ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 584 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 9,31,252ಕ್ಕೇರಿದೆ. ಇದಲ್ಲದೆ, ಸೋಂಕಿತರ ಪೈಕಿ 9,10,377 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 8,694 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.
ಇತ್ತ, ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 282 ಜನರಿಗೆ ಸೋಂಕು ಪತ್ತೆಯಾಗಿದೆ. ಇದೀಗ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 3,94,495ಕ್ಕೇರಿದೆ. ಇದಲ್ಲದೆ, ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 4,359 ಜನರು ಸಾವನ್ನಪ್ಪಿದ್ದಾರೆ. ಸದ್ಯ, 3,94,495 ಸೋಂಕಿತರ ಪೈಕಿ 3,84,437 ಜನರು ಗುಣಮುಖರಾಗಿದ್ದು 5,698 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.
ಈ ನಡುವೆ, ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಗೆ ಒಬ್ಬರು ಬಲಿಯಾಗಿದ್ದು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,162 ಜನರು ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.
ದೇಶದಲ್ಲಿಂದು ಕೊರೊನಾ ಲಸಿಕೆ ಪಡೆದವರ ಸಂಖ್ಯೆ: 1,65,714; ಕರ್ನಾಟಕದಲ್ಲಿ: 13,408