Covid-19 Karnataka Update: ಕರ್ನಾಟಕದಲ್ಲಿ ಇಂದು 25,795 ಮಂದಿಯಲ್ಲಿ ಕೊರೊನಾ ಸೋಂಕು, 123 ಸಾವು
ಕರ್ನಾಟಕ ರಾಜ್ಯದಲ್ಲಿ ಗುರುವಾರ (ಏಪ್ರಿಲ್ 22) ಒಂದೇ ದಿನ 25,795 ಜನರಿಗೆ ಕೊರೊನಾ ದೃಢಪಟ್ಟಿದ್ದು, 123 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ, 15,244 ಜನರಲ್ಲಿ ಸೋಂಕು ದೃಢಪಟ್ಟಿದೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಗುರುವಾರ (ಏಪ್ರಿಲ್ 22) ಒಂದೇ ದಿನ 25,795 ಜನರಿಗೆ ಕೊರೊನಾ ದೃಢಪಟ್ಟಿದ್ದು, 123 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಅಂದರೆ, 15,244 ಜನರಲ್ಲಿ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ 68 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,47,997ಕ್ಕೆ (12.47 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 10,37,857 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,96,236 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 5,98,919ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,450 ಜನರು ಸಾವನ್ನಪ್ಪಿದ್ದಾರೆ. 5,98,919 ಸೋಂಕಿತರ ಪೈಕಿ 4,55,655 ಜನರು ಗುಣಮುಖರಾಗಿದ್ದಾರೆ. 13,7813 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 123 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂದರೆ, 68 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಕಲಬುರಗಿ 11, ಬಳ್ಳಾರಿ, ಧಾರವಾಡ, ತುಮಕೂರು ಜಿಲ್ಲೆಗಳಲ್ಲಿ ತಲಾ ಐವರು, ಬೆಂಗಳೂರು ಗ್ರಾಮಾಂತರ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ತಲಾ ನಾಲ್ವರು, ಮೈಸೂರು, ಬೀದರ್ ಜಿಲ್ಲೆಗಳಲ್ಲಿ ತಲಾ ಮೂವರು, ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಇಬ್ಬರು, ಬೆಳಗಾವಿ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಇಂದಿನ 22/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/GwnkXP4M0h@CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/6nx8yoizOz
— K’taka Health Dept (@DHFWKA) April 22, 2021
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿ ಹೊಸದಾಗಿ 25,795 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 15,244 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಿನ್ನೆಯಂತೆ ಇಂದೂ ಸಹ ತುಮಕೂರು ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ ಸಾವಿರ ದಾಟಿದೆ. ತುಮಕೂರು ಜಿಲ್ಲೆಯಲ್ಲಿ 1231 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಉಳಿದಂತೆ ಬಳ್ಳಾರಿ 940, ಮೈಸೂರು 818, ಹಾಸನ 689, ಕಲಬುರಗಿ 659, ಕೋಲಾರ 587, ದಕ್ಷಿಣ ಕನ್ನಡ 474, ರಾಯಚೂರು 433, ಬೆಂಗಳೂರು ಗ್ರಾಮಾಂತರ 405, ಬೀದರ್ 396, ಮಂಡ್ಯ 385, ಧಾರವಾಡ 361, ಚಿಕ್ಕಬಳ್ಳಾಪುರ 329, ವಿಜಯಪುರ 328, ಉಡುಪಿ 274, ಚಾಮರಾಜನಗರ 271, ರಾಮನಗರ 260, ಬೆಳಗಾವಿ 255, ಶಿವಮೊಗ್ಗ 207, ಉತ್ತರ ಕನ್ನಡ 163, ದಾವಣಗೆರೆ 157, ಕೊಡಗು 156, ಚಿಕ್ಕಮಗಳೂರು 146, ಚಿತ್ರದುರ್ಗ 142, ಬಾಗಲಕೋಟೆ 134, ಕೊಪ್ಪಳ 121, ಯಾದಗಿರಿ 111, ಗದಗ 73, ಹಾವೇರಿ 46 ಸೋಂಕು ಪ್ರಕರಣಗಳು ದೃಢಪಟ್ಟಿವೆ.
(Karnataka Coronavirus Roundup 25795 dead 123 infected from covid-19)
ಇದನ್ನೂ ಓದಿ: Explainer: ಮಕ್ಕಳನ್ನೂ ಬಾಧಿಸುತ್ತಿದೆ ಕೊರೊನಾ; ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ ಈ ಸ್ಟೋರಿ ಮಿಸ್ ಮಾಡದೇ ಓದಿ
ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ
Published On - 7:22 pm, Thu, 22 April 21