ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ

2023ರ ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಗಿತ್ತು. ಆಗ, ಶೇ 33 ಕುಟುಂಬಗಳ ಒಬ್ಬ ಅಥವಾ ಹೆಚ್ಚಿನ ವ್ಯಕ್ತಿಗಳು ಕೋವಿಡ್ ಅಥವಾ ವೈರಲ್ ರೋಗಲಕ್ಷಣಗ ಹೊಂದಿರುವುದು ಕಂಡುಬಂದಿತ್ತು. ಆದರೆ ಈ ಬಾರಿ ಪ್ರಮಾಣ ಶೇ 54 ರಷ್ಟಿದೆ.

ಕರ್ನಾಟಕದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರಿಗಿದೆ ಕೋವಿಡ್ ಸೋಂಕು: ಸಮೀಕ್ಷೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jan 05, 2024 | 10:39 AM

ಬೆಂಗಳೂರು, ಜನವರಿ 5: ಕರ್ನಾಟಕದಲ್ಲಿ ಕೊರೊನಾ ವೈರಸ್ (Coronavirus) ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದ ಶೇ 54ರಷ್ಟು ಕುಟುಂಬಗಳ ಕನಿಷ್ಠ ಒಬ್ಬರು ಕೋವಿಡ್​​ನಿಂದ (Covid 19) ಬಳಲುತ್ತಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ. ರಾಜ್ಯದ ಹೆಚ್ಚಿನ ಕುಟುಂಬಗಳಲ್ಲಿ ಒಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿ ಕೋವಿಡ್ ಅಥವಾ ಇತರ ವೈರಲ್, ಜ್ವರದಂಥ ರೋಗಲಕ್ಷಣ ಹೊಂದಿದ್ದಾರೆ ಎಂದು ಲೋಕಲ್ ಸರ್ಕಲ್ಸ್ ಸಮೀಕ್ಷೆ ತಿಳಿಸಿದೆ.

ಕೋವಿಡ್/ ಫ್ಲೂ /ವೈರಲ್ ಜ್ವರದ ಲಕ್ಷಣಗಳಾದ ಮೂಗು ಸ್ರವಿಸುವಿಕೆ, ಗಂಟಲು ನೋವು, ಕೆಮ್ಮು, ತಲೆನೋವು, ಕೀಲು ನೋವು, ದೇಹ ನೋವು, ಉಸಿರಾಟದ ಸಮಸ್ಯೆಗಳನ್ನು ಕುಟುಂಬದ ಸದಸ್ಯರು ಹೊಂದಿರುವುದಾಗಿ ಸಮೀಕ್ಷೆಯಲ್ಲಿ ಭಾಗವಹಿಸಿರುವವರು ತಿಳಿಸಿದ್ದಾರೆ.

ಒಟ್ಟು 3,783 ಸಮೀಕ್ಷೆಯಲ್ಲಿ ಭಾಗವಹಿಸಿದ್ದು, ಶೇ 23 ರಷ್ಟು ಜನರು ಅವರ ಮನೆಯಲ್ಲಿ ‘ನಾಲ್ಕು ಮಂದಿ ಅಥವಾ ಹೆಚ್ಚಿನ ವ್ಯಕ್ತಿಗಳು’ ಒಂದು ಅಥವಾ ಹೆಚ್ಚಿನ ಕೋವಿಡ್ / ವೈರಲ್ ಜ್ವರ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಶೇ 23ರಷ್ಟು ಮಂದಿ ಎರಡು-ಮೂರು ಸದಸ್ಯರು ರೋಗ ಲಕ್ಷಣ ಹೊಂದಿರುವುದಾಗಿ ಉತ್ತರಿಸಿದ್ದಾರೆ. ಶೇ 8 ರಷ್ಟು ಮಂದಿ, ಒಬ್ಬ ವ್ಯಕ್ತಿ ರೋಗ ಲಕ್ಷಣ ಹೊಂದಿರುವ ಸುಳಿವು ನೀಡಿದ್ದಾರೆ ಮತ್ತು ಶೇ 46 ರಷ್ಟು ಜನರು ಕುಟುಂಬದಲ್ಲಿ ರೋಗ ಲಕ್ಷಣ ಹೊಂದಿರುವವರು ಯಾರೂ ಇಲ್ಲ ಎಂದು ಉತ್ತರಿಸಿದ್ದಾರೆ.

2023ರ ಆಗಸ್ಟ್‌ನಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಸಮೀಕ್ಷೆಯನ್ನು ನಡೆಸಲಾಗಿತ್ತು. ಆಗ, ಶೇ 33 ಕುಟುಂಬಗಳ ಒಬ್ಬ ಅಥವಾ ಹೆಚ್ಚಿನ ವ್ಯಕ್ತಿಗಳು ಕೋವಿಡ್ ಅಥವಾ ವೈರಲ್ ರೋಗಲಕ್ಷಣಗ ಹೊಂದಿರುವುದು ಕಂಡುಬಂದಿತ್ತು. ಆದರೆ ಈ ಬಾರಿ ಪ್ರಮಾಣ ಶೇ 54 ರಷ್ಟಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ 298 ಹೊಸ ಕೊವಿಡ್​ ಕೇಸ್ ಪತ್ತೆ: ನಾಲ್ವರು ಸಾವು

ಕೊರೊನಾ ವೈರಸ್​​ನ ಒಮಿಕ್ರಾನ್ ರೂಪಾಂತರ ಜೆಎನ್​.1 ಹರಡುವಿಕೆ ತೀವ್ರಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಗುರುವಾರ ಹೊಸದಾಗಿ 298 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ