ರಾಜ್ಯದಲ್ಲಿ ಇಂದು ಹೊಸದಾಗಿ 755 ಜನರಿಗೆ ಕೊರೊನಾ ದೃಢ
ರಾಜ್ಯದಲ್ಲಿ ಇಂದು ಹೊಸದಾಗಿ 755 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,21,128ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 755 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,21,128ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.
ಇಂದು ಕೊರೊನಾ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ 12,099 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಜೊತೆಗೆ, ಸೋಂಕಿತರ ಪೈಕಿ 8,98,176 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 10,834 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ಇತ್ತ, ರಾಜ್ಯ ರಾಜಧಾನಿಯಲ್ಲಿ ಇಂದು ಹೊಸದಾಗಿ 343 ಕೊರೊನಾ ಕೇಸ್ಗಳು ಪತ್ತೆಯಾಗಿದೆ. ಇದೀಗ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 3,89,193ಕ್ಕೇರಿದೆ. ಜೊತೆಗೆ, ಬೆಂಗಳೂರಿನಲ್ಲಿ ಇಂದು ಸೋಂಕಿಗೆ ಒಬ್ಬರು ಬಲಿಯಾಗಿದ್ದು ಕೊರೊನಾದಿಂದ ಈವರೆಗೆ 4,322 ಜನರು ಕೊನೆಯುಸಿರೆಳೆದಿದ್ದಾರೆ.
ಇದಲ್ಲದೆ, 3,89,193 ಸೋಂಕಿತರ ಪೈಕಿ 3,77,906 ಜನರು ಗುಣಮುಖರಾಗಿದ್ದು 6,964 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ದೊರೆತಿದೆ.
ಕೊರೊನಾ ಮಧ್ಯೆ ಶಾಲೆ ಆರಂಭ: ದತ್ತು ಪಡೆದ ಶಾಲೆಗಳಲ್ಲಿ ಆದ ಬದಲಾವಣೆಗಳೇನು ಗೊತ್ತಾ?