ಕರ್ನಾಟಕದ ಕೊರೊನಾ ಹಾಟ್​ಸ್ಪಾಟ್ ಆಗುತ್ತಿದೆ ದಕ್ಷಿಣ ಕನ್ನಡ; ಕರಾವಳಿಯಲ್ಲಿ ಕೊವಿಡ್ ಹೆಚ್ಚಾಗಲು ಕಾರಣವೇನು?

Dakshina Kannada Covid-19: ಕಾಸರಗೋಡು ಗಡಿಯಲ್ಲಿ ಕಟ್ಟೆಚ್ಚರ ವಹಿಸಿ, ಕೇರಳದಿಂದ ಬರುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದರೂ ಅಲ್ಲಿಂದ ಬರುವವರಿಂದ ದಕ್ಷಿಣ ಕನ್ನಡದಲ್ಲಿ ಕೊರೊನಾ ಕೇಸುಗಳು ಹರಡುವ ಪ್ರಮಾಣ ಕಡಿಮೆಯಾಗಿಲ್ಲ.

ಕರ್ನಾಟಕದ ಕೊರೊನಾ ಹಾಟ್​ಸ್ಪಾಟ್ ಆಗುತ್ತಿದೆ ದಕ್ಷಿಣ ಕನ್ನಡ; ಕರಾವಳಿಯಲ್ಲಿ ಕೊವಿಡ್ ಹೆಚ್ಚಾಗಲು ಕಾರಣವೇನು?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 21, 2021 | 8:14 PM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಕೇಸುಗಳು ಹೆಚ್ಚಾಗಿದ್ದು, ಕೊವಿಡ್ ಹಾಟ್​​ಸ್ಪಾಟ್ ಆಗಿದ್ದ ಬೆಂಗಳೂರನ್ನು ಮೀರಿಸಿ ದಕ್ಷಿಣ ಕನ್ನಡ ನಂಬರ್ 1ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಕಳೆದ ವರ್ಷವಿಡೀ ಅತಿ ಹೆಚ್ಚು ಕೊವಿಡ್ ಕೇಸುಗಳು ಪತ್ತೆಯಾಗಿತ್ತು. ಆದರೆ, ಈ ಬಾರಿ ದಕ್ಷಿಣ ಕನ್ನಡ ಟಾಪ್ 1ನೇ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಕನ್ನಡದಲ್ಲಿ ಆ. 10ರಿಂದ ಹೊಸದಾಗಿ 3,553 ಕೊರೊನಾ ಕೇಸುಗಳು ಪತ್ತೆಯಾಗಿದ್ದು, 52 ಜನರು ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರಿನಲ್ಲಿ 3,374 ಕೊರೊನಾ ಕೇಸುಗಳು ಪತ್ತೆಯಾಗಿದ್ದು, 40 ಜನರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೊರೊನಾ ಕೇಸುಗಳು ಹೆಚ್ಚಾಗಿರುವುದಕ್ಕೆ ಇಲ್ಲಿದೆ ಕಾರಣ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕಿಶೋರ್ ಕುಮಾರ್ ನೀಡಿರುವ ಮಾಹಿತಿ ಪ್ರಕಾರ, ಶೈಕ್ಷಣಿಕ ಹಬ್ ಆಗಿರುವ ದಕ್ಷಿಣ ಕನ್ನಡದಲ್ಲಿ ಬೇರೆ ರಾಜ್ಯ, ಜಿಲ್ಲೆಗಳಲ್ಲಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಅವರು ದಕ್ಷಿಣ ಕನ್ನಡದೊಳಗೆ ಪ್ರವೇಶಿಸುವಾಗ ಕೊರೊನಾ ನೆಗೆಟಿವ್ ವರದಿಯನ್ನು ನೀಡಿದರೂ ಅದಾದ 1 ವಾರದ ಬಳಿಕ ಕೊರೊನಾ ಪಾಸಿಟಿವ್ ಬಂದ ಪ್ರಕರಣಗಳು ಹೆಚ್ಚಾಗಿವೆ.

ದಕ್ಷಿಣ ಕನ್ನಡದ ಗಡಿಯಲ್ಲಿರುವ ಕೇರಳದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಕೇಸುಗಳು ಪತ್ತೆಯಾಗುತ್ತಿವೆ. ಕಾಸರಗೋಡು ಗಡಿಯಲ್ಲಿ ಕಟ್ಟೆಚ್ಚರ ವಹಿಸಿ, ಕೇರಳದಿಂದ ಬರುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದರೂ ಅಲ್ಲಿಂದ ಬರುವವರಿಂದ ದಕ್ಷಿಣ ಕನ್ನಡದಲ್ಲಿ ಕೊರೊನಾ ಕೇಸುಗಳು ಹರಡುವ ಪ್ರಮಾಣ ಕಡಿಮೆಯಾಗಿಲ್ಲ. ಇದು ಕೂಡ ದಕ್ಷಿಣ ಕನ್ನಡದಲ್ಲಿ ಕೊವಿಡ್ ಪ್ರಕರಣ ಹೆಚ್ಚುತ್ತಿರುವುದಕ್ಕೆ ಮುಖ್ಯ ಕಾರಣವಾಗಿದೆ. ಕಾಸರಗೋಡಿನ ಬಹುತೇಕ ಜನರು ದಿನನಿತ್ಯ ಮಂಗಳೂರಿಗೆ ಓಡಾಡುತ್ತಾರೆ. ಅವರ ಅಗತ್ಯ ವಸ್ತುಗಳಿಗೆ ಸುಳ್ಯ, ಪುತ್ತೂರು, ಮಂಗಳೂರನ್ನೇ ಅವಲಂಬಿಸಿದ್ದಾರೆ. ಕಾಸರಗೋಡು, ದಕ್ಷಿಣ ಕನ್ನಡದ ಭಾಗದಲ್ಲಿ ತಪಾಸಣೆ ಮಾಡುತ್ತಿದ್ದರೂ ಜನರು ಬೇರೆ ಮಾರ್ಗಗಳ ಮೂಲಕ ಒಳಗೆ ಬರುತ್ತಿದ್ದಾರೆ. ಇನ್ನು ಕೆಲವರಿಗೆ ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ಇಲ್ಲದಿದ್ದರೂ ಬಳಿಕ ಪಾಸಿಟಿವ್ ಬಂದಿರುವ ಉದಾಹರಣೆಗಳಿವೆ.

ದಕ್ಷಿಣ ಕನ್ನಡದಲ್ಲಿ ಇಡೀ ಕರ್ನಾಟಕದಲ್ಲೇ ಅತಿ ಹೆಚ್ಚು ಕೊವಿಡ್ ಸಾವಿನ ಸಂಖ್ಯೆ ದಾಖಲಾಗುತ್ತಿದೆ. ದಿನ ಬಿಟ್ಟು ದಿನಕ್ಕೆ ದಕ್ಷಿಣ ಕನ್ನಡದಲ್ಲಿ ಸಾವಿನ ಆಡಿಟ್ ಮಾಡಲಾಗುತ್ತಿದೆ. ಹೀಗೆ ಸಾವನ್ನಪ್ಪಿದವರಲ್ಲಿ ಬಹುತೇಕರು 60 ವರ್ಷ ಮೇಲ್ಪಟ್ಟವರಾಗಿದ್ದಾರೆ. ರೋಗಿಗಳು ಇನ್ನು ತಡೆದುಕೊಳ್ಳಲು ಸಾಧ್ಯವೇ ಇಲ್ಲ ಎಂದಾಗ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಾರೆ. ಇದರಿಂದ ಆರಂಭದಲ್ಲೇ ಚಿಕಿತ್ಸೆ ನೀಡಿ ಕೊರೊನಾ ರೋಗವನ್ನು ಗುಣಪಡಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಅಲ್ಲಿನ ಆರೋಗ್ಯಾಧಿಕಾರಿಗಳ ಅಭಿಪ್ರಾಯ.

ದಕ್ಷಿಣ ಕನ್ನಡದಲ್ಲಿ ಕೊರೊನಾ ಕೇಸುಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಕೊರೊನಾ ರೋಗಿಗಳ ಮನೆಯ ಸುತ್ತಮುತ್ತಲಿನ ಮನೆಗಳನ್ನು ಕಂಟೋನ್ಮೆಂಟ್​ ಜೋನ್ ಎಂದು ಗುರುತಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 18 ವರ್ಷದೊಳಗಿನವರು ಕೊರೊನಾ ಮೂರನೇ ಅಲೆಗೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,350 ಜನರಿಗೆ ಕೊರೊನಾ ದೃಢ; 18 ಮಂದಿ ಸಾವು

Bengaluru: ಬೆಂಗಳೂರಿನಲ್ಲಿ ಆಗಸ್ಟ್ 30ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ

(Karnataka Coronavirus: Why Dakshina Kannada is Karnatakas new Covid-19 hotspot Mangalore Covid Cases)

Published On - 7:55 pm, Sat, 21 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ