AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Coronavirus: ಕರ್ನಾಟಕದಲ್ಲಿ ಮುಂದಿನ ತಿಂಗಳು ಕೊವಿಡ್ ಮೂರನೇ ಅಲೆ ಶುರು; ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ

Covid 3rd Wave in Karnataka | ಕರ್ನಾಟಕದಲ್ಲಿ ಅಕ್ಟೋಬರ್​- ನವೆಂಬರ್ ತಿಂಗಳಲ್ಲಿ ಕೊರೊನಾ ಮೂರನೇ ಅಲೆ ವಿಪರೀತವಾಗಲಿದೆ ಎಂದು ತಿಳಿಸಿರುವ ತಾಂತ್ರಿ ಸಲಹಾ ಸಮಿತಿ ಕರ್ನಾಟಕದಲ್ಲಿ ಕೊವಿಡ್ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.

Karnataka Coronavirus: ಕರ್ನಾಟಕದಲ್ಲಿ ಮುಂದಿನ ತಿಂಗಳು ಕೊವಿಡ್ ಮೂರನೇ ಅಲೆ ಶುರು; ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Sep 12, 2021 | 1:00 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಕೇಸುಗಳ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಕಳೆದೊಂದು ವಾರದಿಂದ ಕೊವಿಡ್ ಕೇಸುಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂವನ್ನು ಕೂಡ ತೆರವುಗೊಳಿಸಲಾಗಿದೆ. ಆದರೂ ಮುಂದಿನ ತಿಂಗಳು ಅಂದರೆ ಅಕ್ಟೋಬರ್​ನಲ್ಲಿ ಕರ್ನಾಟಕದಲ್ಲಿ ಕೊವಿಡ್ ಮೂರನೇ ಅಲೆ ಶುರುವಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ (TAC) ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಅಕ್ಟೋಬರ್​- ನವೆಂಬರ್ ತಿಂಗಳಲ್ಲಿ ಕೊರೊನಾ ಮೂರನೇ ಅಲೆ ವಿಪರೀತವಾಗಲಿದೆ ಎಂದು ತಿಳಿಸಿರುವ ತಾಂತ್ರಿ ಸಲಹಾ ಸಮಿತಿ ಕರ್ನಾಟಕದಲ್ಲಿ ಕೊವಿಡ್ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಒಂದುವೇಳೆ ರಾಜ್ಯದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಸರಿಯಾಗಿ ಜಾರಿಗೆ ತರದಿದ್ದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದೆ.

ಈ ತಿಂಗಳಿನಿಂದ ಸಾಲು-ಸಾಲು ಹಬ್ಬಗಳು ಇರುವುದರಿಂದ ಕೊರೊನಾ ಮಾರ್ಗಸೂಚಿಗಳನ್ನು ಕಠಿಣಗೊಳಿಸದಿದ್ದರೆ ಮುಂದಿನ ತಿಂಗಳ ವೇಳೆಗೆ ಕೊರೊನಾ ಕೇಸುಗಳು ಮತ್ತೆ ಹೆಚ್ಚಾಗಲಿದೆ ಎಂದು ಟಿಎಸಿ ಹೇಳಿದೆ.

ಈ ಹಂತದಲ್ಲಿ ಕೊವಿಡ್ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುವುದು ಬಹಳ ಮುಖ್ಯ. ಹಬ್ಬಗಳ ದಿನಗಳಲ್ಲಿ ಹೆಚ್ಚಿನ ಜನರು ಸೇರದಂತೆ ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಅತಿ ಹೆಚ್ಚು ಪರಿಣಾಮ ಬೀರಲಿದೆ ಎಂದು ಈಗಾಗಲೇ ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಟಿಎಸಿ ತಿಳಿಸಿದೆ.

ಈ ವರ್ಷ ಮತ್ತೆ ಲಾಕ್​ಡೌನ್ ಘೋಷಣೆ ಮಾಡಿದ್ದರಿಂದ ಕಳೆದ ಏಪ್ರಿಲ್ ತಿಂಗಳಿಂದ ಕರ್ನಾಟಕದಲ್ಲಿ ಕೊರೊನಾ ಕೇಸುಗಳು ಕೊಂಚ ನಿಯಂತ್ರಣಕ್ಕೆ ಬರುತ್ತಿವೆ. ಇದೀಗ ಹಬ್ಬದ ನೆಪದಲ್ಲಿ ಜನರು ಮತ್ತೆ ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿದರೆ ಕರ್ನಾಟಕದಲ್ಲಿ ಕೊವಿಡ್ ಮೂರನೇ ಅಲೆ ವಿಪರೀತಕ್ಕೆ ಹೋಗಲಿದೆ ಎಂದು ಟಿಎಸಿ ಅಭಿಪ್ರಾಯಪಟ್ಟಿದೆ.

ಕರ್ನಾಟಕದಲ್ಲಿ ವಿಪರೀತ ಮಳೆಯೂ ಆಗುತ್ತಿರುವುದರಿಂದ ಈ ತಿಂಗಳು ಮಳೆ, ಚಳಿಯಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಉಲ್ಬಣಗೊಳ್ಳುತ್ತದೆ. ಎರಡು ಡೋಸ್ ಕೊರೊನಾ ಲಸಿಕೆ ಪಡೆದವರಿಗೂ ಸೋಂಕು ಕಂಡುಬರುತ್ತಿದೆ. ಒಂದು ತಿಂಗಳಲ್ಲಿ ಮಂಗಳೂರು, ಬೆಂಗಳೂರು, ಕೋಲಾರ, ಮೈಸೂರಿನ ಅಪಾರ್ಟ್​ಮೆಂಟ್​ಗಳು, ನರ್ಸಿಂಗ್ ಹಾಸ್ಟೆಲ್​ಗಳಲ್ಲಿ ಕೊವಿಡ್ ಕೇಸುಗಳು ಹೆಚ್ಚಾಗಿ ವರದಿಯಾಗುತ್ತಿದೆ. ಇದೇ ರೀತಿ ಪರಿಸ್ಥಿತಿಯಿಂದಲೇ ರಾಜ್ಯದಲ್ಲಿ 2ನೇ ಅಲೆ ತಾರಕಕ್ಕೆ ಏರಿತು ಎಂಬುದನ್ನು ನಾವು ಮರೆಯಬಾರದು. ಇದೀಗ ಮತ್ತೆ ಅದೇ ತಪ್ಪು ಮಾಡಿದರೆ 3ನೇ ಅಲೆಯ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ತಾಂತ್ರಿ ಸಲಹಾ ಸಮಿತಿ ಎಚ್ಚರಿಸಿದೆ.

ಕೊರೊನಾ ಮೂರನೇ ಅಲೆ ಮಕ್ಕಳಿಗೆ ಕಂಟಕವಾಗುವ ಸಾಧ್ಯತೆ ಇದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಸೋಂಕು ಹರಡಲಿದೆ ಎನ್ನಲಾಗಿದೆ. ಎರಡನೇ ಅಲೆಯ ಸಂದರ್ಭದಲ್ಲಿ ಸೋಂಕಿತರಾದ ಮಕ್ಕಳ ಸಂಖ್ಯೆಗಿಂತಲೂ 7 ಪಟ್ಟು ಈ ಬಾರಿ ಸೋಂಕಿತರ ಮಕ್ಕಳ ಪ್ರಮಾಣ ಹೆಚ್ಚಾಗಲಿದೆ ಎಂದು ತಜ್ಞರು ಸುಳಿವು ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ನಿನ್ನೆ ಹೊಸದಾಗಿ 801 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,60,932 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,06,746 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,487 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 207 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,41,170 ಕ್ಕೆ ಏರಿಕೆಯಾಗಿದೆ. 12,41,170 ಸೋಂಕಿತರ ಪೈಕಿ 12,17,893 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 16,047 ಜನರು  ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 801 ಜನರಿಗೆ ಕೊರೊನಾ ದೃಢ; 15 ಮಂದಿ ಸಾವು

ಕೊರೊನಾ ಟೆಸ್ಟ್ ಫ್ರೀ ಅಂತಾ ವಾರಕ್ಕೆ 2 ತಿಂಗಳಿಗೆ 15 ಬಾರಿ ಟೆಸ್ಟ್, ಸುಖಾಸುಮ್ಮನೆ ಟೆಸ್ಟ್ ಮಾಡಿಸುತ್ತಿರುವವರ ಪಟ್ಟಿ ತಯಾರಿ

(Covid Third Wave Could Hit Karnataka Next Month Says Technical Advisory Committee)

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?