Karnataka Coronavirus Update: ಕರ್ನಾಟಕದಲ್ಲಿ ಇಂದು 6,955 ಜನರಿಗೆ ಕೊರೊನಾ ದೃಢ; 36 ಜನರು ಸಾವು
ಇಂದು ಒಂದೇ ದಿನ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 36 ಜನರ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,849 ಜನರ ಮೃತಪಟ್ಟಂತಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 6,955 ಜನರಿಗೆ ಕೊರೊನಾ ದೃಢಪಟ್ಟಿದೆ. ಈಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10,55,040ಕ್ಕೇರಿಕೆಯಾಗಿದೆ.ಇಂದು ಒಂದೇ ದಿನ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 36 ಜನರ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,849 ಜನರ ಮೃತಪಟ್ಟಂತಾಗಿದೆ. ಈವರೆಗೆ ಸೋಂಕಿತರ ಪೈಕಿ 9,80,519 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 61,653 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಒಂದರಲ್ಲೇ ಶಾಸಕ ಡಾ.ಕೆ.ಶ್ರೀನಿವಾಸ್ ಮೂರ್ತಿ ಸೇರಿದಂತೆ 26ಜನ ಪುರುಷರಿಗೆ 17ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ. ಮೈಸೂರು ಜಿಲ್ಲೆಯಲ್ಲಿ ಇಂದು 266 ಜನರಿಗೆ ಕೊರೊನಾ ದೃಢಪಟ್ಟಿದ್ದು, ಮೈಸೂರು ಜಿಲ್ಲೆಯ ಸೋಂಕಿತರ ಸಂಖ್ಯೆ 57,934ಕ್ಕೇರಿಕೆಯಾಗಿದೆ. 57,934 ಸೋಂಕಿತರ ಪೈಕಿ 55,026 ಜನರು ಗುಣಮುಖರಾಗಿದ್ದಾರೆ. ಅಲ್ಲದೆ ಮೈಸೂರು ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಐವರ ಬಲಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ 1,080 ಜನರ ಸಾವನ್ನಪ್ಪಿದಂತಾಗಿದೆ. ಮೈಸೂರು ಜಿಲ್ಲೆಯಲ್ಲಿ 1,828 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು 51 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ ಉಡುಪಿಯ ಕೊರೊನಾ ಸೋಂಕಿತರ ಸಂಖ್ಯೆ 25,880ಕ್ಕೇರಿಕೆಯಾಗಿದೆ.ಜಿಲ್ಲೆಯಲ್ಲಿ ಇದುವರೆಗೆ 25,341 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ ಕೊರೊನಾ ಸೋಂಕಿಗೆ 192 ಜನ ಬಲಿಯಾಗಿದ್ದಾರೆ. ಒಟ್ಟು 347 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಡುಪಿ ಡಿಹೆಚ್ಒ ಡಾ.ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ತುಮಕೂರು ಜಿಲ್ಲೆಯಲ್ಲಿಂದು 143 ಜನರಿಗೆ ಕೊರೊನಾ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 27,114ಕ್ಕೇರಿಕೆಯಾಗಿದೆ. ಇದುವರೆಗೆ 25,311 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ ಕೊರೊನಾ ಸೋಂಕಿಗೆ 268 ಜನ ಬಲಿಯಾಗಿದ್ದಾರೆ. ಒಟ್ಟು 1,336 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ ಜಿಲ್ಲೆಯಲ್ಲಿ ಇವತ್ತು ಹದಿನಾರು ಜನರಲ್ಲಿ ಕೊರೊನಾ ಸೋಂಕು ದೃಢಪಪಟ್ಟಿದೆ. ರಾಣೆಬೆನ್ನೂರು ತಾಲೂಕಿನಲ್ಲಿ 9, ಹಾನಗಲ್ ತಾಲೂಕಿನಲ್ಲಿ 3 ಮತ್ತು ಶಿಗ್ಗಾಂವಿ ತಾಲೂಕಿನಲ್ಲಿ ಇಬ್ಬರಿಗೆ ಸೋಂಕು ಖಚಿತವಾಗಿದೆ. ಬ್ಯಾಡಗಿ ಮತ್ತು ಹಾವೇರಿ ತಾಲೂಕಿನಲ್ಲಿ ತಲಾ ಒಬ್ಬರಲ್ಲಿ ದೃಢಪಟ್ಟ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 81 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿ ಈವರೆಗೆ 11398 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಘವೇಂದ್ರಸ್ವಾಮಿ ಎಚ್.ಎಸ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಕೊವಿಡ್ ನಿಯಮ ಪಾಲಿಸದಿದ್ದರೆ ಕ್ರಮ: ರಾಜಕಾರಣಿಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ
ಕೊವಿಡ್ ಲಸಿಕೆಗೆ ಹೆಚ್ಚಿದ ಬೇಡಿಕೆ; ಕೊವ್ಯಾಕ್ಸ್ ಮೂಲಕ ಎಲ್ಲ ದೇಶಗಳಿಗೆ ಲಸಿಕೆ ಪೂರೈಕೆ: ವಿಶ್ವ ಆರೋಗ್ಯ ಸಂಸ್ಥೆ
(Karnataka Covid 19 update 36 people died by corona today)
Published On - 8:20 pm, Sat, 10 April 21