AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,869 ಜನರಿಗೆ ಕೊರೊನಾ ದೃಢ; 42 ಮಂದಿ ಸಾವು

ಇಂದು ಕೊರೊನಾ ಸೋಂಕಿನಿಂದ 42 ಜನ ಸಾವನ್ನಪ್ಪಿದ್ದಾರೆ. ತನ್ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,121 ಜನರ ಸಾವು ಸಂಭವಿಸಿದೆ. 30,082 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,869 ಜನರಿಗೆ ಕೊರೊನಾ ದೃಢ; 42 ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 17, 2021 | 9:01 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 17) ಹೊಸದಾಗಿ 1,869 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,16,013 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 42 ಜನ ಸಾವನ್ನಪ್ಪಿದ್ದಾರೆ. ತನ್ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,121 ಜನರ ಸಾವು ಸಂಭವಿಸಿದೆ. 30,082 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 432 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,21,803 ಕ್ಕೆ ಏರಿಕೆಯಾಗಿದೆ. ಆ ಪೈಕಿ 11,93,848 ಜನರು ಗುಣಮುಖರಾಗಿದ್ದಾರೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 6 ಜನರು ಮೃತಪಟ್ಟಿದ್ದಾರೆ. ಅದರಂತೆ, ಕೊರೊನಾದಿಂದ ಈವರೆಗೆ 15,787 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ 12,167 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಇಲ್ಲಿದೆ ಬಾಗಲಕೋಟೆ 4, ಬಳ್ಳಾರಿ 11, ಬೆಳಗಾವಿ 97, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 432, ಬೀದರ್ 1, ಚಾಮರಾಜನಗರ 15, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 101, ಚಿತ್ರದುರ್ಗ 15, ದಕ್ಷಿಣ ಕನ್ನಡ 218, ದಾವಣಗೆರೆ 21, ಧಾರವಾಡ 24, ಹಾಸನ 173, ಹಾವೇರಿ 14, ಕಲಬುರಗಿ 6, ಕೊಡಗು 51, ಕೋಲಾರ 46, ಕೊಪ್ಪಳ 1, ಮಂಡ್ಯ 37, ಮೈಸೂರು 207, ರಾಯಚೂರು 3, ರಾಮನಗರ 11, ಶಿವಮೊಗ್ಗ 83, ತುಮಕೂರು 92, ಉಡುಪಿ 94, ಉತ್ತರ ಕನ್ನಡ 49, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 6 ಜನರ ಬಲಿಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 6 ಜನ, ಮೈಸೂರು ಜಿಲ್ಲೆಯಲ್ಲಿ 7, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಕೋಲಾರ ಜಿಲ್ಲೆಯಲ್ಲಿ 4, ಹಾಸನ, ಮಂಡ್ಯ ಜಿಲ್ಲೆಯಲ್ಲಿ ತಲಾ 3, ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 2, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಉಡುಪಿ, ಚಿಕ್ಕಬಳ್ಳಾಪುರ, ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ ಹಿನ್ನೆಲೆ; 2 ತಿಂಗಳ ಹಿಂದೆ ತೀರಿಕೊಂಡ ಮಹಿಳೆಗೆ ಈಗ ಕೊವಿಡ್ ಪಾಸಿಟಿವ್ ವರದಿ ತಯಾರಿ

ಕೊರೊನಾ ಆತಂಕದ ಮಧ್ಯೆ ಕಾಣಿಸಿಕೊಂಡ ಮಂಕಿಪಾಕ್ಸ್​​; ಕಳೆದ 20 ದಶಕಗಳಲ್ಲಿ ಪತ್ತೆಯಾದ ಮೊದಲ ಪ್ರಕರಣ

Published On - 8:58 pm, Sat, 17 July 21

Follow Us
Web contact
Web contact

TV9 Kannada

Read More