Karnataka Covid-19 Update: ಕರ್ನಾಟಕದಲ್ಲಿ ಇಂದು 4,553 ಜನರಿಗೆ ಕೊರೊನಾ ದೃಢ; ಬೆಂಗಳೂರಲ್ಲಿ 2787 ಪ್ರಕರಣ ದಾಖಲು

CoronaVirus Update: ಬೆಂಗಳೂರಿನಲ್ಲಿ ಇಂದು ಒಂದೇ ದಿನ 2,787 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,47,031ಕ್ಕೆ ಏರಿಕೆಯಾಗಿದೆ. ಈ ಪೈಕಿ 4,14,283 ಜನರು ಗುಣಮುಖ ಹೊಂದಿದ್ದಾರೆ.

Karnataka Covid-19 Update: ಕರ್ನಾಟಕದಲ್ಲಿ ಇಂದು 4,553 ಜನರಿಗೆ ಕೊರೊನಾ ದೃಢ; ಬೆಂಗಳೂರಲ್ಲಿ  2787 ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 05, 2022 | 12:51 PM

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 4,553 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,15,155ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದೆ. ಈ ಮುಖೇನ ಕೊರೊನಾದಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 12,625 ಆಗಿದೆ. ಸೋಂಕಿತರ ಪೈಕಿ 9,63,419 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. 39,092 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದ್ದು, ಈ ಪೈಕಿ, ಬೆಂಗಳೂರಿನಲ್ಲಿ 8 ಜನರು, ಕಲಬುರಗಿ ಜಿಲ್ಲೆಯಲ್ಲಿ 3 ಜನರು, ಧಾರವಾಡ ಜಿಲ್ಲೆಯಲ್ಲಿ 2 ಜನರು, ಹಾಸನ ಹಾಗೂ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,625 ಜನರ ಸಾವು ಸಂಭವಿಸಿದೆ.

ಕರ್ನಾಟಕದ ಜಿಲ್ಲಾವಾರು ಕೊವಿಡ್-19 ವರದಿ ಬೆಂಗಳೂರು ನಗರ ಜಿಲ್ಲೆ 2787, ಮೈಸೂರು ಜಿಲ್ಲೆ 260, ಕಲಬುರಗಿ 170, ಬೆಂಗಳೂರು ಗ್ರಾಮಾಂತರ 155, ಬೀದರ್ 147, ತುಮಕೂರು 107, ಹಾಸನ 104, ಧಾರವಾಡ 100, ಬಳ್ಳಾರಿ 93, ದಕ್ಷಿಣ ಕನ್ನಡ 83, ಮಂಡ್ಯ 79, ಉಡುಪಿ 73, ಬೆಳಗಾವಿ 52, ಉತ್ತರ ಕನ್ನಡ 49, ಶಿವಮೊಗ್ಗ 36, ಚಿತ್ರದುರ್ಗ 29, ದಾವಣಗೆರೆ 23, ರಾಯಚೂರು 23, ಬಾಗಲಕೋಟೆ 20, ಕೋಲಾರ 20, ಗದಗ 18, ರಾಮನಗರ 18, ಯಾದಗಿರಿ ಜಿಲ್ಲೆ 18, ಚಿಕ್ಕಮಗಳೂರು 17, ವಿಜಯಪುರ 16, ಚಾಮರಾಜನಗರ 15, ಕೊಡಗು 14, ಚಿಕ್ಕಬಳ್ಳಾಪುರ 10, ಕೊಪ್ಪಳ 10 ಮತ್ತು ಹಾವೇರಿ ಜಿಲ್ಲೆಯಲ್ಲಿ 7 ಕೊರೊನಾ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನಲ್ಲಿ ಒಂದೇ ದಿನ 2,787 ಜನರಿಗೆ ಸೋಂಕು ಬೆಂಗಳೂರಿನಲ್ಲಿ ಇಂದು ಒಂದೇ ದಿನ 2,787 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,47,031ಕ್ಕೆ ಏರಿಕೆಯಾಗಿದೆ. ಈ ಪೈಕಿ 4,14,283 ಜನರು ಗುಣಮುಖ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 8 ಜನರ ಬಲಿಯಾಗಿದೆ. ಈವರೆಗೆ 4,649 ಜನರ ಸಾವು ಸಂಭವಿಸಿದೆ. 28,098 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರು ಜಿಲ್ಲೆಯಲ್ಲಿಂದು 260 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ, ಮೈಸೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 56,524ಕ್ಕೆ ಏರಿಕೆಯಾಗಿದೆ. 56,524 ಸೋಂಕಿತರ ಪೈಕಿ 54,428 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 1,061 ಜನರ ಸಾವು ಸಂಭವಿಸಿದೆ. 1,035 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 73 ಜನರಿಗೆ ಕೊರೊನಾ ದೃಢವಾಗಿದ್ದು, ಮಣಿಪಾಲದ MIT ಕ್ಯಾಂಪಸ್​ನಲ್ಲಿ 6 ಜನರಿಗೆ ಕೊರೊನಾ ತಗುಲಿದೆ. ಎಂಐಟಿ ಕ್ಯಾಂಪಸ್​ನಲ್ಲಿ ಈವರೆಗೆ 1,039 ಜನರಿಗೆ ಸೋಂಕು ದೃಢವಾಗಿದೆ. ತನ್ಮೂಲಕ, ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25,515ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 192 ಜನ ಬಲಿಯಾಗಿದ್ದಾರೆ. ಈ ಬಗ್ಗೆ, ಉಡುಪಿ ಡಿಹೆಚ್​ಒ ಡಾ.ಸುಧೀರ್​ ಚಂದ್ರಸೂಡಾ ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಜಲ್ಲೆಯಲ್ಲಿಂದು 93 ಜನರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ನಗರದ 2 ಹಾಸ್ಟೆಲ್​ಗಳಲ್ಲಿ 21 ವಿದ್ಯಾರ್ಥಿಗಳಿಗೆ ಕೊರೊನಾ ಕಂಡುಬಂದಿದೆ. ಈ ಕಾರಣದಿಂದ, ಜಿಲ್ಲಾಡಳಿತ 2 ವಸತಿ ನಿಲಯಗಳನ್ನು ಸೀಲ್​ಡೌನ್ ಮಾಡಿದೆ. ಸೋಂಕಿತರ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿಂದು 44 ಜನರಿಗೆ ಕೊರೊನಾ ದೃಢವಾಗಿದೆ. 27 ಪುರುಷರು, 17 ಮಹಿಳೆಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಂಕಿತರಿಗೆ ನೆಲಮಂಗಲದ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ತಹಶೀಲ್ದಾರ್ ಕೆ.ಮಂಜುನಾಥ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಇಂದು 23 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,695ಕ್ಕೆ ಏರಿಕೆಯಾಗಿದೆ. ದಾವಣಗೆರೆ ತಾಲೂಕು 16, ಜಗಳೂರು ತಾಲೂಕು 3, ಹರಿಹರ ತಾಲೂಕು 2, ಚನ್ನಗಿರಿ 1, ಹೊನ್ನಾಳಿ 1 ಪ್ರಕರಣ ಕಂಡುಬಂದಿದೆ. ದಾವಣಗೆರೆ ಜಿಲ್ಲೆಯಲ್ಲಿ 124 ಜನರಲ್ಲಿ ಸೋಂಕು ಸಕ್ರಿಯವಾಗಿದ್ದು, ಸೋಂಕಿತರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾವೇರಿ ಜಿಲ್ಲೆಯಲ್ಲಿಂದು 7 ಜನರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,075ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 191 ಜನರ ಸಾವು ಸಂಭವಿಸಿದೆ. ಹಾವೇರಿ ತಾಲೂಕು 3, ಶಿಗ್ಗಾಂವಿ ತಾಲೂಕು 2 ಪ್ರಕರಣ, ಬ್ಯಾಡಗಿ, ರಾಣೆಬೆನ್ನೂರು ತಾಲೂಕಿನಲ್ಲಿ ತಲಾ 1 ಪ್ರಕರಣ ಕಂಡುಬಂದಿದೆ. ಹಾವೇರಿ ಡಿಹೆಚ್​ಒ ಡಾ.ರಾಘವೇಂದ್ರಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ

ಇದನ್ನೂ ಓದಿ: ಕೊರೊನಾ ಹೆಚ್ಚಳದ ಮಧ್ಯೆ ರಾಜ್ಯಕ್ಕೆ ಗುಡ್ ನ್ಯೂಸ್: ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಕೊರೊನಾ ಲಸಿಕೆ ರವಾನೆ

Published On - 8:35 pm, Sun, 4 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ