Karnataka Covid-19 Cases: ಕರ್ನಾಟಕದಲ್ಲಿ ಇಂದು 365 ಕೊರೊನಾ ಕೇಸ್ ಪತ್ತೆ, 8 ಜನ ಸಾವು; ಬೆಂಗಳೂರಿನಲ್ಲಿ 210 ಜನರಿಗೆ ಕೊವಿಡ್
Karnataka Coronavirus Updates: ಬೆಂಗಳೂರಿನಲ್ಲಿ ಇಂದು 210 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾದಿಂದ ನಾಲ್ವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 365 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 365 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,84,846ಕ್ಕೆ ಏರಿಕೆಯಾಗಿದೆ. ಕೊವಿಡ್ ಸೋಂಕಿತರ ಪೈಕಿ 29,37,848 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 8 ಜನರು ಸಾವನ್ನಪ್ಪಿದ್ದಾರೆ. ಅದರಂತೆ, ಕರ್ನಾಟಕದಲ್ಲಿ ಇದುವರೆಗೆ ಕೊರೊನಾದಿಂದ 37,984 ಜನರು ಮೃತಪಟ್ಟಿದ್ದಾರೆ. ಇಂದು 443 ರೋಗಿಗಳು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ರಾಜ್ಯದಲ್ಲಿ 8988 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ ಇಂದು 210 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾದಿಂದ ನಾಲ್ವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 365 ಜನರಿಗೆ ಕೊರೊನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 8 ಜನ ಕೊರೊನಾಗೆ ಬಲಿಯಾಗಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 8,988ಕ್ಕೆ ಏರಿಕೆಯಾಗಿದೆ.
ಇಂದಿನ 21/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/mi5Zlpy2E3 @cmofKarnataka @mla_sudhakar @Comm_dhfwka @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/sNU7XQOCpy
— K’taka Health Dept (@DHFWKA) October 21, 2021
ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಿಕೆ ಪೂರ್ಣಗೊಂಡಿದ್ದು, ಕೊರೊನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಮೈಲಿಗಲ್ಲು ಸೃಷ್ಟಿಯಾಗಿದೆ. 18- 44 ವಯಸ್ಸಿನವರಿಗೆ 55.44 ಕೋಟಿ ಡೋಸ್ ಲಸಿಕೆ, 45-60 ವಯಸ್ಸಿನವರಿಗೆ 26.95 ಕೋಟಿ ಡೋಸ್ ಲಸಿಕೆ, 60 ವರ್ಷ ಮೇಲ್ಪಟ್ಟವರಿಗೆ 17.03 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು, 51.55 ಕೋಟಿ ಪುರುಷರು ಹಾಗೂ 47.86 ಕೋಟಿ ಮಹಿಳೆಯರು ಲಸಿಕಾ ಅಭಿಯಾನದ ಫಲಾನುಭವಿಗಳಾಗಿದ್ದಾರೆ.
ಇದನ್ನೂ ಓದಿ: China Covid Cases: ಚೀನಾದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಹೆಚ್ಚಳ; ವಿಮಾನ ಸಂಚಾರ ಸ್ಥಗಿತ, ಶಾಲೆಗಳು ಬಂದ್
100 ಕೋಟಿ ಕೊವಿಡ್ ಲಸಿಕೆ ನೀಡಿಕೆ ಪೂರ್ಣ; ಉದ್ಯಮಶೀಲತೆ, ಭಾರತೀಯ ವಿಜ್ಞಾನದ ಸಾಧನೆಗೆ ಸಾಕ್ಷಿ: ಪ್ರಧಾನಿ ಮೋದಿ ಸಂತಸ