃತಪಟ್ಟವರನ್ನೂ ಸೇರಿಸಿ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 17,212 ಜನರ ಸಾವನ್ನಪ್ಪಿದ್ದು, 5,17,075 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರಲ್ಲಿ ಇಂದು ಪತ್ತೆಯಾದ ಸೋಂಕಿತರನ್ನೂ ಸೇರಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,87,086ಕ್ಕೇರಿಕೆಯಾಗಿದೆ. ಈ ಪೈಕಿ 5,47,208 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 7,145 ಜನರ ಸಾವನ್ನಪ್ಪಿದ್ದು, 3,32,732 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾವಾರು ಸೋಂಕಿತರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 23706, ಮೈಸೂರು 2531 ಸೋಂಕಿತರು, ತುಮಕೂರು 2418, ಕಲಬುರಗಿ 1652, ಉಡುಪಿ 1526,
ಹಾಸನ 1403, ಮಂಡ್ಯ 1301, ದಕ್ಷಿಣ ಕನ್ನಡ 1191, ಬೆಂಗಳೂರು ಗ್ರಾಮಾಂತರ 963, ಬಳ್ಳಾರಿ 922, ಬೆಳಗಾವಿ 843, ಧಾರವಾಡ 824, ರಾಯಚೂರು 819, ಕೋಲಾರ 756, ಉತ್ತರ ಕನ್ನಡ 734, ಯಾದಗಿರಿ 721, ಚಾಮರಾಜನಗರ 707, ಕೊಡಗು 697, ದಾವಣಗೆರೆ 672, ಬಾಗಲಕೋಟೆ 655 , ಶಿವಮೊಗ್ಗ 635, ವಿಜಯಪುರ 662, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 452, ರಾಮನಗರ 413, ಕೊಪ್ಪಳ 357,
ಬೀದರ್ 336, ಹಾವೇರಿ 236, ಗದಗ 191, ಚಿತ್ರದುರ್ಗ ಜಿಲ್ಲೆಯಲ್ಲಿ 126 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲಾವಾರು ಮೃತಪಟ್ಟವರ ವಿವರ
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 328 ಜನರ ಸಾವನ್ನಪ್ಪಿದ್ದು, ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 139 ಜನರ ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 26 ಜನರು, ಮೈಸೂರು 18, ಶಿವಮೊಗ್ಗದಲ್ಲಿ 16, ಕಲಬುರಗಿ, ತುಮಕೂರು 14, ಕೊಡಗು 12, ಹಾಸನ ಮತ್ತು ರಾಮನಗರ 9, ಬೆಂಗಳೂರು ಗ್ರಾಮಾಂತರ 7, ಬಾಗಲಕೋಟೆ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲಗಳಲ್ಲಿ 7, ವಿಜಯಪುರ 6, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐವರು, ಬೀದರ್ ಜಿಲ್ಲೆಯಲ್ಲಿ 4, ಚಿಕ್ಕಬಳ್ಳಾಪುರ, ದಾವಣಗೆರೆ, ಹಾವೇರಿ, ರಾಯಚೂರು ಜಿಲ್ಲೆಯಲ್ಲಿ ತಲಾ ಮೂವರು, ಗದಗ, ಮಂಡ್ಯ, ಯಾದಗಿರಿ ಜಿಲ್ಲೆಯಲ್ಲಿ ತಲಾ ಇಬ್ಬರು, ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೊನಾನಿಂದ ಒಬ್ಬರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 17,212 ಜನರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದಿನ 06/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/Cx1jRDCsca @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/QzpxrQVwsC
— K’taka Health Dept (@DHFWKA) May 6, 2021
ಇದನ್ನೂ ಓದಿ: ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ
ಕೊರೊನಾ ಟೆಸ್ಟ್ ರಿಪೋರ್ಟ್ ಬರುವ ಮುನ್ನವೇ ಸೋಂಕಿನ ಲಕ್ಷಣವಿದ್ದರೆ ಔಷಧಿಗಳ ಚೀಟಿ ನೀಡಲು ಆರೋಗ್ಯ ಇಲಾಖೆ ಸೂಚನೆ
(Karnataka Corona Update 49058 new covid 19 cases and 328 death today in Karnataka)
Published On - 7:59 pm, Thu, 6 May 21