Covid-19 Karnataka Update: ಕರ್ನಾಟಕದಲ್ಲಿ ಇಂದು 37,733 ಜನರಿಗೆ ಕೊರೊನಾ ಸೋಂಕು, 217 ಮಂದಿ ಸಾವು

ಸೋಂಕಿತರ ಪೈಕಿ 11,64,398 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,21,436 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Covid-19 Karnataka Update: ಕರ್ನಾಟಕದಲ್ಲಿ ಇಂದು 37,733 ಜನರಿಗೆ ಕೊರೊನಾ ಸೋಂಕು, 217 ಮಂದಿ ಸಾವು
ಪ್ರಾತಿನಿಧಿಕ ಚಿತ್ರ (ಕೃಪೆ: unicef.org)
Follow us
guruganesh bhat
|

Updated on:May 02, 2021 | 7:56 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಒಂದೇ ದಿನ 37,733 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ ಇಂದು 21,199 ಜನರಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿಂದು ಕೊರೊನಾಗೆ 217 ಜನರ ಮೃತಪಟ್ಟಿದ್ದು, ಬೆಂಗಳೂರಲ್ಲಿ 64 ಜನರ ನಿಧನರಾಗಿದ್ದಾರೆ. ಸೋಂಕಿತರ ಪೈಕಿ 11,64,398 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,21,436 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು ಒಂದೇ ದಿನ 37,733 ಜನರಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,01,865ಕ್ಕೇರಿಕೆಯಾಗಿದೆ. ಇಂದು ನಿಧನರಾದ 217 ಜನರನ್ನೂ ಸೇರಿಸಿ ಈವರೆಗೆ ಕರ್ನಾಟಕದಲ್ಲಿ ಕೊರೊನಾದಿಂದ 16,011 ಜನರ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 217 ಜನರ ಬಲಿಯಾಗಿದ್ದು, ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 64 ಜನರ ಮೃತಪಟ್ಟಿದ್ದಾರೆ. ಬಳ್ಳಾರಿ 18, ಚಾಮರಾಜನಗರ 13, ಶಿವಮೊಗ್ಗ  12, ಹಾಸನ 11, ಮೈಸೂರು, ರಾಮನಗರ ಜಿಲ್ಲೆಯಲ್ಲಿ ತಲಾ 8, ಉತ್ತರ ಕನ್ನಡ, ಕಲಬುರಗಿ ಜಿಲ್ಲೆಯಲ್ಲಿ ತಲಾ 7, ಬೀದರ್ 6, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಪ್ಪಳ, ಮಂಡ್ಯಗಳಲ್ಲಿ 5, ಹಾವೇರಿಯಲ್ಲಿ 4, ವಿಜಯಪುರ, ಧಾರವಾಡ, ಚಿಕ್ಕಬಳ್ಳಾಪುರದಲ್ಲಿ ಮೂವರು, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಯಾದಗಿರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಬಲಿಯಾಗಿದ್ದಾರೆ.

ಇದನ್ನೂ ಓದಿ: Mangala Angadi: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ 3,986 ಮತಗಳ ರೋಚಕ ಗೆಲುವು

(Karnataka coronavirus update 37733 new cases 217 died today)

Published On - 7:45 pm, Sun, 2 May 21