Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 41,779 ಜನರಿಗೆ ಕೊವಿಡ್ ದೃಢ, 373 ಜನರು ನಿಧನ

Bengaluru CoronaVirus Update: ಬೆಂಗಳೂರು ನಗರ ಜಿಲ್ಲೆಯಲ್ಲಿ  ಕಳೆದ 24 ಗಂಟೆಗಳಲ್ಲಿ 14,316 ಜನರಿಗೆ ಸೋಂಕು ತಗುಲಿದ್ದು ಖಚಿತಪಟ್ಟಿದ್ದು, 121 ಜನರು ಅಸು ನೀಗಿದ್ದಾರೆ.

Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 41,779 ಜನರಿಗೆ ಕೊವಿಡ್ ದೃಢ, 373 ಜನರು ನಿಧನ
ಕೊವಿಡ್ ಲಸಿಕೆ ಹಾಕಿಸಿಕೊಳ್ಳೋಣ
Follow us
guruganesh bhat
|

Updated on:May 14, 2021 | 8:06 PM

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ  41,779 ಜನರಿಗೆ ಕೊವಿಡ್ ಸೋಂಕು ಖಚಿತಪಟ್ಟಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ ಕೊರೊನಾದಿಂದ 373 ಜನರು ನಿಧನರಾಗಿದ್ದಾರೆ.ಬೆಂಗಳೂರು ನಗರ ಜಿಲ್ಲೆಯಲ್ಲಿ  ಕಳೆದ 24 ಗಂಟೆಗಳಲ್ಲಿ 14,316 ಜನರಿಗೆ ಸೋಂಕು ತಗುಲಿದ್ದು ಖಚಿತಪಟ್ಟಿದ್ದು, 121 ಜನರು ಅಸು ನೀಗಿದ್ದಾರೆ. ಇಂದಿನ ಸೋಂಕಿತರ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾಕ್ಕೆ ತುತ್ತಾದವರ ಸಂಖ್ಯೆ 21,30,267ಕ್ಕೆ ಏರಿಕೆಯಾಗಿದೆ. ಜತೆಗೆ ಈವರೆಗೆ 15,10,557 ಜನರು ಗುಣಮುಖರಾಗಿದ್ದಾರೆ.  5,98,605 ಸೋಂಕಿತರಿಗೆ ರಾಜ್ಯದ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಎಲ್ಲದರ ಜತೆಗೆ ಪ್ರಮುಖವಾಗಿ ಹೇಳಲೇಬೇಕಾದ ಅಂಶವೆಂದರೆ ಕಳೆದ 24 ಗಂಟೆಗಳಲ್ಲಿ 35,879 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಜಿಲ್ಲಾವಾರು ಸೋಂಕಿತರ ವಿವರ ಬೆಂಗಳೂರು ನಗರ ಜಿಲ್ಲೆ 14,316, ತುಮಕೂರು 2,668,  ಬಳ್ಳಾರಿ 2,421, ಮೈಸೂರು 2,340, ಬೆಳಗಾವಿ 1,592, ಮಂಡ್ಯ 1,385, ಹಾಸನ 1,339, ಉಡುಪಿ 1,219, ದಕ್ಷಿಣ ಕನ್ನಡ 1,215, ರಾಯಚೂರು 1,063, ಕಲಬುರಗಿ 929, ಧಾರವಾಡ 829, ಚಿಕ್ಕಮಗಳೂರು 835, ಉತ್ತರ ಕನ್ನಡ 78, ಬಾಗಲಕೋಟೆ 773, ಚಾಮರಾಜನಗರ ಜಿಲ್ಲೆ 713, ಬೆಂಗಳೂರು ಗ್ರಾಮಾಂತರ 707, ಯಾದಗಿರಿ 68,  ಚಿಕ್ಕಬಳ್ಳಾಪುರ 676, ಗದಗ 591, ದಾವಣಗೆರೆ 581, ಕೊಡಗು 539, ಕೊಪ್ಪಳ 495, ರಾಮನಗರ 459, ಶಿವಮೊಗ್ಗ 459, ವಿಜಯಪುರ 444, ಚಿತ್ರದುರ್ಗ 314,​ ಕೋಲಾರ 306, ಹಾವೇರಿ 292, ಬೀದರ್ 223 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಮೃತರ ವಿವರ ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 373 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ 121, ಬಳ್ಳಾರಿ 26 , ಕಲಬುರಗಿ ಜಿಲ್ಲೆ 21 , ಹಾಸನ ಜಿಲ್ಲೆ 20, ತುಮಕೂರು ಜಿಲ್ಲೆ 19,  ಉತ್ತರ ಕನ್ನಡ ಜಿಲ್ಲೆ 15, ಬಾಗಲಕೋಟೆ ಜಿಲ್ಲೆ 14, ಮಂಡ್ಯ ಜಿಲ್ಲೆ, ರಾಮನಗರ ಜಿಲ್ಲೆ 13, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು ಜಿಲ್ಲೆ 12,  ಹಾವೇರಿ, ವಿಜಯಪುರ ಜಿಲ್ಲೆಯಲ್ಲಿ ತಲಾ 9, ಕೊಡಗು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ತಲಾ 6, ಚಿಕ್ಕಬಳ್ಳಾಪುರ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಐವರು, ಬೆಳಗಾವಿ, ಬೀದರ್ ಜಿಲ್ಲೆಯಲ್ಲಿ ಇಂದು ತಲಾ ನಾಲ್ವರು, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ತಲಾ ಮೂವರು ,ದಕ್ಷಿಣಕನ್ನಡ, ರಾಯಚೂರು ಜಿಲ್ಲೆಯಲ್ಲಿ ತಲಾ ಮೂವರು, ಚಿತ್ರದುರ್ಗ ಜಿಲ್ಲೆ ಇಬ್ಬರು, ದಾವಣಗೆರೆ, ಕೋಲಾರ ಜಿಲ್ಲೆಯಲ್ಲಿಂದು ತಲಾ ಒಬ್ಬರು ನಿಧನರಾಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ 21,085 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Mahadev Prakash: ಸಿಎಂ ಯಡಿಯೂರಪ್ಪರ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ​ ಪ್ರಕಾಶ್ ಕೊವಿಡ್​ನಿಂದ ನಿಧನ 

ಬಿಪಿಎಲ್ ಕಾರ್ಡ್​ದಾರರಿಗೆ ನೀಡುವ ಅಕ್ಕಿಯ ಪ್ರಮಾಣ 5ರಿಂದ 10 ಕೆ.ಜಿಗೆ ಹೆಚ್ಚಳ (Karnataka Covid – 19 Update 41779 new cases and 373 death in last 24 hours)

Published On - 7:48 pm, Fri, 14 May 21

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು