Karnataka Covid-19 Update: ಕರ್ನಾಟಕದಲ್ಲಿ 4225 ಮಂದಿಗೆ ಕೊರೊನಾ ಸೋಂಕು, 26 ಸಾವು

|

Updated on: Mar 31, 2021 | 6:48 PM

ಕರ್ನಾಟಕ ರಾಜ್ಯದಲ್ಲಿ ಬುಧವಾರ (ಮಾರ್ಚ್ 31) ಒಂದೇ ದಿನ 4225 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,97,004ಕ್ಕೆ (9.97 ಲಕ್ಷ) ಏರಿಕೆಯಾಗಿದೆ.

Karnataka Covid-19 Update: ಕರ್ನಾಟಕದಲ್ಲಿ 4225 ಮಂದಿಗೆ ಕೊರೊನಾ ಸೋಂಕು, 26 ಸಾವು
ಕೊರೊನಾ ಸೋಂಕು
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬುಧವಾರ (ಮಾರ್ಚ್ 31) ಒಂದೇ ದಿನ 4225 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,97,004ಕ್ಕೆ (9.97 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿನಿಂದ 26 ಜನರು ಮೃತಪಟ್ಟಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆಯು 12,567ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಮಹಾನಗರದಲ್ಲಿ ಇಂದು ಒಂದೇ ದಿನ 2,928 ಜನರಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,34,827ಕ್ಕೆ (4.34 ಲಕ್ಷ) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 18 ಜನರು ಮೃತಪಟ್ಟಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 4,619ಕ್ಕೆ ಏರಿಕೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ಬುಧವಾರ 142 ಜನರಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 55,810ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 53,997 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಒಟ್ಟು 1,054 ಜನರು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಗರದ ಬಸವನಹಳ್ಳಿಯಲ್ಲಿರುವ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 410ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು.

ಮಹಾರಾಷ್ಟ್ರದಲ್ಲಿ ದೇಶದಲ್ಲೇ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಮನೆಮನೆಗೆ ತೆರಳಿ ಲಸಿಕೆ ನೀಡುವುದಕ್ಕೆ ಕೇಂದ್ರ ಸರ್ಕಾರದಿಂದ ಮಹಾರಾಷ್ಟ್ರ ಅನುಮತಿ ಕೋರಿದೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 27,000 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಮುಂಬೈನಲ್ಲಿ ಏಪ್ರಿಲ್ 15ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ದೇಶದ ವಿವಿಧೆಡೆ ಮಾರ್ಚ್ 30ರಿಂದ 31ರ ನಡುವೆ ಒಟ್ಟು 53,480 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳು 1,21,49,335ಕ್ಕೆ ಏರಿಕೆಯಾಗಿವೆ. ಚೇತರಿಸಿಕೊಂಡವರ ಸಂಖ್ಯೆಯು 1,14,34,301ರಷ್ಟಿದೆ. ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 5,52,566. ಮೃತರ ಸಂಖ್ಯೆ 1,62,468 ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

Karnataka Covid 19 coronavirus update 4225 new infections

Published On - 6:29 pm, Wed, 31 March 21