ಕರ್ನಾಟಕದಲ್ಲಿ ದಸರಾ ಬಳಿಕ ಕೊರೊನಾ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ; ಸಿಎಂ ಬಸವರಾಜ ಬೊಮ್ಮಾಯಿ

Karnataka Covid Rules: ದಸರಾ ಹಬ್ಬದ ಬಳಿಕ ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಹೇರಿರುವ ಕೋವಿಡ್ ನಿಯಮವನ್ನು ಸಡಿಲಿಸುವ ಬಗ್ಗೆ ಚಿಂತನೆ ನಡೆಸಲಾಗುವುದು. ಈ ಬಗ್ಗೆ ರಾಜ್ಯದ ಕೊವಿಡ್ ತಜ್ಞರ ಸಮಿತಿಯೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕದಲ್ಲಿ ದಸರಾ ಬಳಿಕ ಕೊರೊನಾ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ; ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 14, 2021 | 2:57 PM

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈಟ್​ ಕರ್ಫ್ಯೂ ವಿಸ್ತರಿಸಲಾಗಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆ ಕೊರೊನಾ ನಿಯಮಗಳನ್ನು ಕೂಡ ಕೊಂಚ ಬಿಗಿಗೊಳಿಸಲಾಗಿದೆ. ದಸರಾ ಹಬ್ಬ ಮುಗಿದ ಬಳಿಕ ಕರ್ನಾಟಕದ ಗಡಿ ಭಾಗಗಳಲ್ಲಿ ಹೇರಿರುವ ನಿರ್ಬಂಧಗಳನ್ನು ತೆರವುಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಸರಾ ಹಬ್ಬದ ಬಳಿಕ ಕೇರಳ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಹೇರಿರುವ ಕೋವಿಡ್ ನಿಯಮವನ್ನು ಸಡಿಲಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು. ಈ ಬಗ್ಗೆ ರಾಜ್ಯದ ಕೊವಿಡ್ ತಜ್ಞರ ಸಮಿತಿಯೊಂದಿಗೆ ಚರ್ಚೆ ನಡೆಸಿ ನಿರ್ಧರಿಸಲಾಗುವುದು. ಗಡಿ ರಾಜ್ಯಗಳಲ್ಲಿ ಕೊರೊನಾ ಕೇಸುಗಳ ಪ್ರಮಾಣ ಹೇಗಿದೆ ಎಂಬ ಬಗ್ಗೆ ಗಮನ ಹರಿಸಿದ್ದೇವೆ. ಅದನ್ನು ಪರಿಗಣಿಸಿ ಸದ್ಯದಲ್ಲೇ ಕೊವಿಡ್ ನಿಯಮಗಳ ಸಡಿಲಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ ಕೇಸುಗಳು ಹೆಚ್ಚಾಗಿರುವುದರಿಂದ ಕರ್ನಾಟಕದ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಸದ್ಯದಲ್ಲೇ ಆ ನಿಯಮವನ್ನು ಸಡಿಲಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ -19 ಪಾಸಿಟಿವ್ ಕೇಸುಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ನೆರೆಯ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ ಕೋವಿಡ್ ಪಾಸಿಟಿವ್ ಸ್ಥಿತಿಗತಿ, ಲಸಿಕೆ ಹಾಕಿರುವ ಪ್ರಮಾಣದ ಬಗ್ಗೆ ಪರಾಮರ್ಶಿಸಿ ರಾಜ್ಯದ ಗಡಿಯಲ್ಲಿ ಹೇರಿರುವ ಕಟ್ಟುನಿಟ್ಟಿನ ನಿಯಮವನ್ನು ಸಡಿಲಿಕೆ ಮಾಡುವ ಬಗ್ಗೆ ದಸರಾ ಬಳಿಕ ನಡೆಯುವ ತಜ್ಞರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಸವರಾಜ ಬೊಮ್ಮಾಯಿ, ಒಮ್ಮೆ ಕೋವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ಸಿಕ್ಕ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನುಸಾರ ಮಕ್ಕಳಿಗೆ ಕೊವಿಡ್ ಲಸಿಕೆ ನೀಡುವ ಅಭಿಯಾನ ನಡೆಸಲಾಗುವುದು. ರಾಜ್ಯದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿರುವವರ ಪ್ರಮಾಣ ಹೆಚ್ಚಾಗಿರುವುದು ಸಮಾಧಾನಕರ ಸಂಗತಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಕಾನೂನನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: Covid-19: ಕೊವಿಡ್ ಮೂಲ ಪತ್ತೆಹಚ್ಚಲು ಹೊಸ ತಂಡ ರಚನೆ; ಇದೇ ಕೊನೆಯ ಅವಕಾಶ ಎಂದ WHO

Covaxin: ನವೆಂಬರ್​ನಲ್ಲಿ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಲಭ್ಯ ಸಾಧ್ಯತೆ; ಆರೋಗ್ಯ ಸಮಸ್ಯೆ ಇರುವವರಿಗೆ ಆದ್ಯತೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್