Covid-19 Karnataka Update: ಕರ್ನಾಟಕದಲ್ಲಿ ಇಂದು 19,067 ಜನರಿಗೆ ಕೊರೊನಾ ದೃಢ, 81 ಸಾವು

ಬೆಂಗಳೂರು ಮಹಾನಗರದಲ್ಲಿ ಇಂದು ಒಂದೇ ದಿನ 12,793 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿಗೆ 60 ಜನರ ಬಲಿಯಾಗಿದ್ದಾರೆ.

Covid-19 Karnataka Update: ಕರ್ನಾಟಕದಲ್ಲಿ ಇಂದು 19,067 ಜನರಿಗೆ ಕೊರೊನಾ ದೃಢ, 81 ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 18, 2021 | 7:01 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭಾನುವಾರ (ಏಪ್ರಿಲ್ 18) ಒಟ್ಟು 19,067 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 81 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ಮಹಾನಗರದಲ್ಲಿ ಇಂದು ಒಂದೇ ದಿನ 12,793 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿಗೆ 60 ಜನರ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆಯು 11,61,1065ಕ್ಕೆ (11.61 ಲಕ್ಷ) ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ 13,351 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,14,152 (10.14 ಲಕ್ಷ) ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,33,543 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 12,793 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 5,46,635ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 60 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,123 ಜನರು ಸಾವನ್ನಪ್ಪಿದ್ದಾರೆ. 5,46,635 ಸೋಂಕಿತರ ಪೈಕಿ 4,43,614 ಜನರು ಗುಣಮುಖರಾಗಿದ್ದಾರೆ. 97,897 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 12,793 ಮಂದಿಯಲ್ಲಿ ಭಾನುವಾರ (ಏಪ್ರಿಲ್ 18) ಕೊರೊನಾ ಸೋಂಕು ದೃಢಪಟ್ಟಿದೆ. ಉಳಿದಂತೆ ಮೈಸೂರು 777, ಕಲಬುರಗಿ 671, ಬೀದರ್ 469, ತುಮಕೂರು 494, ಮಂಡ್ಯ 338, ಧಾರವಾಡ 265, ಬೆಂಗಳೂರು ಗ್ರಾಮಾಂತರ 245, ದಕ್ಷಿಣ ಕನ್ನಡ 272, ಬಳ್ಳಾರಿ 238, ವಿಜಯಪುರ 200, ಚಿಕ್ಕಬಳ್ಳಾಪುರ 190, ಬಾಗಲಕೋಟೆ 104, ಬೆಳಗಾವಿ 129, ಚಾಮರಾಜನಗರ 102, ಚಿಕ್ಕಮಗಳೂರು 81, ಚಿತ್ರದುರ್ಗ 102, ದಾವಣಗೆರೆ 133, ಗದಗ 48, ಹಾವೇರಿ 43, ಕೊಡಗು 44, ಕೋಲಾರ 175, ಕೊಪ್ಪಳ 65, ಉಡುಪಿ 152, ರಾಯಚೂರು 133, ರಾಮನಗರ 122, ಶಿವಮೊಗ್ಗ 156, ಉತ್ತರ ಕನ್ನಡ 104, ಯಾದಗಿರಿ 74 ಜನರಿಗೆ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾಗೆ 81 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 60 ಜನರು ಸಾವನ್ನಪ್ಪಿದ್ದಾರೆ. ಧಾರವಾಡ, ಮೈಸೂರು ಜಿಲ್ಲೆಗಳಲ್ಲಿ ತಲಾ ಮೂವರು, ಬಳ್ಳಾರಿ, ಕೊಪ್ಪಳ, ಉತ್ತರ ಕನ್ನಡ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ತಲಾ ಇಬ್ಬರು, ಬೆಳಗಾವಿ, ಬೀದರ್, ಚಾಮರಾಜನಗರ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,351 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

(Karnataka Coronavirus Infection to 19067 people 81 deaths due to covid 19)

ಇದನ್ನೂ ಓದಿ: ಕರ್ನಾಟಕದಲ್ಲಿ ಸಮುದಾಯಕ್ಕೆ ಕೊರೊನಾ ಸೋಂಕು: ಡಾ.ಕೆ.ಸುಧಾಕರ್

ಇದನ್ನೂ ಓದಿ: ಚಿತಾಗಾರಕ್ಕೆ ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಭೇಟಿ; ಶವಸಂಸ್ಕಾರಕ್ಕೆ ಹೆಚ್ಚಿನ ಹಣ ಕೇಳಿದರೆ ಕ್ರಮ ನಿಶ್ಚಿತ

Published On - 7:00 pm, Sun, 18 April 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ