ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 7) ಹೊಸದಾಗಿ 2743 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 35,601 ಜನ ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 27,87,111 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. 39,603 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 611 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಲ್ಲಿಂದು ಒಂದೇ ದಿನ ಸೋಂಕಿಗೆ 12 ಜನರ ಬಲಿಯಾಗಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,17,507ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 12 ಜನರ ಬಲಿಯಾಗಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,702 ಜನರ ಸಾವು ಸಂಭವಿಸಿದೆ. 12,17,507 ಸೋಂಕಿತರ ಪೈಕಿ 11,87,666 ಜನರು ಗುಣಮುಖರಾಗಿದ್ದಾರೆ. 14,138 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 2, ಬಳ್ಳಾರಿ 22, ಬೆಳಗಾವಿ 120, ಬೆಂಗಳೂರು ಗ್ರಾಮಾಂತರ 70, ಬೆಂಗಳೂರು ನಗರ 611, ಬೀದರ್ 6, ಚಾಮರಾಜನಗರ 47, ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 151, ಚಿತ್ರದುರ್ಗ 29, ದಕ್ಷಿಣ ಕನ್ನಡ 304, ದಾವಣಗೆರೆ 46, ಧಾರವಾಡ 20, ಗದಗ 6, ಹಾಸನ 220, ಹಾವೇರಿ 15, ಕಲಬುರಗಿ 14, ಕೊಡಗು 148, ಕೋಲಾರ 73, ಕೊಪ್ಪಳ 15, ಮಂಡ್ಯ 95, ಮೈಸೂರು 248, ರಾಯಚೂರು 7, ರಾಮನಗರ 34,ಶಿವಮೊಗ್ಗ 149, ತುಮಕೂರು 112, ಉಡುಪಿ 101, ಉತ್ತರ ಕನ್ನಡ 40, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ ಇಂದು 7 ಜನರಿಗೆ ಕೊರೊನಾ ದೃಢಪಟ್ಟಿದೆ.
ಜಿಲ್ಲಾವಾರು ಮೃತರ ವಿವರ
ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 75 ಜನ ಸಾವು ಸಂಭವಿಸಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 12 ಜನ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಜನ, ಬಳ್ಳಾರಿ ಜಿಲ್ಲೆಯಲ್ಲಿ 7 ಜನ, ಧಾರವಾಡ ಜಿಲ್ಲೆಯಲ್ಲಿ ಕೊರೊನಾಗೆ 6 ಜನ, ಬೆಳಗಾವಿ ಜಿಲ್ಲೆಯಲ್ಲಿ ಐವರು, ಕೊಡಗು, ಕೋಲಾರ ಜಿಲ್ಲೆಯಲ್ಲಿಂದು ತಲಾ ನಾಲ್ವರು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿಂದು ತಲಾ ಮೂವರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿ ಇಂದು ಇಬ್ಬರು, ಚಾಮರಾಜನಗರ, ಹಾಸನ ಜಿಲ್ಲೆಯಲ್ಲಿ, ಕೊಪ್ಪಳ, ರಾಯಚೂರು, ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಕೊರೊನಾದಿಂದ ಸಾವನ್ನಪ್ಪಿದ ಆರ್ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ
Published On - 8:26 pm, Wed, 7 July 21