Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢ, 476 ಜನರು ನಿಧನ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on:May 17, 2021 | 8:53 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 38,603 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಸೋಂಕಿನಿಂದ 476 ಜನರು ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 13,338 ಜನರಿಗೆ ಕೊವಿಡ್ ದೃಢಪಟ್ಟಿದ್ದು, 239 ಜನರು ಅಸುನೀಗಿದ್ದಾರೆ. ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಕೊವಿಡ್ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರನ್ನೂ ಸೇರಿಸಿ ಈವರೆಗೆ ರಾಜ್ಯದ ಕೊವಿಡ್ ಸೋಂಕಿತರ ಸಂಖ್ಯೆ 22,42,065ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಈವರೆಗೆ 16,16,092 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 22,313 ಜನರ ಸಾವನ್ನಪ್ಪಿದಂತಾಗಿದೆ. ಸದ್ಯ ರಾಜ್ಯದ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ 6, 03,639 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ ಬೆಂಗಳೂರು ನಗರ ಜಿಲ್ಲೆ 13,338, ಹಾಸನ 2,324 , ಬಳ್ಳಾರಿ 2,322, ಮೈಸೂರು 1,980, ತುಮಕೂರು 1,915, ಬೆಳಗಾವಿ 1,748, ಶಿವಮೊಗ್ಗ 1,322, ಉತ್ತರ ಕನ್ನಡ 1,288, ಮಂಡ್ಯ 1,087, ಧಾರವಾಡ 972, ಉಡುಪಿ 897, ದಕ್ಷಿಣ ಕನ್ನಡ 817, ಚಿಕ್ಕಬಳ್ಳಾಪುರ 799, ದಾವಣಗೆರೆ 747,  ಚಿಕ್ಕಮಗಳೂರು 732, ಕೋಲಾರ 713, ಕಲಬುರಗಿ 695, ರಾಯಚೂರು 562, ಚಾಮರಾಜನಗರ 516, ಗದಗ 475, ಕೊಪ್ಪಳ 470, ಕೊಡಗು 442, ಬೆಂಗಳೂರು ಗ್ರಾಮಾಂತರ 426, ಚಿತ್ರದುರ್ಗ 407, ರಾಮನಗರ 397, ಯಾದಗಿರಿ 360, ಬಾಗಲಕೋಟೆ 305, ವಿಜಯಪುರ 233, ಬೀದರ್ 172 , ಹಾವೇರಿ ಜಿಲ್ಲೆಯಲ್ಲಿ ಇಂದು 142 ಜನರಿಗೆ ಕೊರೊನಾ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಮೃತರ ವಿವರ

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 476 ಜನರ ಸಾವನ್ನಪ್ಪಿದ್ದು,  ಬೆಂಗಳೂರು ನಗರ ಜಿಲ್ಲೆಯಲ್ಲಿ  239, ಹಾಸನ ಜಿಲ್ಲೆ  29 , ಬಳ್ಳಾರಿ ಜಿಲ್ಲೆ 17,  ಕಲಬುರಗಿ, ಉತ್ತರ ಕನ್ನಡ , ಶಿವಮೊಗ್ಗ ಜಿಲ್ಲೆ 15, ತುಮಕೂರು ಜಿಲ್ಲೆ 14, ಬೆಂಗಳೂರು ಗ್ರಾಮಾಂತರ ಜಿಲ್ಲೆ 13, ಹಾವೇರಿ, ಮಂಡ್ಯ ಜಿಲ್ಲೆ 10, ವಿಜಯಪುರ ಜಿಲ್ಲೆ 9, ಚಾಮರಾಜನಗರ, ಕೋಲಾರ ಜಿಲ್ಲೆ 8, ಬೆಳಗಾವಿ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ರಾಮನಗರ, ಯಾದಗಿರಿ  ಜಿಲ್ಲೆ 6, ಧಾರವಾಡ, ಮೈಸೂರು, ಉಡುಪಿ ಜಿಲ್ಲೆ 5, ಬಾಗಲಕೋಟೆ, ಬೀದರ್, ಗದಗ, ಕೊಡಗು, ರಾಯಚೂರು ಜಿಲ್ಲೆ 4, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆ 3, ಕೊಪ್ಪಳ ಜಿಲ್ಲೆ 2, ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವ ಕೊವಿಡ್​ನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲೇ ಉತ್ಪಾದನೆ ಆಗಲಿದೆ ರಾಜ್ಯಕ್ಕೆ ಅಗತ್ಯವಿರುವ ಸ್ಪುಟ್ನಿಕ್ ಕೊವಿಡ್ ಲಸಿಕೆ

ಕೊವಿಡ್​ನಿಂದ ಜನರನ್ನು ಉಳಿಸಲು ಏನ್ಮಾಡ್ತಿದ್ದೀರಾ? ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಪ್ರಶ್ನೆ

(Karnataka Covid 19 update 38603 new cases and 476 deaths in last 24 hours)

Published On - 8:30 pm, Mon, 17 May 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?